ಫ್ಯಾಕ್ಟ್‌ಚೆಕ್: ಭೀಮ್ ಆರ್ಮಿ ಕಾರ್ಯಕರ್ತರು ಭಗವದ್ಗೀತೆಯನ್ನು ಸುಟ್ಟು ಹಾಕಿದ್ದು ನಿಜವೇ?

ರಾಜಸ್ಥಾನದ ಬಾರ್ಮರ್‌ನಲ್ಲಿ ಭೀಮ್ ಆರ್ಮಿ ಕಾರ್ಯಕರ್ತರು ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಸುಟ್ಟು ದಲಿತರ ಮತಾಂತರ ಕಾರ್ಯಕ್ರಮವನ್ನು ಆಚರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ರಾಜಸ್ಥಾನದ ಬಾರ್ಮರ್ ನಲ್ಲಿ ಹಿಂದೂಗಳ ಪವಿತ್ರ ಗ್ರಂಥವಾದ ಭಗವದ್ಗೀತೆಯನ್ನು ಸುಟ್ಟು ದಲಿತರ ಮತಾಂತರ ಕಾರ್ಯಕ್ರಮವನ್ನು ಆಚರಿಸಲಾಯಿತು. ಹಿಂದೂಗಳ ಪವಿತ್ರ ಗ್ರಂಥಕ್ಕೆ ಈ ಅವಮಾನ ಮಾಡಿದ್ದಾರೆ ಎಂದು ಶುಭಂ ಶರ್ಮ ಎಂಬ ಸಾಮಾಜಿಕ ಮಾಧ್ಯಮದ ಬಳಕೆದಾರರು ವಿಡಿಯೋ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಬಾರ್ಮರ್‌ನಲ್ಲಿ ಹಿಂದೂ ಧರ್ಮಗ್ರಂಥ ಭಗವದ್ಗೀತೆಯನ್ನು ಸುಟ್ಟುಹಾಕಿದ್ದಕ್ಕೆ ಸಂಬಂಧಿಸಿದಂತೆ  ಗೂಗಲ್‌ನಲ್ಲಿ ಕೆಲವು ಕೀವರ್ಡ್‌ ಮೂಲಕ ಸರ್ಚ್ ಮಾಡಿದಾಗ, ಜನಸತ್ತಾ ಪ್ರಕಟಿಸಿದ ವರದಿ ಲಭ್ಯವಾಗಿದೆ. “ಡಿಸೆಂಬರ್ 25 ರಂದು ಕೆಲವು ಭೀಮ್ ಆರ್ಮಿ ಸದಸ್ಯರು ಬೌದ್ಧ ಧರ್ಮಕ್ಕೆ ಮತಾಂತರಗೊಳ್ಳುವ ಕಾರ್ಯಕ್ರಮವನ್ನು ಆಯೋಜಿಸಿದ್ದಾಗ ಈ ಘಟನೆ ನಡೆದಿದೆ. ಈ ಸಮಯದಲ್ಲಿ ಅನೇಕ ಜನರು ಬೌದ್ಧ ಧರ್ಮದ ದೀಕ್ಷೆಯನ್ನೂ ತೆಗೆದುಕೊಂಡರು. ಭೀಮ್ ಆರ್ಮಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ನಂತರ  ‘ಮನುಸ್ಮೃತಿ’ಯ ಪುಟಗಳನ್ನು ಸುಟ್ಟು ಹಾಕಿದರು.  ಎಂದು ವರದಿಯಾಗಿದೆ.

bi5

ಜನಸತ್ತಾ ಮಾಡಿರುವ ವರದಿಯ ಪ್ರಕಾರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು  ಬಂಧಿಸಲಾಗಿದೆ ಎಂದು ಬಾರ್ಮರ್ ಪೊಲೀಸರು ಟ್ವೀಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ವರದಿ ಬಂದಿದೆ. ಇದಲ್ಲದೇ, ಭೀಮ್ ಆರ್ಮಿ ಕಾರ್ಯಕರ್ತರು ಮನುಸ್ಮೃತಿ ಸುಟ್ಟಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಈ ವರದಿಗಳ ಪ್ರಕಾರ ದಿ ಭೀಮ್ ಆರ್ಮಿ ಸದಸ್ಯರು ಸುಟ್ಟಿರುವುದು ಭಗವದ್ಗೀತೆಯನ್ನಲ್ಲ. ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾರೆ, ಭೀಮ್ ಆರ್ಮಿ ಕಾರ್ಯಕರ್ತರು ಮನುಸ್ಮೃತಿಯನ್ನು ಸುಟ್ಟ ವಿಚಾರವನ್ನು ತಿರುಚಿ ಹಿಂದೂ ಧಾರ್ಮಿಕ ಗ್ರಂಥ ಭಗವದ್ಗೀತೆಯನ್ನು ಸುಟ್ಟಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: DFRAC

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ‘ಮೋದಿ ನನ್ನ ಬೆಸ್ಟ್‌ ಫ್ರೆಂಡ್‌’ ಎಂದು KCR ಹೇಳಿದ್ದು ಯಾವಾಗ ಗೊತ್ತೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights