ಫ್ಯಾಕ್ಟ್‌ಚೆಕ್: ಭಾರತ್ ಜೋಡೋ ಯಾತ್ರೆಗೆ ಬಂದ ಜನರಿಗೆ ಕಾಂಗ್ರೆಸ್‌ ಹಣ ಹಂಚಿದ್ದು ನಿಜವೇ?

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ 100 ದಿನ ಪೂರೈಸಿದೆ. ಸದ್ಯ ದೆಹಲಿ ತಲುಪಿರುವ ಭಾರತ್ ಜೋಡೋ ಯಾತ್ರೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗಿದ್ದೆ. “ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಜನರಿಗೆ ಹಣ ಹಂಚಿಕೆ ಮಾಡಲಾಗುತ್ತಿದೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

58 ಸೆಕೆಂಡುಗಳ ವೀಡಿಯೊದಲ್ಲಿ ಕೆಲವರು ಕೈಯಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ತಲೆಗೆ ಟೋಪಿ ಹಾಕಿಕೊಂಡು ಸಾಲಾಗಿ ಬರುತ್ತಿದ್ದು, ಮುಂದೆ ನಿಂತಿರುವ ವ್ಯಕ್ತಿಯೊಬ್ಬರು ಎಲ್ಲರಿಗೂ ಹಣ ನೀಡುತ್ತಿರುವುದು ವಿಡಿಯೊದಲ್ಲಿ ಕಾಣಬಹುದು.  ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಜನರಿಗೆ ಹಣ ನೀಡಲಾಗಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ವಿಡಿಯೊವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಮಾರ್ಚ್ 5, 2017 ರಂದು YouTube ನಲ್ಲಿ ಇದೇ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಬೂಮ್ ಕಂಡುಹಿಡಿದಿದೆ.

“LIFTF 2017 – ಮಣಿಪುರದ ಇಂಫಾಲ್‌ನಲ್ಲಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಇದೇ ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ. ವಿಡಿಯೊವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ವೀಡಿಯೊದಲ್ಲಿ ಮಹಿಳೆಯೊಬ್ಬರು ವಾರ್ಡ್ 5 (ಕೆಎಂಸಿ) ಎಂದು ಬರೆಯುವ ಫಲಕವನ್ನು ಹಿಡಿದಿರುವುದನ್ನು ನಾವು ಗಮನಿಸಿದ್ದೇವೆ. ಮೂಲ ವೀಡಿಯೋದಲ್ಲಿ ಜನರು ಮೈತಿಲಿ ಭಾಷೆಯಲ್ಲಿ ಮಾತನಾಡುತ್ತಿರುವುದನ್ನು ಕೇಳಬಹುದು. ಈಶಾನ್ಯ ರಾಜ್ಯವಾದ ಮಣಿಪುರದಲ್ಲಿ ಮೈತಿಲಿಯು ಪ್ರಧಾನವಾಗಿ ಮಾತನಾಡುವ ಭಾಷೆಯಾಗಿದೆ.

ಮಣಿಪುರದಲ್ಲಿ KMC’ ಎಂಬುದರ ವಿಸ್ತೃತ ರೂಪವನ್ನು ಸರ್ಚ್ ಮಾಡಿದಾಗ ರಾಜ್ಯದ ತೌಬಲ್ ಜಿಲ್ಲೆಯಲ್ಲಿ “ಕಾಕ್ಚಿಂಗ್ ಮುನ್ಸಿಪಲ್ ಕೌನ್ಸಿಲ್” ಎಂಬ ಸಂಕ್ಷೇಪಣವನ್ನು ಸೂಚಿಸುತ್ತದೆ. ಅದೇ ವರ್ಷ ಮಾರ್ಚ್ 4 ಮತ್ತು ಮಾರ್ಚ್ 8 ರಂದು ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ನಡೆದವು. ವೈರಲ್ ವೀಡಿಯೊದಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಆಡಿಯೊವನ್ನು ಗುಜರಾತ್‌ನ ಗಾಂಧಿನಗರದಲ್ಲಿ 2017 ರ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕರ ಭಾಷಣದಿಂದ ತೆಗೆದುಕೊಳ್ಳಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ.

ರಾಹುಲ್ ಗಾಂಧಿಯವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಕ್ಟೋಬರ್ 23, 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ ಜನರಿಗೆ ಹಣ ಹಂಚುತಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ವಿಡಿಯೊ 2017ರಲ್ಲಿ ಮಣಿಪುರದ “ಕಾಕ್ಚಿಂಗ್ ಮುನ್ಸಿಪಲ್ ಕೌನ್ಸಿಲ್” ನ ಭಾಗವಾಗಿ ಸೆರೆಹಿಡಿದಿರುವ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಭಾರತ್ ಜೋಡೋ ಯಾತ್ರೆಗೂ ಈ ವೈರಲ್ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿದುಬಂದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಹುಡುಗಿಯನ್ನು ಅಮಾನುಷವಾಗಿ ಥಳಿಸುತ್ತಿರುವ ವಿಡಿಯೋ ವೈರಲ್! ಇದೂ ಲವ್ ಜಿಹಾದಾ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights