ಫ್ಯಾಕ್ಟ್‌ಚೆಕ್: ಹಿಂಡೆನ್‌ಬರ್ಗ್ ಸಂಸ್ಥೆಯ ಸಂಸ್ಥಾಪಕ ನಾಥನ್ ಆಂಡರ್ಸನ್ನೊಂದಿಗೆ ರಾಹುಲ್ ಗಾಂಧಿ ಎಂದು ಸುಳ್ಳು ಫೋಟೊ ಹಂಚಿಕೆ

ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆಯ ಸಂಸ್ಥಾಪಕ ನಾಥನ್ ಆಂಡರ್ಸನ್ ಅವರೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಇರುವ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಗುಜರಾತ್ ಮೂಲದ ಉದ್ಯಮಿ ಅದಾನಿ ಅವರ ಸಂಸ್ಥೆಯ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಸಂಸ್ಥೆ ಮಾಡಿರುವ ಆರೋಪದ ಬೆನ್ನಲ್ಲೆ ಪೋಸ್ಟ್‌ ವೈರಲ್ ಆಗಿದೆ.

“ಪಪ್ಪು ಜೊತೆ ನಿಂತವರು ವ್ಯಕ್ತಿ ಹಿಂಡೆನ್‌ಬರ್ಗ್ ಮುಖ್ಯಸ್ಥ ನಾಥನ್ ಆಂಡರ್ಸನ್. ಅದಾನಿ ವಿರುದ್ಧ ಹೂಡಿದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ಈ ಫೋಟೋ ನೋಡಿದ್ರೆ ಅರ್ಥ ಆಗುತ್ತೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೋದ ಕುರಿತು ಮಾಹಿತಿ ಪಡೆಯಲು ‘ಗೂಗಲ್ ರಿವರ್ಸ್ ಇಮೇಜ್ ಸರ್ಚ್’ ಮಾಡಿದಾಗ, ಇದು 2018 ರಲ್ಲಿ ಇದೇ ಚಿತ್ರದೊಂದಿಗೆ ಪ್ರಕಟಗೊಂಡ ಸುದ್ದಿ ವರದಿಗಳು (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಲಭ್ಯವಾಗಿವೆ.

ಲಭ್ಯವಾದ ವರದಿಗಳ ಪ್ರಕಾರ, ಚಿತ್ರದಲ್ಲಿನ ವ್ಯಕ್ತಿ ನೀಲ್ಸ್ ಆನೆನ್ ಎಂಬ ಜರ್ಮನ್ ರಾಜಕಾರಣಿ. ರಾಹುಲ್ ಗಾಂಧಿ ಅವರು ಆಗಸ್ಟ್ 2018 ರಲ್ಲಿ ಯುನೈಟೆಡ್ ಕಿಂಗ್‌ಡಮ್ ಮತ್ತು ಜರ್ಮನಿಗೆ ನಾಲ್ಕು ದಿನಗಳ ಪ್ರವಾಸದಲ್ಲಿದ್ದರು ಮತ್ತು ಅದರ ಭಾಗವಾಗಿ  ನೀಲ್ಸ್ ಅವರನ್ನು ಭೇಟಿಯಾದರು. ಅದೇ ಚಿತ್ರವನ್ನು ಕಾಂಗ್ರೆಸ್ ಪಕ್ಷವು ತಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದೆ, ಅದನ್ನು ಇಲ್ಲಿ ನೋಡಬಹುದು.

ಹಿಂಡೆನ್‌ಬರ್ಗ್ ಸಂಶೋಧನೆ, ಫೋರೆನ್ಸಿಕ್ ಹಣಕಾಸು ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ನಾಥನ್ ಆಂಡರ್ಸನ್.  ಅದಾನಿ ಸಮೂಹದ ಕಂಪನಿಗಳು ಸಾಲ ಪಡೆಯುವುದಕ್ಕಾಗಿ ಕೃತಕವಾಗಿ ತಮ್ಮ ಷೇರುಗಳ ಬೆಲೆ ಏರಿಸಿಕೊಂಡಿದೆ. ತಮ್ಮ ಷೇರುಗಳ ಬೆಲೆಯನ್ನು ಅಕ್ರಮವಾಗಿ ಏರಿಸಿ, ಅವುಗಳ ಮೌಲ್ಯ ಹೆಚ್ಚಿಸಿಕೊಂಡು ನಂತರ ಅವುಗಳನ್ನು ಅಡವಿಟ್ಟು ಸಾಲ ಪಡೆದಿವೆ. ಸಾಗರದಾಚೆಗಿನ ವ್ಯವಹಾರಗಳಲ್ಲಿ ತೆರಿಗೆ ವಂಚಿಸುವುದಕ್ಕಾಗಿ ದಶಕಗಳ ಕಾಲ ಲೆಕ್ಕಪತ್ರಗಳಲ್ಲಿ ವಂಚನೆ ನಡೆಸಿವೆ. ಆ ಮೂಲಕ ಅತಿ ಹೆಚ್ಚು ಸಾಲದ ಸುಳಿಗೆ ಸಿಲುಕಿದ್ದು, ಒಟ್ಟಾರೆ ಅದರ ಆರ್ಥಿಕ ತಳಪಾಯವೇ ಅಪಾಯದಲ್ಲಿದೆ ಎಂದು ಹಿಂಡೆನ್‌ಬರ್ಗ್ ವರದಿ ಆರೋಪಿಸಿದೆ. ನಾಥನ್ ಬಗ್ಗೆ ಹೆಚ್ಚಿನ ವಿವರಗಳನ್ನು ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ ಈ ಚಿತ್ರದಲ್ಲಿ ರಾಹುಲ್ ಗಾಂಧಿಯವರೊಂದಿಗೆ ಇರುವ ವ್ಯಕ್ತಿ ನೀಲ್ಸ್ ಆನೆನ್, ಒಬ್ಬ ಜರ್ಮನ್ ರಾಜಕಾರಣಿ.  ಈ ಚಿತ್ರವನ್ನು 2018 ರಲ್ಲಿ ರಾಹುಲ್ ಅವರ ನಾಲ್ಕು ದಿನಗಳ ಭೇಟಿಗೆಂದು ಯುನೈಟೆಡ್ ಕಿಂಗ್‌ಡಮ್ ಮತ್ತು ಜರ್ಮನಿ ತೆರಳಿದ್ದ ಸಮಯದಲ್ಲಿ ತೆಗೆದುಕೊಳ್ಳಲಾಗಿದೆ. ಈ ಹಳೆಯ ಫೋಟೊವನ್ನು ರಾಹುಲ್ ಗಾಂಧಿ ಹಿಂಡೆನ್‌ಬರ್ಗ್ ಸಂಶೋಧನೆಯ ಸಂಸ್ಥಾಪಕ ನಾಥನ್ ಆಂಡರ್ಸನ್ ಅವರೊಂದಿಗೆ ಇದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: ಕೆಲಸ ಮಾಡದ AAP ಶಾಸಕನಿಗೆ ಮಹಿಳೆಯೊಬ್ಬರು ಕೆನ್ನೆಗೆ ಬಾರಿಸಿದ್ದು ನಿಜವೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights