ಫ್ಯಾಕ್ಟ್‌ಚೆಕ್: ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಸಿಲುಕಿರುವ BJP ಸಂಸದ ಕುಸ್ತಿಪಟುವಿಗೆ ಕಪಾಳಕ್ಕೆ ಹೊಡೆದದ್ದು ಏಕೆ?

ಭಾರತದ ಪದಕ ವಿಜೇತ ಕುಸ್ತಿಪಟುಗಳಾದ ವಿನೇಶ್ ಫೋಗಟ್, ಸಾಕ್ಷಿ ಮಲಿಕ್, ಅಂಶು ಮಲಿಕ್ ಮತ್ತು ಬಜರಂಗ್ ಪುನಿಯಾ ಕೈಸರ್‌ಗಂಜ್‌ನ BJP ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ದೈಹಿಕ ಕಿರುಕುಳದ ಆರೋಪ ಮಾಡಿದ್ದಾರೆ. ಕ್ರೀಡಾಪಟುಗಳು ತಮ್ಮ ವಿರುದ್ಧ ನಡೆದ ದೌರ್ಜನ್ಯ ವಿರೋಧಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕೆ ಮಹಿಳಾ ಕುಸ್ತಿಪಟುಗಳು ದೂರುಗಳೊಂದಿಗೆ ಮುಂದಾಗಿದ್ದಾರೆ ಈ ವೇಳೆ ಕುಸ್ತಿಪಟು ಒಬ್ಬರು ಅವರ ಕೃತ್ಯವನ್ನು ಪ್ರಶ್ನಿಸಿದ್ದಕ್ಕೆ ಸಾರ್ವಜನಿಕವಾಗಿ ತಳ್ಳಿ ಕಪಾಳಕ್ಕೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೊಡೆದಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ವೈರಲ್ ಘಟನೆಯು 2021 ರ ಅಂಡರ್-15 ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ನ ನಡೆದ ಸಂದರ್ಭದಲ್ಲಿ ನಡೆದ ಘಟನೆ ಎಂದು ವರದಿಯಾಗಿದೆ. ವೇದಿಕೆಯಲ್ಲಿ ನಿಂತಿದ್ದ ಯುವಕನಿಗೆ ಬ್ರಿಜ್ ಭೂಷಣ್ ಹೊಡೆಯುತ್ತಿರುವ ದೃಶ್ಯಗಳು ವಿಡಿಯೋದಲ್ಲಿದೆ. ವೇದಿಕೆಯಲ್ಲಿದ್ದ ಮುಖಂಡರು ಬ್ರಿಜ್ ಭೂಷಣ್‌ನನ್ನು ತಡೆದು ಯುವಕನನ್ನು ವೇದಿಕೆಯಿಂದ ಕೆಳಗಿಳಿಸಿದ್ದಾರೆ.

ಕಪಾಳಕ್ಕೆ ಹೊಡೆಯಲು ಕಾರಣವೇನು?

ಜಾರ್ಖಂಡ್‌ನಲ್ಲಿ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಡಿಸೆಂಬರ್ 18, 2021 ರಂದು ನಡೆದಿತ್ತು. ಸ್ಪರ್ಧೆಯಲ್ಲಿ ಭಾಗವಹಿಸಲು ಬಂದಿದ್ದ ವಿದ್ಯಾರ್ಥಿಗೆ 15 ವರ್ಷಕ್ಕಿಂತ ಮೇಲ್ಪಟ್ಟಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಆತನನ್ನು ಪಂದ್ಯದಿಂದ ಅನರ್ಹಗೊಳಿಸಲಾಗಿದೆ. ಇದನ್ನು ಪ್ರಶ್ನಿಸಲು ವೇದಿಕೆಗೆ ಬಂದ ಯುವಕನಿಗೆ ಬ್ರಿಜ್ ಭೂಷಣ್ ಕಪಾಳಮೋಕ್ಷ ಮಾಡಿದ್ದಾರೆ.

ಅನರ್ಹಗೊಂಡ ವಿದ್ಯಾರ್ಥಿಯು ಉತ್ತರ ಪ್ರದೇಶ ಕುಸ್ತಿ ಫೆಡರೇಶನ್ ಅಧ್ಯಕ್ಷರ ಸಂಸ್ಥೆಯಲ್ಲಿ ಕುಸ್ತಿ ಕಲಿಯುತ್ತಿದ್ದ ಇದೇ ಪ್ರಭಾವವನ್ನು ಬಳಸಿ ಪಂದ್ಯದಲ್ಲಿ ಸ್ಥಾನ ಪಡೆಯಲು ಪ್ರಯತ್ನಿಸಿದ್ದನು ಎಂದು ಡಬ್ಲ್ಯುಎಫ್‌ಐ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿವರಿಸಿದ್ದರು. ಈ ಘಟನೆಗೂ ನಡೆಯುತ್ತಿರುವ ಪ್ರಸ್ತುತ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ದೂರು ಅಥವಾ ಹಣ ದುರುಪಯೋಗಕ್ಕೂ ಯಾವುದೇ ಸಂಬಂಧವಿಲ್ಲ.

gusthi-respresentational

ಕುಸ್ತಿಪಟುಗಳ ಮುಷ್ಕರದ ಸುದ್ದಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಕ್ರೀಡಾ ಆಟಗಾರರೊಂದಿಗೆ ಚರ್ಚೆ ನಡೆಸಿದ್ದು, ಜ.21ರಂದು ನಡೆದ ಮುಷ್ಕರವನ್ನು ಇತ್ಯರ್ಥಗೊಳಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಲಭ್ಯವಿರುವ ಮಾಹಿತಿ ಮತ್ತು ಸುದ್ದಿಗಳ ಆಧಾರದಲ್ಲಿ 2021ರಲ್ಲಿ ರಾಂಚಿಯಲ್ಲಿ ನಡೆದ ರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯ ವೇಳೆ ನಡೆದ ಘಟನೆಯನ್ನು ಪ್ರಸ್ತುತ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ  ಪ್ರಕರಣಕ್ಕೆ ಲಿಂಕ್ ಮಾಡಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಇಂಡಿಯಾ ಟುಡೇ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಪ್ರಾಧಾನಿ ಮೋದಿ ಪಠಾಣ್ ಚಿತ್ರದ ಟ್ರೇಲರ್ ನೋಡಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights