ಫ್ಯಾಕ್ಟ್‌ಚೆಕ್ : ಟರ್ಕಿ ಭೂಕಂಪದ ಅವಶೇಷಗಳ ನಡುವೆ ನಾಯಿಯೊಂದು ತನ್ನ ಮಾಲೀಕನನ್ನು ಹುಡುಕುತ್ತಿರುವ ಫೋಟೊದ ವಾಸ್ತವವೇನು?

ಟರ್ಕಿ ಮತ್ತು ವಾಯುವ್ಯ ಸಿರಿಯಾದಲ್ಲಿ ಸಂಭವಿಸಿದ ಭಯಾನಕ ಭೂಕಂಪದಿಂದ 4000 ಕ್ಕೂ ಹೆಚ್ಚು ಜನರ ಸಾವಿಗೀಡಾಗಿದ್ದಾರೆ. ಸಾವಿರಾರು ಜನರು ಗಾಯಗೊಂಡಿದ್ದಾರೆ. ಈ ಪ್ರದೇಶವು ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಒಂದಾಗಿದೆ. ಮಧ್ಯ ಸಿರಿಯಾದ ಹಮಾದಲ್ಲಿ ಹಲವಾರು ಕಟ್ಟಡಗಳು ಭಾಗಶಃ ಕುಸಿದಿದ್ದು, ನಾಗರಿಕ ರಕ್ಷಣಾ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಅವಶೇಷಗಳಡಿಯಲ್ಲಿ ಬದುಕುಳಿದವರನ್ನು ಹೊರತೆಗೆಯುವ ಕೆಲಸ ಮಾಡುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋವೊಂದು ವೈರಲ್ ಆಗುತ್ತಿದ್ದು , ಭೂಕಂಪ ಸಂಭವಿಸಿದ ನಂತರ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ತನ್ನ ಮಾಲೀಕರನ್ನು ರಕ್ಷಿಸಲು ನಾಯಿಯೊಂದು ಪ್ರಯತ್ನಿಸುತ್ತಿದೆ.

 

View this post on Instagram

 

A post shared by JKUpdates (Official) (@jkupdates.in)

“Heartbreaking Photo of The Day”  ಎಂಬ ಹೇಳಿಕೆಯೊಂದಿಗೆ  ಎರಡು ಚಿತ್ರಗಳನ್ನು ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಟ್ವಿಟರ್‌ನಲ್ಲಿ ಹಲವಾರು ಬಾರಿ ಹಂಚಿಕೊಳ್ಳಲಾಗಿದೆ. ಭೂಕಂಪ ಸಂಭವಿಸಿದಾಗ ನಾಯಿಯೊಂದು ಬದುಕುಳಿದಿದ್ದು ತನ್ನನ್ನು ಪ್ರೀತಿಯಿಂದ ನೋಡಿಕೊಂಡ ಮಾಲೀಕನನ್ನು ಅವಶೇಷಗಳ ಅಡಿಯಲ್ಲಿ ಹುಡುಕುತ್ತಿರುವ ದೃಶ್ಯ ಮನಕಲಕುವಂತಿದೆ ಎಂದು ಹೇಳಲಾಗುತ್ತಿದೆ.

ಹಾಗಿದ್ದರೆ ಈ ವೈರಲ್ ಪೋಟೊದಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ, ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿರುವ ಭೂಕಂಪನಕ್ಕೆ ಸಂಬಂಧಿಸಿದೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ನೀಲಿ ಕಾಲರ್ ಹೊಂದಿರುವ ನಾಯಿಯ ಚಿತ್ರವನ್ನು ಜನವರಿ 4, 2019 ರಂದು ಪೋಸ್ಟ್ ಮಾಡಲಾಗಿದೆ. ಸ್ಟಾಕ್ ಫೋಟೋಗ್ರಫಿ ಏಜೆನ್ಸಿ ಅಲಾಮಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಘಟನಾ ಸ್ಥಳವನ್ನು ಪರಿಶೀಲಿಸಲು ಮತ್ತಷ್ಟು ಸರ್ಚ್ ಮಾಡಿದಾಗ, ಗೆಟ್ಟಿ ಇಮೇಜಸ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಚಿತ್ರವನ್ನು ಜೆಕ್ ರಿಪಬ್ಲಿಕ್ ಪ್ರದೇಶ ಎಂದು ನಮೂದಿಸಲಾಗಿದೆ.

ಈ ಚಿತ್ರವನ್ನು ಎಲ್ಲಿ ಸೆರೆಹಿಡಿಯಲಾಗಿದೆ ಎಂದು ಸ್ವತಂತ್ರವಾಗಿ ಪರಿಶೀಲಿಸಲು ಸಾಧ್ಯಗಿಲ್ಲ. ಆದರೆ ಕನಿಷ್ಠ ನಾಲ್ಕು ವರ್ಷಗಳಷ್ಟು ಹಳೆಯದಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ಬೇರೆ ಬೇರೆ ಸಂದರ್ಭದಲ್ಲಿ ಈ ಫೋಟೋವನ್ನು ಹಂಚಿಕೊಳ್ಳಲಾಗುತ್ತಿದೆ. ಪ್ರಸ್ತುತ ಟರ್ಕಿಯಲ್ಲಿ ಸಂಭವಿಸಿರುವ ಭೂಕಂಪನಕ್ಕೂ ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ನ್ಯೂಸ್ ಮೊಬೈಲ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಇದು 2023ರ ಕರ್ನಾಟಕ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights