ಫ್ಯಾಕ್ಟ್‌ಚೆಕ್: ಮಂಗಳೂರಿನ ಮಲಬಾರ್ ಚಾರಿಟೇಬಲ್ ಸ್ಕಾಲರ್‌ಶಿಪ್‌ಅನ್ನು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡಿದೆಯೇ?

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ ತಮ್ಮ ವ್ಯವಹಾರದ ಭಾಗವಾಗಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತದೆ ಎಂಬ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಪ್ರತೀ ವರ್ಷ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಅನ್ನು ನೀಡುತ್ತಾ ಬಂದಿದೆ. ಆದರೆ ಈ ಬಾರಿ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಿದೆ ಎಂದು  ಪ್ರತಿಪಾದಿಸಿ ಬುರ್ಖಾ ಧರಿಸಿದ ಮುಸ್ಲಿಂ ವಿದ್ಯಾರ್ಥಿಗಳ ಗುಂಪಿಗೆ ಸ್ಕಾಲರ್‌ಶಿಪ್ ನೀಡುತ್ತಿರುವಂತೆ ಫೋಟೋವನ್ನು  ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರೆರು, ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಮಲಬಾರ್ ಅಂಗಡಿಯಲ್ಲಿ ಚಿನ್ನವನ್ನು ಖರೀದಿಸಲು ಹಿಂದೂಗಳು ಸೇರಿದಂತೆ ಎಲ್ಲರೂ ಹೋಗುತ್ತಾರೆ. ಆದರೆ ವಿದ್ಯಾರ್ಥಿ ವೇತನವನ್ನು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತದೆ. ಹಿಂದೂಗಳು ಈ ಹುಸಿ ಸೆಕ್ಯುಲರ್, ಮಲಬಾರ್ ಚಿನ್ನ ಮತ್ತು ವಜ್ರದ ಜೈಹಾದಿ ಮನಸ್ಥಿತಿಯನ್ನು ಮರೆಯಬೇಡಿ. ಎಂದು ಪ್ರತಿಪಾದಿಸಿ ಹಂಚಿಕೊಂಡಿದ್ದಾರೆ.

https://twitter.com/madhumaiya/status/1615894675512233984

ಹಾಗಿದ್ದರೆ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಕೇವಲ ಮುಸ್ಲಿಂ ವಿದ್ಯಾರ್ಥಿಗಳಿಗೆ ಮಾತ್ರವೇ ಆರ್ಥಿಕ ಸಹಾಯ (ಸ್ಕಾಲರ್‌ಶಿಪ್) ನೀಡಿದೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಲು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಟ್ವಿಟರ್ ಅನ್ನು ಪರಿಶೀಲಿಸಿದಾಗ, ಮಲಬಾರ್ ಗೋಲ್ಡ್ ಮತ್ತು ಡೈಮಂಡ್ ಕಂಪನಿಯು ಫೋಟೋವನ್ನು ಹಂಚಿಕೊಳ್ಳುವ ಕರಪತ್ರದ ಪ್ರತಿಯು ಕಂಡುಬಂದಿದೆ. ಮಂಗಳೂರಿನ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸುಮಾರು 60 ಕಾಲೇಜುಗಳಲ್ಲಿ ಕಲಿಯುತ್ತಿರುವ 630 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ ಎಂದು ಕರಪತ್ರದಲ್ಲಿ ತಿಳಿಸಲಾಗಿದೆ. ಈ ಕರಪತ್ರದಲ್ಲಿ ನೀಡಿರುವ ವಿವರಗಳ ಪ್ರಕಾರ ಫೋಟೋದಲ್ಲಿ ಕಾಣುತ್ತಿರುವ ವಿದ್ಯಾರ್ಥಿಗಳು ಉಪ್ಪಿನಂಗಡಿ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿಗಳು.


ಆದರೆ, ಈ ಕರಪತ್ರದಲ್ಲಿ ಪ್ರಕಟವಾಗಿರುವ ಚಿತ್ರಗಳಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದೆ. ಮುಸ್ಲಿಂ ವಿದ್ಯಾರ್ಥಿಗಳಿಗೆ ಹಾಗೂ ಅನ್ಯ ಧರ್ಮದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿರುವುದು ಸ್ಪಷ್ಟವಾಗಿದೆ. ಮಂಗಳೂರಿನಲ್ಲಿ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ್ದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದ ಇನ್ನೂ ಕೆಲವು ಫೋಟೋಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಈ ಫೋಟೋಗಳಲ್ಲಿ, ಪೋಸ್ಟ್‌ನಲ್ಲಿ ಹಂಚಿಕೊಂಡ ಫೋಟೋಗಳಲ್ಲಿ ಕಂಡುಬರುವ ಜನರು ಹಿಂದೂ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿರುವುದನ್ನು ಕಾಣಬಹುದು. ಈ ಘಟನೆಗೆ ಸಂಬಂಧಿಸಿದಂತೆ ಸುದ್ದಿ ಸಂಸ್ಥೆಗಳು ಪ್ರಕಟಿಸಿದ ಸುದ್ದಿ ವರದಿಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಮಲಬಾರ್ ಚಾರಿಟೇಬಲ್ ಟ್ರಸ್ಟ್ ತನ್ನ ವೆಬ್‌ಸೈಟ್‌ನಲ್ಲಿ ಜಾತಿ ಮತ್ತು ಧರ್ಮ ಬೇಧವಿಲ್ಲದೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ನೀಡುತ್ತಿದೆ ಎಂದು ತಿಳಿಸಿದೆ. ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಅರ್ಹತಾ ಮಾನದಂಡವು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಈ ವಿದ್ಯಾರ್ಥಿವೇತನವನ್ನು ಅರ್ಹತೆ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂದು ಹೇಳುತ್ತದೆ.

ಮಲಬಾರ್ ಸಂಸ್ಥೆಯು ಮುಸ್ಲಿಮರಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡುತ್ತದೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಫ್ಯಾಕ್ಟ್‌ಲಿ ಫ್ಯಾಕ್ಟ್‌ಚೆಕ್ ಮಾಡಿದೆ. ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಆಡಳಿತ ಮಂಡಳಿಯು FACTLY ಗೆ ವಿವರಣೆ ನೀಡಿದ್ದು, “ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಈ ಸುದ್ದಿ ಸಂಪೂರ್ಣವಾಗಿ ಸುಳ್ಳು. ಮಲಬಾರ್ ಚಾರಿಟೇಬಲ್ ಟ್ರಸ್ಟ್ ಜಾತಿ ಮತ್ತು ಧರ್ಮದ ಆಧಾರದ ಮೇಲೆ ವಿದ್ಯಾರ್ಥಿವೇತನವನ್ನು ನೀಡುವುದಿಲ್ಲ” ಎಂದು  ಸ್ಪಷ್ಟಪಡಿಸಿದ್ದಾರೆ. ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸ್ಕಾಲರ್ ಶಿಪ್ ಪಡೆದಿರುವ ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಗ್ರೂಪ್ ಫೋಟೋ ಶೇರ್ ಮಾಡಿದ್ದು, ಮಲಬಾರ್ ಚಾರಿಟಬಲ್ ಟ್ರಸ್ಟ್ ಕೇವಲ ಮುಸ್ಲಿಮರಿಗೆ ಮಾತ್ರ ವಿದ್ಯಾರ್ಥಿವೇತನ ನೀಡುತ್ತಿದೆ ಎಂಬ ತಪ್ಪು ಸಂದೇಶವನ್ನು ಹಂಚಿಕೊಳ್ಳುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಅರ್ಹತೆ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳ ಆಧಾರದ ಮೇಲೆ ಮಲಬಾರ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯ ವಿದ್ಯಾರ್ಥಿವೇತನಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಮಲಬಾರ್ ಚಾರಿಟಬಲ್ ಟ್ರಸ್ಟ್ ಸ್ಕಾಲರ್‌ಶಿಪ್ ಡಿಪ್ಲೊಮಾದೊಂದಿಗೆ ತಮ್ಮ ಫೋಟೋವನ್ನು ಹಂಚಿಕೊಳ್ಳುವ ಮುಸ್ಲಿಂ ವಿದ್ಯಾರ್ಥಿಗಳು ಮಾತ್ರ ಮಲಬಾರ್ ಚಾರಿಟಬಲ್ ಟ್ರಸ್ಟ್ ಮುಸ್ಲಿಮರಿಗೆ ಮಾತ್ರ ವಿದ್ಯಾರ್ಥಿವೇತನವನ್ನು ನೀಡುತ್ತದೆ ಎಂದು ತಪ್ಪಾಗಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ:  ಫ್ಯಾಕ್ಟ್‌ಚೆಕ್: ಈ ಫೋಟೊದಲ್ಲಿ ಇರುವುದು ವಿಶ್ವದ ಅತ್ಯಂತ ಹೆಚ್ಚು ತೂಕದ ಮಗುವಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights