ಫ್ಯಾಕ್ಟ್‌ಚೆಕ್: ಮೋದಿ ರೋಡ್‌ ಶೋ ವೇಳೆ ” ಕೇಜ್ರಿವಾಲ್” ಪರ ಘೋಷಣೆ ಕೂಗಲಾಯಿತೇ?

ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋ ಸಂದರ್ಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪರವಾಗಿ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ವೀಡಿಯೊ ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ.

ಉತ್ತರ ಪ್ರದೇಶದ ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷ ವಂಶರಾಜ್ ದುಬೆಯವರು ವಿಡಿಯೊವನ್ನು ಟ್ವೀಟ್ ಮಾಡಿದ್ದು, ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಿ ಮೋದಿಯವರ ರೋಡ್‌ಶೋ ಸಂದರ್ಭದಲ್ಲಿ ಕೇಜ್ರಿವಾಲ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂದು ಹೇಳುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ನೋಡಲು ಇಲ್ಲಿ ಕ್ಲಿಕ್ ಮಾಡಿ.

ಎಎಪಿ ನಾಯಕರಾದ ಗುಲಾಬ್ ಸಿಂಗ್ ಯಾದವ್, ಪಂಕಜ್ ಸಿಂಗ್ ಮತ್ತು ಇತರರು ಅದೇ ಹೇಳಿಕೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ. (ಪೋಸ್ಟ್‌ಗಳನ್ನು ನೋಡಲು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕ್ಲಿಕ್ ಮಾಡಿ.)

ಫ್ಯಾಕ್ಟ್‌ಚೆಕ್:

ಟ್ವಿಟರ್‌ನಲ್ಲಿ ಕೀವರ್ಡ್ ಸರ್ಚ್ ಮಾಡಿದಾಗ ಅದೇ ಕ್ಲಿಪ್ ಕಂಡುಬಂದಿದೆ. ಆದರೆ ಈ ವಿಡಿಯೋದಲ್ಲಿ ಪ್ರಧಾನಿ ಮೋದಿ ಪರವಾಗಿ ಘೋಷಣೆಗಳು ಕೇಳಿಬರುತ್ತವೆ. ವಿಡಿಯೋವನ್ನು ಹಂಚಿಕೊಂಡಿರುವ ಬಳಕೆದಾರರು  “ಸೂರತ್‌ನಲ್ಲಿ ಪ್ರಧಾನಿ ಮೋದಿಯವರ ರೋಡ್‌ಶೋನಲ್ಲಿ ಜನರು “ಮೋದಿ”…”ಮೋದಿ”.. ಎಂದು ಘೋಷಣೆ ಕೂಗುವುದನ್ನು ಕೇಳಬಹುದು ಎಂದು ಟ್ವೀಟ್ ಮಾಡಿದ್ದಾರೆ.

ಇದಲ್ಲದೆ, ಆಜ್ ತಕ್ ಪ್ರಕಟಿಸಿದ ಅದೇ ಕ್ಲಿಪ್ ಅನ್ನು ಕಂಡುಕೊಂಡಿದ್ದೇವೆ. ಶೀರ್ಷಿಕೆಯ ಪ್ರಕಾರ, ಇದು ಸೂರತ್‌ನಲ್ಲಿ ಪ್ರಧಾನಿ ಮೋದಿಯವರ ಹುಂಕಾರ್ ರ್ಯಾಲಿಯಿಂದ ಬಂದಿದೆ.  ಕ್ಲಿಪ್‌ನಲ್ಲಿಯೂ  ಪ್ರಧಾನಿ ಮೋದಿ ಪರವಾಗಿ ಘೋಷಣೆಗಳನ್ನು ಕೂಗಿರುವುದು ಕಂಡುಬಂದಿದೆ.

ಅಂತಿಮವಾಗಿ, ನವೆಂಬರ್ 27 ರಂದು ಪ್ರಧಾನಿ ಮೋದಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಸ್ಟ್ರೀಮ್ ಮಾಡಿದ ರೋಡ್‌ಶೋನ ನೇರ ಪ್ರಸಾರವನ್ನು ನಾವು ಪರಿಶೀಲಿಸಿದ್ದೇವೆ. ಸುಮಾರು 1ಗಂಟೆ 15 ನಿಮಿಷಗಳ ಈ ವಿಡಿಯೋದಲ್ಲಿ ಯಾವುದೇ ಹಂತದಲ್ಲಿಯೂ ಕೇಜ್ರಿವಾಲ್ ಪರ ಘೋಷಣೆಗಳು ಕೇಳಿಬಂದಿಲ್ಲ. ಆದರೆ  ಮೋದಿಯವರ ಪರವಾಗಿ ಘೋಷಣೆಗಳನ್ನು ಕೇಳಬಹುದು.

 

ಇಂಡಿಯಾ ಟುಡೇ ಕೂಡ ರೋಡ್ ಶೋ ನೇರ ಪ್ರಸಾರ ಮಾಡಿತ್ತು. ಈ ವಿಡಿಯೋದಲ್ಲಿ ಕೇಜ್ರಿವಾಲ್ ಪರ ಘೋಷಣೆಗಳು ಕೂಗಿಲ್ಲ ಎಂಬುದು ಸ್ಪಷ್ಟವಾಗಿದೆ.

ಕೇಜ್ರಿವಾಲ್ ಪರ ಘೋಷಣೆಗಳನ್ನು ಹೊಂದಿರುವ ವೈರಲ್ ಕ್ಲಿಪ್ ಅನ್ನು ಡಿಜಿಟಲ್ ರೂಪದಲ್ಲಿ ಸೇರಿಸುವ ಮೂಲಕ ಎಡಿಟ್ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಆದ್ದರಿಂದ, ಪ್ರಧಾನಿ ಮೋದಿ ಅವರ ರ್ಯಾಲಿಯಲ್ಲಿ ಕೇಜ್ರಿವಾಲ್ ಪರ ಘೋಷಣೆಗಳನ್ನು ಕೂಗಲಾಗಿದೆ ಎಂಬ ಹೇಳಿಕೆಯು ಸುಳ್ಳು . ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ನ್ಯೂಸ್ ಮೀಟರ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಭಾಷಣ ಮಾಡುವಾಗ ಮೂಕಾಭಿನಯ ಮಾಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights