ಫ್ಯಾಕ್ಟ್‌ಚೆಕ್: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮ, ರಿಷಬ್ ಪಂತ್‌ಗೆ ರಕ್ತ ನೀಡಿದ್ದು ನಿಜವೇ?

ದೆಹಲಿಯಿಂದ ರೂರ್ಕಿಯಲ್ಲಿರುವ ತಮ್ಮ ತಾಯಿಯನ್ನು ನೋಡಲು ಮನೆಗೆ ಹೋಗುತ್ತಿದ್ದಾಗ ರಿಷಬ್ ಪಂತ್ ಅವರ ಕಾರು 2022ರ ಡಿಸೆಂಬರ್ 30 ರಂದು ಅಪಘಾತಕ್ಕೀಡಾಗಿತ್ತು. ಗಂಭೀರವಾಗಿ ಗಾಯಗೊಂಡ ಪಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗ ರಿಷಬ್ ಪಂತ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸದ್ಯ ಅವರನ್ನು ICUನಿಂದ  ವಾರ್ಡ್​ಗೆ ಸ್ಥಳಾಂತರಿಸಲಾಗಿದೆ.

Image

ಆಸ್ಪತ್ರೆಯಲ್ಲಿರುವ ರಿಷಬ್ ಪಂತ್‌ಗೆ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಕ್ತದಾನ ಮಾಡಿದ್ದಾರೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ‘ಗಾಯಗೊಂಡ ಪಂತ್ ಅವರನ್ನು ನೋಡಲು ನಾಯಕ ರೋಹಿತ್ ಶರ್ಮಾ ಆಸ್ಪತ್ರೆಗೆ ತೆರಳಿದ್ದಾರೆ. ಅದೇ ವೇಳೆಗೆ ಆಸ್ಪತ್ರೆ ವೈದ್ಯರು ಪಂತ್​ಗೆ ತುರ್ತಾಗಿ ರಕ್ತ ಬೇಕಾಗಿದೆ ಎಂದಿದ್ದಾರೆ. ಕೂಡಲೇ ನಾಯಕ ರೋಹಿತ್ ಶರ್ಮಾ, ಪಂತ್​ಗೆ ರಕ್ತ ನೀಡಿ ಅವರ ಜೀವ ಉಳಿಸಿದ್ದಾರೆ’ ಎಂಬ ಹೇಳಿಕೆಯೊಂದಿಗೆ ರೋಹಿತ್ ಶರ್ಮಾ ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ರೋಹಿತ್ ಶರ್ಮಾ ಅವರು ಆಸ್ಪತ್ರೆಯ ಹಾಸಿಗೆ ಮೇಲೆ ಮಲಗಿರುವ ಚಿತ್ರವನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ನವೆಂಬರ್ 11, 2016 ರಂದು ರೋಹಿತ್ ಶರ್ಮಾ ಅವರ ಟ್ವಿಟರ್ ಹ್ಯಾಂಡಲ್‌ನಿಂದ ಪೋಸ್ಟ್‌ ಮಾಡಿದ ಟ್ವೀಟ್‌ವೊಂದು ಲಭ್ಯವಾಗಿದೆ. ವಾಸ್ತವವಾಗಿ 2016 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ಅಂತಿಮ ಏಕದಿನ ಪಂದ್ಯ ನಡೆಯುವ ಸಂದರ್ಭದಲ್ಲಿ ತೊಡೆಯ ಭಾಗಕ್ಕೆ ಪೆಟ್ಟು ಬಿದ್ದ ಕಾರಣದಿಂದ ರೋಹಿತ್, ಲಂಡನ್‌ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆ ಸಂದರ್ಭದಲ್ಲಿ ಪೋಟೋ ಎಂದು ತಿಳಿದು ಬಂದಿದೆ.

https://twitter.com/ImRo45/status/797094215025102848?ref_src=twsrc%5Etfw%7Ctwcamp%5Etweetembed%7Ctwterm%5E797094215025102848%7Ctwgr%5E93e9b26a3b295cc9428f22d08fb34ab3c3e80da7%7Ctwcon%5Es1_&ref_url=https%3A%2F%2Fwww.oneindia.com%2Ffact-check%2Ffact-check-did-rohit-sharma-donate-blood-to-rishabh-pant-3507348.html

ಕೀವರ್ಡ್‌ಗಳನ್ನು ಸಹಾಯದಿಂದ ಗೂಗಲ್ ಸರ್ಚ್ ಮಾಡಿದಾಗ,ಪಂತ್‌ಗೆ ರಕ್ತದಾನ ಮಾಡಲು ಶರ್ಮಾ ಆಸ್ಪತ್ರೆಗೆ ಧಾವಿಸಿದ ಬಗ್ಗೆ  ಯಾವುದೇ ವರದಿಯೂ ಲಭ್ಯವಾಗಿಲ್ಲ. ಅಲ್ಲದೆ ರೋಹಿತ್ ಶರ್ಮಾ, ಪಂತ್​ಗೆ ಅಪಘಾತವಾದ ದಿನ ಅಂದರೆ ಹೊಸ ವರ್ಷದ ಮುನ್ನಾದಿನದಂದು ಮಾಲ್ಡೀವ್ಸ್‌ನಲ್ಲಿ ತಮ್ಮ ಪತ್ನಿ ರಿತಿಕಾ ಸಜ್ದೇಹ್ ಮತ್ತು ಮಗಳು ಸಮೈರಾ ಅವರೊಂದಿಗಿದ್ದರು ಎಂಬುದು ಹೆಚ್ಚಿನ ತನಿಖೆಯಲ್ಲಿ ತಿಳಿದುಬಂದಿದೆ.

 

View this post on Instagram

 

A post shared by Ritika Sajdeh (@ritssajdeh)

ಅಲ್ಲದೆ ಈ ಸುದ್ದಿಯನ್ನು ಖಚಿತ ಪಡಿಸಿಕೊಳ್ಳಲು ಸ್ವತಃ ರೋಹಿತ್ ಅವರೊಂದಿಗೆ ಮಾತನಾಡಿರುವ ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್‌ನ  ಸ್ಪೋರ್ಟ್ಸ್ ಟಾಕ್‌ನ ಹಿರಿಯ ಕ್ರೀಡಾ ಪತ್ರಕರ್ತ ವಿಕ್ರಾಂತ್ ಗುಪ್ತಾ, ಇದುವರೆಗೆ ಅಂತಹ ಯಾವುದೇ ಬೆಳವಣಿಗೆ ನಡೆದಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆದರೂ ಮಾಲ್ಡೀವ್ಸ್‌ನಲ್ಲಿರುವ ರೋಹಿತ್ ಶರ್ಮಾ, ರಿಷಬ್ ಪಂತ್​ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

 

View this post on Instagram

 

A post shared by Rohit Sharma (@rohitsharma45)

ಒಟ್ಟಾರೆಯಾಗಿ ಹೇಳುವುದಾದರೆ, ಅಪಘಾತಕ್ಕೆ ಒಳಗಾಗಿದ್ದ ರಿಷಬ್ ಪಂತ್‌ಗೆ ರೋಹಿತ್ ಶರ್ಮಾ ರಕ್ತದಾನ ಮಾಡಿದ್ದಾರೆ ಎಂಬುದು ಸುಳ್ಳು . ರೋಹಿತ್ ಶರ್ಮ  2016ರಲ್ಲಿ ತೊಡೆಯ ಗಾಯದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ತೆಗೆದ ಚಿತ್ರವನ್ನು ಬಳಸಿಕೊಂಡು ರಿಷಬ್ ಪಂತ್ ಗೆ ರಕ್ತ ನೀಡಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಇಂಡಿಯಾ ಟುಡೇ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಪ್ರಧಾನಿ ಮೋದಿ ಕೇಶ ಮುಂಡನ ಮಾಡಿಸಿಕೊಂಡಿದ್ದಾರೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights