ಫ್ಯಾಕ್ಟ್‌ಚೆಕ್: ಪಾಕ್‌ನಲ್ಲಿ ಗೋಧಿ ಹಿಟ್ಟಿಗಾಗಿ ಕಿತ್ತಾಡುತ್ತಿರುವ ದೃಶ್ಯಗಳು ಇತ್ತೀಚಿನದಲ್ಲ

ಜನರ ಗುಂಪೊಂದು ಗೋಧಿ ಹಿಟ್ಟಿನ ಚೀಲಗಳಿಗಾಗಿ ಪರಸ್ಪರ ಕಿತ್ತಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. “ಶ್ರೀಲಂಕಾ ಮತ್ತು ಚೀನಾದ ನಂತರ, ಈಗ ಪಾಕಿಸ್ತಾನದಲ್ಲಿ ಹಿಟ್ಟಿಗಾಗಿ ಕಿತ್ತಾಡುತ್ತಿರುವ ಜನರ ಸ್ಥಿತಿಯನ್ನು ನೋಡಿ ಎಂದು ಪ್ರತಿಪಾದಿಸಿ ಶ್ರೀ @narendramodi ಜೀ ಅವರ ಭಾರತದಲ್ಲಿರುವುದಕ್ಕೆ ಧನ್ಯವಾದಗಳು” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿರುವ ಪಾಕಿಸ್ತಾನದಲ್ಲಿ ಜನರಿಗೆ ತಿನ್ನಲೂ ಅನ್ನವಿಲ್ಲ ಎಂಬುದನ್ನು ಈ ವಿಡಿಯೊ ಸೂಚಿಸುತ್ತದೆ ಎಂದು ಅವರು ಉಲ್ಲೇಖಿಸಿತ್ತಾ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಇಂಡಿಯಾ ಟುಡೇ ಗ್ರೂಪ್‌ನ ಗೌರವ್ ಸಾವಂತ್ ಅದೇ ಕ್ಲಿಪ್ ಅನ್ನು ಟ್ವೀಟ್ ಮಾಡಿದ್ದಾರೆ ಮತ್ತು ಪಾಕಿಸ್ತಾನದ ಮಾಜಿ ಪ್ರಧಾನಿ ಜುಲ್ಫಿಕರ್ ಅಲಿ ಭುಟ್ಟೋ ಅವರ ಕುಖ್ಯಾತ ಭಾಷಣವನ್ನು ಉಲ್ಲೇಖಿಸಿದ್ದಾರೆ. 90 ರ ದಶಕದ ಆರಂಭದಲ್ಲಿ ಕಾಶ್ಮೀರದಲ್ಲಿ ಮೊಳಗಿದ ಘೋಷಣೆಗಳ ಬಗ್ಗೆಯೂ ಅವರು ಉಲ್ಲೇಖಿಸಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಪಾಕ್‌ನಲ್ಲಿ ಗೋಧಿ ಹಿಟ್ಟಿಗಾಗಿ ನಡೆಯುತ್ತಿರುವ ಕಿತ್ತಾಟದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು ಅದನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ ಸರ್ಚ್ ಮಾಡಿದಾಗ, ಸೆಪ್ಟೆಂಬರ್ 2022 ರಿಂದ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರ ಟ್ವೀಟ್ ಲಭ್ಯವಾಗಿದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಕುರಿತು ಚರ್ಚಿಸಿದ ಪಾಕ್ ಪ್ರಧಾನಿ ಶೆಬಾಜ್ ಷರೀಫ್ ಅವರನ್ನು ಭೇಟಿಯಾದ ಫೋಟೋವನ್ನು ಗುಟೆರಸ್ ಟ್ವೀಟ್ ಮಾಡಿದ್ದರು.

ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿರುವ ಈ ವಿಡಿಯೊ ಪಾಕಿಸ್ತಾನದ ಈಗಿನ ಆರ್ಥಿಕ ಬಿಕ್ಕಟ್ಟಿಗೆ ಸಂಬಂಧಿಸಿದ್ದಲ್ಲ ಎಂದು ‘ಆಲ್ಟ್‌ ನ್ಯೂಸ್’ ವೆಬ್‌ಸೈಟ್ ಫ್ತಾಕ್ಟ್‌ಚೆಕ್ ವರದಿಯನ್ನು ಪ್ರಕಟಿಸಿದೆ. ಪಾಕಿಸ್ತಾನವು ಈ ಹಿಂದೆ ಭೀಕರ ಪ್ರವಾಹಕ್ಕೆ ಒಳಗಾದ ಸಮಯದಲ್ಲಿ ನೀಡಲಾಗಿದ್ದ ಆಹಾರದ ಪೊಟ್ಟಣಗಳಿಗಾಗಿ ಸಂತ್ರಸ್ತರು ಮುಗಿಬಿದ್ದಿದ್ದರು. ಈ ವಿಡಿಯೊ ಕನಿಷ್ಠ ನಾಲ್ಕು ತಿಂಗಳು ಹಳೆಯದಾಗಿದ್ದು, ಈಗಿನ ಪಾಕಿಸ್ತಾನದ ಆರ್ಥಿಕ ಬಿಕ್ಕಟ್ಟನ್ನು ಪ್ರತಿನಿಧಿಸಿದೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ ಎಂದು ವೆಬ್‌ಸೈಟ್ ತಿಳಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಗೋಧಿ ಹಿಟ್ಟಿಗಾಗಿ ಕಿತ್ತಾಡುತ್ತಿರುವ ವಿಡಿಯೋ ಇತ್ತೀಚಿನದಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಡ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ನಿದ್ದೆಯಿಂದ ತಕ್ಷಣಕ್ಕೆ ಎದ್ದರೆ ಹೃದಯಾಘಾತ ಸಂಭವಿಸುವುದೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights