ಫ್ಯಾಕ್ಟ್‌ಚೆಕ್: ನೃತ್ಯ ಮಾಡುತ್ತಿದ್ದ ಮಹಿಳೆಗೆ ಜಾಡಿಸಿ ಒದೆಯುವ ವಿಡಿಯೊ ಉತ್ತರ ಪ್ರದೇಶದ್ದಲ್ಲ! ಮತ್ತೆಲ್ಲಿಯದ್ದು?

ಉತ್ತರ ಪ್ರದೇಶದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪುರುಷನೊಬ್ಬ ಮಹಿಳೆಯೊಬ್ಬಳ ಎದೆಗೆ ಒದೆಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಉತ್ತರ ಪ್ರದೇಶದಲ್ಲಿ ಯಥಾ ರಾಜ ತಥಾ ಪ್ರಜಾ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ವೀಡಿಯೊದ ಸ್ಕ್ರೀನ್‌ಶಾಟ್‌ಗಳನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 30 ಜೂನ್ 2020 ರಂದು ‘ಡೈಲಿ ಸ್ಟಾರ್’ ಸುದ್ದಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ ಇದೇ ರೀತಿಯ ದೃಶ್ಯಗಳೊಂದಿಗೆ ವಿಡಿಯೊ ಕಂಡುಬಂದಿದೆ. ಈ ಲೇಖನದಲ್ಲಿ ಪುರುಷನೊಬ್ಬ ಮಹಿಳೆಯನ್ನು ಅಮಾನವೀಯವಾಗಿ ಒದೆಯುವ ಭಯಾನಕ ವಿಡಿಯೊ ಎಂದು ವರದಿ ಮಾಡಿದೆ. ಲೇಖನದ ಪ್ರಕಾರ, ಪಾಕಿಸ್ತಾನದ ಕಾರ್ಯಕ್ರಮವೊಂದರಲ್ಲಿ ಅತಿಥಿಗಳ ಮುಂದೆ ಅಶ್ಲೀಲವಾಗಿ ನೃತ್ಯ ಮಾಡಿದ ಕಾರಣಕ್ಕೆ ಮಹಿಳೆಯನ್ನು ವ್ಯಕ್ತಿಯೊಬ್ಬ ಜಾಡಿಸಿ ಒದ್ದಿದ್ದಾನೆ ಎಂದು ಹೇಳಲಾಗಿದೆ.

ಹಲವು ಸುದ್ದಿ ವೆಬ್‌ಸೈಟ್‌ಗಳು ಜೂನ್ 2020 ರಲ್ಲಿ ಇದೇ ರೀತಿಯ ಲೇಖನಗಳನ್ನು ಪ್ರಕಟಿಸಿವೆ. ಅವುಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಕೆಲವು ಸುದ್ದಿ ವೆಬ್‌ಸೈಟ್‌ಗಳು ವರದಿ ಮಾಡಿವೆ.

ಪಾಕಿಸ್ತಾನಿ ಸುದ್ದಿ ವರದಿಯ ಪ್ರಕಾರ, ವ್ಯಕ್ತಿಯು ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ದು, ” ಹುಡುಗಿಯೊಬ್ಬಳು ಅಶ್ಲೀಲ ರೀತಿಯಲ್ಲಿ ಇತರರ ಮುಂದೆ ನೃತ್ಯ ಮಾಡುವುದನ್ನು ನಮ್ಮಲ್ಲಿ ಅನುಮತಿಸಲಾಗುವುದಿಲ್ಲ” ಎಂದಿದ್ದಾನೆ. ಘಟನೆಯಲ್ಲಿ ಹಲ್ಲೆಗೊಳಗಾದ ನೃತ್ಯಗಾತಿಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ ಮತ್ತು ಮಹಿಳೆಯ ಮೇಲೆ ಹಲ್ಲೆ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆಯೇ ಎಂಬ ಯಾವುದೇ ವರದಿಗಳು ಲಭ್ಯವಾಗಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಜೂನ್ 2020 ರಂದು, ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅತಿಥಿಗಳ ಮುಂದೆ ಅನುಚಿತವಾಗಿ ನೃತ್ಯ ಮಾಡಿದ್ದಕ್ಕಾಗಿ ಮಹಿಳೆಯನ್ನು ಅಮಾನುಷವಾಗಿ ಒದೆಯಲಾಗಿದೆ ಎಂದು ಹಲವು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ. ಈ ವಿಡಿಯೋಗೂ ಉತ್ತರ ಪ್ರದೇಶಕ್ಕೂ ಯಾವುದೇ ಸಂಬಂಧವಿಲ್ಲ. ಆದ್ದರಿಂದ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ರಾಹುಲ್ ಗಾಂಧಿ ಬಾಬಾ ವೇಷ ಧರಿಸಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights