ಫ್ಯಾಕ್ಟ್‌ಚೆಕ್: ತಾಯಿಯ ಚಿತಾಭಸ್ಮವನ್ನು ನದಿಯಲ್ಲಿ ಬಿಡಲು ಮೋದಿ ತಮ್ಮೊಂದಿಗೆ ಛಾಯಾಗ್ರಾಹಕನನ್ನು ಕರೆದುಕೊಂಡು ಹೋಗಿದ್ದರೆ?

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್‌ (100) ಅವರು ಅನಾರೋಗ್ಯದಿಂದ ಕಳೆದ ಶುಕ್ರವಾರ 30 ಡಿಸೆಂಬರ್ 2022ರಂದು ನಿಧನ ಹೊಂದಿದ್ದರು. ತಾಯಿ ಹೀರಾಬೆನ್ ನಿಧನದ ನಂತರ, ಪ್ರಧಾನಿ ಮೋದಿ ಅವರು ತಮ್ಮ ತಾಯಿಯ ಚಿತಾಭಸ್ಮವನ್ನು ನದಿಯಲ್ಲಿ ವಿಸರ್ಜಿಸಲು ತಮ್ಮ ಜೊತೆಯಲ್ಲಿ ಕ್ಯಾಮರಾಮೆನ್‌ನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ನಿಜವಾಗಿಯೂ ಮೋದಿ ತಮ್ಮ ತಾಯಿಯ ಚಿತಾಭಸ್ಮವನ್ನು ಬಿಡಲು ಹೋಗಿದ್ದರೇ? ಈ ಸಂದರ್ಭದಲ್ಲಿ ತಮ್ಮ ಜೊತೆ ಫೋಟೊಗ್ರಾಫರ್‌ನನ್ನು ಕರೆದುಕೊಂಡು ಹೋಗಿದ್ದರೆ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಪ್ರಧಾನಿ ಮೋದಿಯವರು ತಮ್ಮ ತಾಯಿಯ ಚಿತಾಭಸ್ಮವನ್ನು ವಿಸರ್ಜಿಸಲು ಫೋಟೋಗ್ರಾಫರ್‌ನೊಂದಿಗೆ ಹೋಗಿದ್ದಾರೆ ಎಂದು ಪ್ರಸಾರವಾಗುತ್ತಿರುವ ವೀಡಿಯೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, “ವೀಡಿಯೊದಲ್ಲಿ ಪ್ರಧಾನಿ ಮೋದಿಯವರು ಕಲಶವನ್ನು ಹಿಡಿದಿರುವ ದೃಶ್ಯದ ಫೋಟೋ ಡಿಸೆಂಬರ್ 13, 2021 ರಂದು ಹಿಂದೂಸ್ತಾನ್ ಟೈಮ್ಸ್‌ನಲ್ಲಿ ಕಾಣಿಸಿಕೊಂಡ” ವರದಿಯೊಂದು ಲಭ್ಯವಾಗಿದೆ.

ಡಿಸೆಂಬರ್ 13, 2021 ರಂದು ವಾರಣಾಸಿಯಲ್ಲಿ ಕಾಶಿ ವಿಶ್ವನಾಥ ದೇವಾಲಯದ ನವೀಕರಿಸಿದ ಸಂಕೀರ್ಣವನ್ನು ಉದ್ಘಾಟಿಸುವಾಗ, ಪ್ರಧಾನಿ ಮೋದಿ ಗಂಗಾ ನದಿಯಲ್ಲಿ ಸ್ನಾನ ಮಾಡುವ ವೀಡಿಯೊವನ್ನು ಇಂಡಿಯಾ ಟುಡೇ ಸೇರಿದಂತೆ ಹಲವು ಸುದ್ದಿ ಮಾಧ್ಯಮಗಳು ಪ್ರಕಟಿಸಿವೆ.ಪ್ರಧಾನಿ ಮೋದಿ ಅವರು ಡಿಸೆಂಬರ್ 2021 ರಲ್ಲಿ ವಾರಣಾಸಿಗೆ ಹೋದಾಗ ಗಂಗಾ ನದಿಯಲ್ಲಿ ಪುಣ್ಯಸ್ನಾನ ಮಾಡಿದಾಗ ತೆಗೆದ ವೀಡಿಯೊವನ್ನು ಈಗ ಅವರ ತಾಯಿಯ ಮರಣದ ನಂತರ ತೆಗೆಯಲಾಗಿದೆ ಎಂದು ತಪ್ಪಾಗಿ ಪ್ರಸಾರ ಮಾಡಲಾಗುತ್ತಿದೆ.

 

ಒಟ್ಟಾರೆಯಾಗಿ ಹೇಳುವುದಾದರೆ, ಪ್ರಧಾನಿ ಮೋದಿ ಅವರು ಕಳೆದ ವರ್ಷ 2021 ರಲ್ಲಿ ಕಾಶಿ ವಿಶ್ವನಾಥ ದೇವಾಲಯದ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಗಂಗಾ ಸ್ನಾನ ಮಾಡಿದ ವೀಡಿಯೊವನ್ನು, ತಮ್ಮ ತಾಯಿಯ ಚಿತಾಭಸ್ಮವನ್ನು ವಿಸರ್ಜಿಸಲು ತಮ್ಮೊಂದಿಗೆ ಛಾಯಾಗ್ರಾಹಕನನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಪೋಸ್ಟ್‌ಅನ್ನು ತಪ್ಪಾಗಿ ಹಂಚಿಕೊಂಡಿದ್ದಾರೆ. ಹಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಬೇರಿಲ್ಲದೆ ನೇತಾಡುವ ಮರ ಅಸ್ತಿತ್ವದಲ್ಲಿದೆ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights