ಫ್ಯಾಕ್ಟ್‌ಚೆಕ್: ಮೆಸ್ಸಿಗೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಸೌದಿ ಆಟಗಾರ ಹೇಳಿದ್ದು ನಿಜವೇ?

ಸೌದಿ ಆಟಗಾರ ಅಲಿ ಅಲ್ ಬುಲೈಹಿ, ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿಯನ್ನು ಇಸ್ಲಾಂ ಧರ್ಮವನ್ನು ಸ್ವೀಕರಿಸುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ. ಲಿಯೋನೆಲ್ ಮೆಸ್ಸಿಯನ್ನು ಇಸ್ಲಾಂಗೆ ಮತಾಂತರಗೊಳಿಸುವಂತೆ ಸೌದಿ ಆಟಗಾರರೊಬ್ಬರು ಕೇಳಿರುವ ಆಡಿಯೋ ಸೋರಿಕೆಯಾಗಿದ್ದು, ವೈರಲ್ ವೀಡಿಯೊದಲ್ಲಿ ಕೇಳಬಹುದು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಸುದ್ದಿ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್: 

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ರನ್ ಮಾಡಿದಾಗ, ಹಲವು ಮಾಧ್ಯಮಗಳು ಪ್ರಕಟಿಸಿರುವ ಒಂದೇ ರೀತಿಯ ದೃಶ್ಯಗಳೊಂದಿಗೆ ಲೇಖನಗಳನ್ನು ಕಂಡುಬಂದಿವೆ. ಈ ದೃಶ್ಯಗಳು ಅರ್ಜೆಂಟೀನಾ ಮತ್ತು ಸೌದಿ ಅರೇಬಿಯಾ ನಡುವಿನ ಇತ್ತೀಚಿನ  FIFA ವಿಶ್ವಕಪ್ ಪಂದ್ಯಕ್ಕೆ ಸಂಬಂಧಿಸಿವೆ.

ಆದರೆ, ಯಾವುದೇ ಸುದ್ದಿ ಸಂಸ್ಥೆಗಳು ಸೌದಿ ಆಟಗಾರ ಅಲ್-ಬುಲೈಹಿ ಲಿಯೋನೆಲ್ ಮೆಸ್ಸಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಕೇಳಿಕೊಂಡ ಬಗ್ಗೆ ವರದಿಗಳಾಗಲಿ ಸುದ್ದಿಗಳಾಗಲಿ ಲಭ್ಯವಿಲ್ಲ. ಲಿಯೋನೆಲ್ ಮೆಸ್ಸಿಯನ್ನು ಕುರಿತು “ನೀವು ಗೆಲ್ಲುವುದಿಲ್ಲ, ನೀವು ಗೆಲ್ಲುವುದಿಲ್ಲ” ಎಂದು ಸೌದಿ ಆಟಗಾರ ಅಲ್-ಬುಲೈಹಿ ಹೇಳಿದ್ದಾರೆ ಎಂದು ವರದಿಗಳಾಗಿವೆ. ಘಟನೆಯ ಲೇಖನಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ಓದಬಹುದು.

ವೈರಲ್ ಆಗಿರುವ ವೀಡಿಯೊದಲ್ಲಿನ ಆಡಿಯೊ ಕ್ಲಿಪ್ ಅನ್ನು 2014 ರಲ್ಲಿ ನಡೆದ ಕ್ರಿಕೆಟ್ ಪಂದ್ಯದಿಂದ ಎತ್ತಿಕೊಳ್ಳಲಾಗಿದೆ. ಅದು ಪಾಕಿಸ್ತಾನದ ಕ್ರಿಕೆಟಿಗ ಅಹ್ಮದ್ ಶೆಹಜಾದ್ ಶ್ರೀಲಂಕಾದ ತಿಲಕರತ್ನೆ ದಿಲ್ಶನ್‌ಗೆ ಹೇಳಿದ ಘಟನೆಗೆ ಸಂಬಂಧಿಸಿದೆ . 8 ವರ್ಷಗಳ ಹಿಂದೆ ಅಪ್‌ಲೋಡ್ ಮಾಡಲಾದ ABP NEWS ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಪಾಕಿಸ್ತಾನಿ ಕ್ರಿಕೆಟಿಗರೊಬ್ಬರು ದಿಲ್ಶನ್‌ಗೆ ಇಸ್ಲಾಂ ಧರ್ಮವನ್ನು ಸ್ವೀಕರಿಸಿದರೆ ಮತ್ತು ನೀವು ಸ್ವರ್ಗಕ್ಕೆ ಹೋಗುತ್ತೀರಿ ಎಂದು ಹೇಳಿದ ಮೂಲ ವೀಡಿಯೊವನ್ನು ಕಂಡುಕೊಂಡಿದ್ದೇವೆ. ಶೀರ್ಷಿಕೆಯಲ್ಲಿ ಮತಾಂತರವಾದರೆ ನೀವು ನೇರವಾಗಿ ಸ್ವರ್ಗಕ್ಕೆ ಹೋಗುತ್ತೀರಿ: ಪಾಕ್ ಕ್ರಿಕೆಟಿಗ ಲಂಕಾ ಆಟಗಾರನಿಗೆ ಧಾರ್ಮಿಕ ಭೋದನೆ ಮಾಡುತ್ತಾನೆ ಎಂದು ಹೇಳಲಾಗಿದೆ.

 

ಒಟ್ಟಾರೆಯಾಗಿ ಹೇಳುವುದಾರೆ, ಲಿಯೋನೆಲ್ ಮೆಸ್ಸಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಸೌದಿ ಆಟಗಾರ ಕೇಳುತ್ತಿರುವಂತೆ 8 ವರ್ಷಗಳ ಹಿಂದಿನ ಸಂಬಂಧವಿಲ್ಲದ ಆಡಿಯೋವನ್ನು ಸೇರಿಸಿ ಎಡಿಟ್ ಮಾಡಿದ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ. 8 ವರ್ಷಗಳ ಹಿಂದೆ ಪಾಕಿಸ್ತಾನದ ಆಟಗಾರ ಅಹ್ಮದ್ ಶೆಹಜಾದ್ ಮತ್ತು ಶ್ರೀಲಂಕಾ ಆಟಗಾರ ತಿಲಕರತ್ನೆ ದಿಲ್ಶನ್ ನಡುವೆ ಈ ಸಂಭಾಷಣೆ ನಡೆದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಅರುಣಾಚಲ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಮೋದಿಯೇ ಬರಬೇಕಾಯಿತೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights