ಫ್ಯಾಕ್ಟ್‌ಚೆಕ್ : ಮೋದಿ ಮಾಡಿದ ಒಂದೇ ಒಂದು ಪೋನ್ ಕಾಲ್‌ಗೆ ರಷ್ಯಾ ಯುದ್ದವನ್ನು ನಿಲ್ಲಿಸಿತೆಂದು ಸುಳ್ಳು ಪ್ರಚಾರ ಮಾಡುತ್ತಿರುವ BJP ನಾಯಕರು

ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಎಲ್ಲಾ ಪಕ್ಷಗಳು ಚುನಾವಣಾ ಅಖಾಡಕ್ಕೆ ಸಜ್ಜಾಗುತ್ತಿವೆ. ಚುನಾವಣಾ ಪ್ರಚಾರದಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ BJP ರಷ್ಯಾ ಮತ್ತು ಉಕ್ರೇನ್‌ ಯುದ್ದದ ಸಂದರ್ಭವನ್ನು ಟ್ವೀಟ್ ಮಾಡಿದೆ. BJP ರಾಷ್ಟ್ರೀಯ ಅಧ್ಯಕ್ಷ JP ನಡ್ಡಾ  ಹೇಳಿಕೆಯನ್ನು BJP ಟ್ವಿಟರ್‌ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿದೆ.

ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆದ ಯುದ್ದದ ಸಂದರ್ಭದಲ್ಲಿ ನಮ್ಮ ದೇಶದ 32 ಸಾವಿರ ಮಕ್ಕಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಆಗ ನಮ್ಮ ಪ್ರಧಾನಿ ಮೋದಿ ಪುಟಿನ್  ಝೆಲೆನ್ಸ್ಕಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯುದ್ಧವನ್ನು ನಿಲ್ಲಿಸುವಂತೆ ಮಾತುಕತೆ ನಡೆಸಿದರು. ಇದರ ಪರಿಣಾಮು ಉಭಯ ದೇಶಗಳು 6 ಗಂಟೆಗಳ ಕಾಲ ಯುದ್ದವನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು. ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದ ನ್ಯೂಸ್ 18ಗೆ  ನೀಡಿದ ಸಂದರ್ಶನದಲ್ಲಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೋರಿಕೆಯ ಮೇರೆಗೆ ಭಾರತದ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ಅನುಕೂಲವಾಗುವಂತೆ ರಷ್ಯಾ ಮತ್ತು ಉಕ್ರೇನ್ 72 ಗಂಟೆಗಳ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದವು ಎಂದು ಹೇಳಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಗೌರವದ ವಿಷಯವಾಗಿದೆ ಮತ್ತು ಪ್ರಪಂಚದಾದ್ಯಂತ ಭಾರತದ ಹೆಚ್ಚುತ್ತಿರುವ ಪ್ರಭಾವಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ. ಅವರು ದೀರ್ಘಕಾಲದವರೆಗೆ ಇತರ ದೇಶಗಳೊಂದಿಗೆ ಭಾರತದ ರಾಜತಾಂತ್ರಿಕ ಸಂಬಂಧಗಳನ್ನು ಅನುಸರಿಸುತ್ತಿದ್ದಾರೆ ಎಂದು ಅವರು ಹೇಳಿದರು, ಆದರೆ ಇದು ಅಭೂತಪೂರ್ವವಾಗಿದೆ.

ಅಂತೆಯೇ, BJPLive, BJP ರಾಜಸ್ಥಾನ, ದರ್ಭಾಂಗದ ಬಿಜೆಪಿ ಸಂಸದ ಗೋಪಾಲ್ ಜೀ ಠಾಕೂರ್, ಬಿಹಾರದ ಚನ್ಪಾಟಿಯಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉಮಾಕಾಂತ್ ಸಿಂಗ್ ಮತ್ತು ಇತರರು ತಮ್ಮ ಟ್ವೀಟ್‌ಗಳಲ್ಲಿ ನಡ್ಡಾ ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ಗಳಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

BJP ರಾಷ್ಟ್ರೀಯ ಅಧ್ಯಕ್ಷ JP ನಡ್ಡಾ ಅವರ ಹೇಳಿಕೆಯನ್ನು ಪರಿಶೀಲಿಸುವ ಮೊದಲು ಕಳೆದ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ನಡೆದ ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ದ ನಡೆಯುತ್ತಿದ್ದ ಸಂದರ್ಭದಲ್ಲಿ ಹಲವು ಮಾಧ್ಯಮಗಳು ಇದೇ ರೀತಿಯ ಪ್ರತಿಪಾದನೆಯೊಂದಿಗೆ ಸುದ್ದಿ ಮತ್ತು  ಪೋಸ್ಟ್‌ಗಳನ್ನು ಮಾಡುವ ಮೂಲಕ ರಷ್ಯಾ ಮತ್ತು ಉಕ್ರೇನ್ ದೇಶಗಳು 6 ಗಂಟೆಗಳ ಕಾಲ ಯುದ್ದವನ್ನು ನಿಲ್ಲಿಸುವ ಮೂಲಕ ಭಾತೀಯ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಅವಕಾಶ ಮಾಡಿಕೊಟ್ಟಿವೆ ಎಂದು ವರದಿಗಳನ್ನು ಪ್ರಸಾರಮಾಡಿದ್ದವು.

“ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿ , ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ವಿಷಯವನ್ನು ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದಾರೆ. ಸಾಧ್ಯವಿರುವ ಎಲ್ಲಾ ನೆರವು ನೀಡಲು ರಷ್ಯಾ ಸಿದ್ಧವಿದೆ ಎಂದು ರಷ್ಯಾ ಅಧ್ಯಕ್ಷರು ಪ್ರಧಾನಿಗೆ ತಿಳಿಸಿದ್ದಾರೆ ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವರದಿ ಮಾಡಿತ್ತು.

 

ಪೋಸ್ಟ್‌ಕಾರ್ಡ್ ಕನ್ನಡ ಸೋಶಿಯಲ್‌ ಮೀಡಿಯಾ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ಕೂಡ ಇದೇ ರೀತಿ ಟ್ವೀಟ್ ಮಾಡುವ ಮೂಲಕ  “ಚೀನಾ, ಯುಎಸ್ಎ, ಯುಕೆ ಮುಂತಾದ ರಾಷ್ಟ್ರಗಳು ಉಕ್ರೇನ್‌ಗೆ ಪ್ರವೇಶಿಸಲು ಹೆದರಿದಾಗ, ಭಾರತವು ತನ್ನ 60% ಕ್ಕಿಂತ ಹೆಚ್ಚು ನಾಗರಿಕರನ್ನು ಉಕ್ರೇನ್‌ನಿಂದ ಸ್ಥಳಾಂತರಿಸುವಲ್ಲಿ ಯಶಸ್ವಿಯಾಯಿತು. ಈಗ ಭಾರತದ ಪ್ರಧಾನಿ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಎಲ್ಲಾ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳವನ್ನು ತಲುಪಿಸುವ ಕಾರಣ 6 ಗಂಟೆಗಳ ಕಾಲ ಯುದ್ಧವನ್ನು ನಿಲ್ಲಿಸುವಲ್ಲಿ ಯಶಸ್ವಿಯಾದರು” ಎಂದು ಟ್ವೀಟ್ ಮಾಡಿದ್ದರು.

 

ಈ ಹಿಂದೆ, ಭಾರತೀಯ ಪತ್ರಕರ್ತರು ಮತ್ತು ಮಾಧ್ಯಮಗಳು ಭಾರತೀಯ ನಾಗರಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ರಷ್ಯಾ “ಯುದ್ಧವನ್ನು 6 ಗಂಟೆಗಳ ಕಾಲ ನಿಲ್ಲಿಸಿದೆ” ಎಂದು ತಪ್ಪಾಗಿ ಹೇಳಿಕೊಂಡಿದ್ದವು. ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರು ಈ ಪ್ರತಿಪಾದನೆಯನ್ನು ನಿರಾಕರಿಸಿದ್ದರು. ಈ ಹೇಳಿಕೆಯನ್ನು ಕೆಳಗಿನ ವೀಡಿಯೊದಲ್ಲಿ 21 ನಿಮಿಷ 18 ಸೆಕೆಂಡುಗಳಿಂದ ನೋಡಬಹುದಾಗಿದೆ.  ಆದರೆ BJP ಸುಳ್ಳನ್ನು BJP ತನ್ನ ಚುನಾವಣಾ ರ್ಯಾಲಿಗಳಲ್ಲಿ ಪುನರಾವರ್ತಿಸುತ್ತಿದೆ.

ಮಾರ್ಚ್ 3, 2022 ರಂದು ಆಪರೇಷನ್ ಗಂಗಾ ಕುರಿತು ವಿಶೇಷ ಬ್ರೀಫಿಂಗ್‌ನಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಭಾರತದ ಆಜ್ಞೆಯ ಮೇರೆಗೆ ರಷ್ಯಾ ಅಥವಾ ಉಕ್ರೇನ್ ಯುದ್ದವನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದರು. ಅದನ್ನು ಕೆಳಗಿನ ವಿಡಿಯೋದಲ್ಲಿ ನೋಡಬಹುದು.

ಮಾರ್ಚ್ 2022 ರಲ್ಲಿ ಹಲವು ಮಾಧ್ಯಮ ಸಂಸ್ಥೆಗಳು ‘ಕದನ ವಿರಾಮ’ ವನ್ನು ಪ್ರತಿಪಾದಿಸಿ ಸಲ್ಲಿಸಿದ ನಂತರ, ಆಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ವರದಿಯನ್ನು ಪ್ರಕಟಿಸಿತ್ತು. ನಮ್ಮ ಏನ್ ಸುದ್ದಿ.ಕಾಂ ಕೂಡ ಫ್ಯಾಕ್ಟ್‌ಚೆಕ್ ಮಾಡುವ ಮೂಲಕ ರಷ್ಯಾ ಮತ್ತು ಉಕ್ರೇನ್ ಯುದ್ದವನ್ನು ನಿಲ್ಲಿದೆ ಎಂದು ಮಾಡಿದ ಪ್ರತಿಪಾದನೆಯನ್ನು ಸುಳ್ಳು ಎಂದು ಫ್ಯಾಕ್ಟ್‌ಚೆಕ್ ವರದಿ ಮಾಡಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, ರಷ್ಯಾ ಮತ್ತು ಉಕ್ರೇನ್‌ ನಡುವೆ ನಡೆದ ಯುದ್ದದ ಸಂದರ್ಭದಲ್ಲಿ ನಮ್ಮ ದೇಶದ 32 ಸಾವಿರ ಮಕ್ಕಳು ಉಕ್ರೇನ್‌ನಲ್ಲಿ ಸಿಕ್ಕಿಬಿದ್ದಿದ್ದರು. ಆಗ ನಮ್ಮ ಪ್ರಧಾನಿ ಮೋದಿ ಪುಟಿನ್  ಝೆಲೆನ್ಸ್ಕಿಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಯುದ್ಧವನ್ನು ನಿಲ್ಲಿಸುವಂತೆ ಮಾತುಕತೆ ನಡೆಸಿದರು. ಇದರ ಪರಿಣಾಮು ಉಭಯ ದೇಶಗಳು 6 ಗಂಟೆಗಳ ಕಾಲ ಯುದ್ದವನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಉಕ್ರೇನ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಯಿತು ಎಂದು BJP ನಾಯಕರು ಸುಳ್ಳು ಹೇಳಿದ್ದಾರೆ. ಈ ಮಾಹಿತಿಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯವೇ ನಿರಾಕರಿಸಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ನೋಟು ರದ್ದತಿಯಿಂದ ಜನ ನರಳುತ್ತಿದ್ದಾಗ ದೇಶದ ಜನರನ್ನ ವ್ಯಂಗ್ಯ ಮಾಡಿ ಮಾತನಾಡಿದ್ದರೆ ಮೋದಿ ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.