ಫ್ಯಾಕ್ಟ್‌ಚೆಕ್: ಟಿ20 ವಿಶ್ವಕಪ್ ಸೋಲಿನ ನಂತರ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿದ್ದಾರೆ ಎಂದು ಸುಳ್ಳು ಸುದ್ದಿ ಹಂಚಿಕೆ

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 ನವೆಂಬರ್ 10 ರಂದು ನಡೆದ ಎರಡನೇ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. ನವೆಂಬರ್ 13 ರಂದು ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ಫೈನಲ್ ಪಂದ್ಯ ನಡೆಯಲಿದೆ. 2022 ರ T20 ವಿಶ್ವಕಪ್‌ನಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ದ ಹೀನಾಯ ಸೋಲು ಅನುಭವಿಸಿ ಟೂರ್ನಿಯಿಂದ ನಿರ್ಗವಿಸಿದ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಪ್ರಸಾರ ಮಾಡಲಾಗಿದೆ.

“ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.” ಎಂದು ಫೇಸ್‌ಬುಕ್ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು, ಈ ಹೇಳಿಕೆ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆಯನ್ನುಖಚಿತಪಡಿಸಿಕೊಳ್ಳಲು ಗೂಗಲ್ ಸರ್ಚ್ ಮಾಡಿದಾಗ, 2022 ರ T20 ವಿಶ್ವಕಪ್ ಸೋಲಿನ ನಂತರ ಕೊಹ್ಲಿ ನಿವೃತ್ತಿ ಘೋಷಿಸುವ ಬಗ್ಗೆ ಯಾವುದೇ ಸುದ್ದಿ ಕಂಡುಬಂದಿಲ್ಲ.

ಇದಲ್ಲದೆ, ಕೀಫ್ರೇಮ್‌ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ಗಲ್ಫ್ ನ್ಯೂಸ್‌ನ ಪರಿಶೀಲಿಸಿದ YouTube ಚಾನಲ್‌ನಿಂದ ಸೆಪ್ಟೆಂಬರ್ 4 ರಂದು ಪ್ರಕಟಿಸಲಾದ ವೀಡಿಯೊವನ್ನು ಕಂಡುಕೊಂಡಿದ್ದೇವೆ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯದ ನಂತರ ಕೊಹ್ಲಿ ದುಬೈನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು ಎಂದು ವಿವರಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 4 ರಂದು ಪ್ರಕಟಿಸಲಾದ ESPN Cricinfo ನಲ್ಲಿ ಅದೇ ವೀಡಿಯೊವನ್ನು ಕಂಡುಬಂದಿದ್ದು, ಶೀರ್ಷಿಕೆಯಲ್ಲಿ “ಕೊಹ್ಲಿ ತನ್ನ ಟೀಕಾಕಾರರಿಗೆ ಉತ್ತರಿಸುತ್ತಾ ‘ನಾನು ಈ ವಿಷಯಗಳ ಬಗ್ಗೆ ಎಂದಿಗೂ ಗಮನ ಹರಿಸಿಲ್ಲ’ ಎಂದು ಹೇಳಿರುವುದನ್ನು ಕೇಳಬಹುದು. ವೈರಲ್ ವಿಡಿಯೋದಲ್ಲಿ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ ಎಂದು ತಿರುಚಿದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ, “ನಿಜವಾಗಿಯೂ ಟೀಕಾಕಾರರತ್ತ ಗಮನ ಹರಿಸಿಲ್ಲ. ನಾನು 14 ವರ್ಷಗಳಿಂದ ಆಡಿದ್ದೇನೆ ಮತ್ತು ಅದು ಆಕಸ್ಮಿಕವಾಗಿ ಸಂಭವಿಸುವುದಿಲ್ಲ. ನನ್ನ ಆಟದಲ್ಲಿ ಶ್ರಮಿಸುವುದು ನನ್ನ ಕೆಲಸ, ನಾನು ಆಡಲು ಉತ್ಸುಕನಾಗಿದ್ದೇನೆ, ನನ್ನ ತಂಡವನ್ನು ಸುಧಾರಿಸಲು ಉತ್ಸುಕನಾಗಿದ್ದೇನೆ ಮತ್ತು ನಾನು ಅದನ್ನು ಮುಂದುವರಿಸಲಿದ್ದೇನೆ” ಎಂದಿದ್ದಾರೆ.

ಭಾರತವು T20 ವಿಶ್ವಕಪ್‌ನಿಂದ ನಿರ್ಗಮಿಸಿದ ನಂತರ, ಕ್ರಿಕೆಟ್ ಅಭಿಮಾನಿಗಳು ಭಾರತ ತಂಡದ ಸಾಮರ್ಥ್ಯವನ್ನು ಪ್ರಶ್ನಿಸಿದ್ದು ಉತ್ತಮ ಪ್ರದರ್ಶನ ನೀಡುವ ಆಟಗಾರರನ್ನು ಆಯ್ಕೆ ಮಾಡಲು ಒತ್ತಾಯಿಸಿದ್ದಾರೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಅವರಂತಹ ಹಿರಿಯ ಆಟಗಾರರು ಟಿ 20 ಗೆ ನಿವೃತ್ತಿ ಘೋಷಿಸಬಹುದು ಎಂಬ ಊಹಾಪೋಹ ಎದ್ದಿವೆ ಆದರೆ ಇದು ಕೇವಲ ವದಂತಿ ಎಂದು ಮೂಲಗಳು ತಿಳಿಸಿವೆ.

ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, “ಸೆಮಿ-ಫೈನಲ್ ಪಂದ್ಯದ ಮುನ್ನ ಈ ಎಲ್ಲಾ ಆಟಗಾರರು ಅದ್ಭುತ ಪ್ರದರ್ಶನ ನೀಡಿದ್ದಾರೆ. ನಿವೃತ್ತಿ ಬಗ್ಗೆ ಮಾತನಾಡಲು ಸಾಕಷ್ಟು ಕಾಲಾವಕಾಶವಿದೆ. ಉತ್ತಮ ಆಟಗಾರರು ಇಲ್ಲಿದ್ದಾರೆ. ಈ ವಿಷಯದ ಬಗ್ಗೆ ಮಾತನಾಡಲು ಇದು ಸರಿಯಾದ ಸಮಯವಲ್ಲ. ನಾವು ಮುಂದೆ ಹೋಗುವಾಗ ನಮಗೆ ಸಾಕಷ್ಟು ಸಮಯವಿದೆ, ಸಾಕಷ್ಟು ಪಂದ್ಯಗಳು ಮತ್ತು ಮುಂದಿನ ವಿಶ್ವಕಪ್‌ಗೆ ತಯಾರಿ ಮಾಡಲು ಪ್ರಯತ್ನಿಸುತ್ತೇವೆ” ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈಲ್ ಆಗಿರುವ ವಿಡಿಯೋ,  2022 ರ ಸೆಪ್ಟೆಂಬರ್ ನಲ್ಲಿ ನಡೆದ ಏಷ್ಯಾ ಕಪ್‌ನ ಪತ್ರಿಕಾಗೋಷ್ಠಿಯ ಕ್ಲಿಪ್ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಟಿ 20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತದ ಸೋಲಿನ ನಂತರ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ ಎಂಬ ಹೇಳಿಕೆ ಸುಳ್ಳು.

ಕೃಪೆ: ನ್ಯೂಸ್ ಮೀಟರ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಗೋವಾದ ಕಡಲ ತೀರಗಳಲ್ಲಿ ಮದ್ಯಪಾನ ನಿಷೇದ ಮಾಡಲಾಗಿದೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights