ಫ್ಯಾಕ್ಟ್‌ಚೆಕ್ : 2018 ರಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಘಟನೆಯನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೆ

ಮಹಾರಾಷ್ಟ್ರದ ಥಾಣೆಯಲ್ಲಿ ನಿರ್ಮಾಣ ಹಂತದ ಫ್ಲೈಓವರ್ ಸೇತುವೆ ಕುಸಿದು ಬಿದ್ದ ಪರಿಣಾಮ ಅಪಾರ ಪ್ರಮಾಣದಲ್ಲಿ ಸಾವು ನೋವು ಸಂಭವಿಸಿದೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದೆ. ಕಾರು, ಆಟೋ ರಿಕ್ಷಾ ಮತ್ತು ಮಿನಿ ಬಸ್‌ ಸೇರಿದಂತೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ.

ನಿರ್ಮಾಣ ಹಂತದ ಮೇಲ್ಸೇತುವೆಯ ಭಾರೀ ದೊಡ್ಡ ಕಾಂಕ್ರೀಟ್ ಚಪ್ಪಡಿಯೊಂದು ಕೆಳಕ್ಕೆ ಕುಸಿದು ಬಿದ್ದು. ಬಸ್ ಮತ್ತು ಕಾರುಗಳು ಅದರ ಅಡಿಯಲ್ಲಿ ಸಿಲುಕಿಕೊಂಡಿದ್ದವು. ಮೇಲ್ಸೇತುವೆಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಹಲವಾರು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿ ಸಾನಪ್ಪಿದ್ದಾರೆ ಈ ಘಟನೆ ಮಹಾರಾಷ್ಟದ ತಾಣೇಯಲ್ಲಿ ಸಂಭವಿಸಿದೆ ಎಂದು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ ಈ ವೈರಲ್ ಪೋಸ್ಟ್‌ಗಳಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ವಿಡಿಯೊ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, 16 ಮೇ 2018 ರಂದು NDTV ಮಾಡಿದ ವರದಿಯೊಂದು ಲಭ್ಯವಾಯಿತು. ವಾರಣಾಸಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆ ಕುಸಿದು 18 ಸಾವು ಎಂಬ ಶೀರ್ಷಿಕೆಯೊಂದಿಗೆ ವರದಿಯನ್ನು ಬಿತ್ತರಿಸಿದೆ.

varan1

ವರದಿಗಳ ಪ್ರಕಾರ, ವಾರಾಣಸಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದ ಫ್ಲೈಓವರ್‌ನ ಎರಡು ಪಿಲ್ಲರ್‌ಗಳು ಕುಸಿದುಬಿದ್ದಿವೆ. ಇದರಿಂದ ಪಿಲ್ಲರ್‌ಗಳ ಮೇಲೆ ಅಳವಡಿಸಿದ್ದ ಬೃಹತ್ ಗಾತ್ರದ ಕಾಂಕ್ರೀಟ್ ಸ್ಲ್ಯಾಬ್ ಧರೆಗುರುಳಿದೆ. ಅದರ ಅಡಿಯಲ್ಲಿ ಸಿಲುಕಿದ ಕಾರ್‌ಗಳು ಮತ್ತು ಬಸ್‌ ನಜ್ಜುಗುಜ್ಜಾಗಿವೆ.

ಅವಶೇಷಗಳ ಅಡಿಯಲ್ಲಿ ಸಿಲುಕಿರುವವರಲ್ಲಿ ಹೆಚ್ಚಿನವರು ಮೇಲ್ಸೇತುವೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರಾಗಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ತಂಡದ 250 ಸಿಬ್ಬಂದಿಯನ್ನು ಒಳಗೊಂಡ 5 ತಂಡಗಳು ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದವು. ಪೊಲೀಸರು ಕೂಡ ಸ್ಥಳದಲ್ಲಿದ್ದು, ನೆರವು ನೀಡಿ.  ಅವಶೇಷಗಳನ್ನು ತೆರವುಗೊಳಿಸಲು ಎಂಟು ಕ್ರೇನ್‌ಗಳನ್ನು ಬಳಸಲಾಗಿತ್ತು. 200 ಟನ್‌ಗೂ ಅಧಿಕ ತೂಕವನ್ನು ಎತ್ತಬಲ್ಲ ಸಾಮರ್ಥ್ಯದ ಕ್ರೇನ್‌ಅನ್ನು ತರಿಸಲಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ,  ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಘಟನೆ ಮಹಾರಾಷ್ಟ್ರದ ಥಾಣೆಗೆ ಸಂಬಂಧಿಸಿಲ್ಲ ಎಂಬುದು ಸ್ಪಷ್ಟವಾಗಿದೆ. ವಿಡಿಯೊ ವಾಸ್ತವವಾಗಿ ವಾರಣಾಸಿಯಿಂದ ಬಂದಿದ್ದು, 2018ರದ್ದು ಎಂಬುದು ಸ್ಪಷ್ಟವಾಗಿದೆ. ವಾರಣಾಸಿಯಲ್ಲಿ ನಡೆದ ಹಳೆಯ ಘಟನೆಯನ್ನು ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದಿದೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್: Basket ball ರೆಫರಿಯನ್ನೆ ಹೂಪ್‌ನೊಳಕ್ಕೆ ಎತ್ತಿ ಎಸೆದ್ರಾ ಮಹಿಳಾ ಆಟಗಾರ್ತಿ? ವೈರಲ್ ದೃಶ್ಯಗಳ ಹಿಂದಿನ ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights