ಫ್ಯಾಕ್ಟ್‌ಚೆಕ್: ಗುಜರಾತ್‌ನ BJP ಪಕ್ಷಕ್ಕೆ ಮತಹಾಕಬೇಡಿ ಎಂದು ಹಾರ್ದಿಕ್ ಪಟೇಲ್ ಹೇಳಿದ್ದು ನಿಜವೇ?

ಗುಜರಾತ್‌ನಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ, ಕೇಸರಿ ಪಕ್ಷಕ್ಕೆ ಮತ ಹಾಕುವುದಿಲ್ಲ ಎಂದು BJP ನಾಯಕ ಹಾರ್ದಿಕ್ ಪಟೇಲ್ ಪ್ರತಿಜ್ಞೆ ಮಾಡಿದ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಆಮ್ ಆದ್ಮಿ ಪಕ್ಷದ ದೆಹಲಿ ಶಾಸಕ ನರೇಶ್ ಬಲ್ಯಾನ್ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. BJP ಯವರು ನಮ್ಮ ಜನರನ್ನು ಹಿಂಸಿಸಿ ಕೊಲೆ ಮಾಡಿದ್ದಾರೆ” ಗುಜರಾತ್ ಚುನಾವಣೆಗೆ ಮುನ್ನ ಬಿಜೆಪಿಯಲ್ಲಿ ದೊಡ್ಡ ಗಲಾಟೆ ನಡೆದಿದ್ದು, ಹಾರ್ದಿಕ್ ಪಟೇಲ್ ಅವರು BJPಗೆ ಮತ ಹಾಕುವುದಿಲ್ಲ ಎಂದು ದೇವರ ಮೇಲೆ ಪ್ರಮಾಣ ಮಾಡಿದ್ದಾರೆ. ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಹಾರ್ದಿಕ್ ಪಟೇಲ್ BJP ಗೆ ಸೇರಿದ ಕೆಲವೇ ದಿನಗಳಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆಯೇ ಎಂದು ತಿಳಿಯಲು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್: 

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಡಿಸೆಂಬರ್ 7, 2017 ರಂದು ಪಟೇಲ್ ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅಪ್‌ಲೋಡ್ ಮಾಡಿದ ಮೂಲ ವೀಡಿಯೊದ ದೀರ್ಘ ಆವೃತ್ತಿಯನ್ನು ಕಂಡುಕೊಂಡಿದ್ದೇವೆ. ಈ ವೀಡಿಯೊದ ವಿವರಣೆಯ ಪ್ರಕಾರ, ಈ ಕಾರ್ಯಕ್ರಮ ಗುಜರಾತ್‌ನ ಭಾವನಗರದಲ್ಲಿ ನಡೆದಿದೆ.

ಮೂಲ ವೀಡಿಯೊವನ್ನು ಅದೇ ವರ್ಷ ಡಿಸೆಂಬರ್ 7 ರಂದು ಹಲವು ಯೂಟ್ಯೂಬ್ ಚಾನೆಲ್‌ಗಳು ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ವಾಸ್ತವವಾಗಿ ಹಾರ್ದಿಕ್ ಪಟೇಲ್ ಈ ಹೇಳಿಕೆಯನ್ನು ನೀಡಿರುವುದು 2017ರಲ್ಲಿ ಅಂದರೆ ಕಾಂಗ್ರೆಸ್‌ ಪಕ್ಷದಲ್ಲಿ ಇದ್ದಾಗ ರ್ಯಾಲಿಯಲ್ಲಿ ಮಾಡಿದ ಭಾಷಣ ಎಂದು ಹೇಳಲಾಗುತ್ತಿದೆ.

ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆದು BJPಗೆ ಸೇರಿದ ನಂತರ ಇಂತಹ ಹೇಳಿಕೆ ನೀಡಿದ್ದಾರೆಯೆ ಎಂದು ಪರಿಶೀಲಿಸಿದಾಗ ಅಂತಹ ಯಾವುದೇ  ವಿಶ್ವಾಸಾರ್ಹ ವರದಿಗಳು ಲಭ್ಯವಾಗಿಲ್ಲ. ಪಟೇಲ್ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಬಿಜೆಪಿಯ ಚುನಾವಣಾ ರ್ಯಾಲಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಆದ್ದರಿಂದ ಗುಜರಾತ್ ವಿಧಾನಸಭಾ ಚುನಾವಣೆಯ ಹಂತದಲ್ಲಿ ಹಾರ್ದಿಕ್ ಪಟೇಲ್ ಈ ಹಿಂದೆ ಮಾತನಾಡಿದ ಹಳೆಯ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ಸುಳ್ಳು ಪ್ರತಿಪಾದನೆ ಮಾಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಇಂಡಿಯಾ ಟುಡೇ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಮಾಗಡಿಯ ದೇವಾಲಯದ ಶಿವಲಿಂಗ ಕಣ್ಣು ಬಿಟ್ಟಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights