ಫ್ಯಾಕ್ಟ್‌ಚೆಕ್: ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಸಮಾಧಿ ನಿರ್ಮಾಣ ಮಾಡಿದ್ದಾರೆ ಎಂಬುದು ಸುಳ್ಳು

ಕಾನ್ಪುರದ ರೈಲ್ವೇ ನಿಲ್ದಾಣದಲ್ಲಿನ ಪ್ಲಾಟ್‌ಫಾರ್ಮ್ ಅನ್ನು ಸಮಾಧಿಯಾಗಿ ಸಮಾಧಿಯಾಗಿ ಪರಿವರ್ತಿಸಿರುವುದನ್ನು ಕಾಣಬಹುದು ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಭಾರತೀಯ ರೈಲ್ವೆ ನಿಲ್ದಾಣವನ್ನು ಸಮಾಧಿಯ ಮೇಲೆ ಹೇಗೆ ವೇದಿಕೆ ನಿರ್ಮಿಸಿದರು ಎಂದು ಅಪಹಾಸ್ಯದ ಒಕ್ಕಣೆಯೊಂದಿಗೆ ಸೋಶಿಯಲ್ ಮೀಡಿಯಾ ಬಳಕೆದಾರರು ಪೋಸ್ಟ್‌ ಮಾಡಿದ್ದಾರೆ.

“ಭಾರತೀಯ ರೈಲ್ವೆಯನ್ನು ಸಹ, ಅವರು ಸಮಾಧಿಯ ಮೇಲೆ ಹೇಗೆ ನಿರ್ಮಿಸಿದರು?” ಎಂಬ ಪ್ರತಿಪಾದನೆಯೊಂದಿಗೆ ಹಲವಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

https://twitter.com/Vineetbhargava9/status/1611222702815334407

ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಪ್ರತಿಪಾದಿಸಿದಂತೆ ಕಾನ್ಪೂರ್ ರೈಲ್ವೆ ನಿಲ್ದಾಣದಲ್ಲಿ ಸಮಾಧಿಯನ್ನು ನಿರ್ಮಿಸಿಲಾಗಿದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರು ಪೋಸ್ಟ್‌ನಲ್ಲಿ ಮಾಡಲದ ಪ್ರತಿಪಾದನೆಯನ್ನು ಪರಿಶೀಲಿಸಲು ಫೋಟೊವನ್ನು ಗೂಗಲ್ ಸರ್ಚ್ ಮಾಡಿದಾಗ, 8 ಡಿಸೆಂಬರ್ 2017 ರಂದು ನ್ಯೂಸ್ ನೇಷನ್‌ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಲಾದ ವಿಡಿಯೋ ಲಭ್ಯವಾಗಿದೆ.”ಕಾನ್ಪುರದ ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್  ಮಸೀಧಿಯಾಗಿ ಬದಲಾಗುತ್ತದೆ ಎಂದು ಸೂಚಿಸುವ ವೈರಲ್ ವೀಡಿಯೊದ ಹಿಂದಿನ ಸತ್ಯ.” ಎಂಬ ಶಿರ್ಷಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ವರದಿಯು ಕಾನ್ಪುರ ರೈಲ್ವೆ ಪ್ಲಾಟ್‌ಫಾರ್ಮ್ ಸಮಾಧಿಯ ಬಗ್ಗೆ ವಿವರವಾದ ಮಾಹಿತಿಯನ್ನು ನೀಡುತ್ತದೆ. ಸಮಾಧಿಗೆ ಬಳಸುವ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಮುಸ್ಲಿಂ ವ್ಯಾಪಾರಿ. ಪ್ಲಾಟ್‌ಫಾರ್ಮ್ ಸಂಖ್ಯೆ 3 ರಲ್ಲಿ “ಹಜರತ್ ಸಯ್ಯದ್ ಲೈನ್ ಶಾ ಬಾಬಾ ಗೆ ಸಂಬಂಧಿಸಿದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದು ಅದನ್ನು ತೆರೆವುಗೊಳಿಸುವಂತೆ ಮನವಿ ಮಾಡಲಾಗಿದೆ. ಈ ಹಿನ್ನಲೆಯಲ್ಲಿ  ಸಂಬಂಧಿಸಿದಂತೆ ದಯವಿಟ್ಟು ಸ್ವಚ್ಛತೆಗೆ ವಿಶೇಷ ಗಮನ ಕೊಡಿ ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, 3 ವರ್ಷಗಳ ಹಿಂದೆ ಅಂದರೆ 2017ರಲ್ಲಿ ಕಾನ್ಪುರದ ರೈಲ್ವೇ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 3 ಅನ್ನು ಮಜರ್ ಆಗಿ ಬದಲಾಯಿಸಲಾಗಿದೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಇತ್ತೀಚಿನ ದೃಶ್ಯ ಎಂದು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ:DFRAC

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಹುಡುಗಿ ನುಂಗುವ ಮೊಸಳೆ ವಿಡಿಯೋ? ಆದರೆ ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights