ಫ್ಯಾಕ್ಟ್‌ಚೆಕ್ : ಅಪ್ರಾಪ್ತೆ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ವ್ಯಕ್ತಿ ಮುಸ್ಲಿಂ ಎಂದು ಸುಳ್ಳು ವಿಡಿಯೊ ಹಂಚಿಕೆ

16 ವರ್ಷದ ಅಪ್ರಾಪ್ತ ಬಾಲಕಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಕೂದಲು ಹಿಡಿದು ವ್ಯಕ್ತಿಯೊಬ್ಬ ಎಳೆದೊಯ್ದಿದ್ದಾನೆ. ಈ ಘಟನೆಯ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಆರೋಪಿಯನ್ನು ಹಿಂದೂ ಬಾಲಕಿಯ ಮೇಲೆ ಹಲ್ಲೆ ನಡೆದಿದೆ ಎಂದು ಕೋಮು ಪ್ರಚೋದನೆಯ ಹಿನ್ನಲೆಯಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಅಪ್ರಾಪ್ತ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಆಕೆಯ ಕೂದಲು ಹಿಡಿದು ರಸ್ತೆಯಲ್ಲಿ ಎಳೆದೊಯ್ದ ಆಘಾತಕಾರಿ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. #HindusUnderAttack ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಳ್ಳಲಾಗಿದೆ. ಹಿಂದೂಗಳ ಮೇಲೆ ದಾಳಿ ನಡೆಯುವಾಗ ಛತ್ತೀಸ್‌ಗಢ ಪೊಲೀಸರು ನಿದ್ದೆ ಮಾಡುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಸಾಮಾಜಿಕ ಮಾಧ್ಯಮಗಳ ಬಳೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ, ಘಟನೆಯು ಛತ್ತೀಸ್‌ಗಢದ ರಾಯ್‌ಪುರದ ಗುಧಿಯಾರಿ ಪ್ರದೇಶದ ಬೀದಿಗಳಲ್ಲಿ ನಡೆದಿದೆ. ಹಿಂಸಾಚಾರದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆ ವ್ಯಕ್ತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತನ್ನನ್ನು ಮದುವೆಯಾಗಲು ನಿರಾಕರಿಸಿದ್ದರಿಂದ ಮತ್ತು ತಮ್ಮ ಅಂಗಡಿಯಲ್ಲಿ ಕೆಲಸವನ್ನು ಬಿಟ್ಟಿದ್ದಕ್ಕಾಗಿ ಹತಾಶೆಗೊಂಡ ವ್ಯಕ್ತಿ, ಹರಿತವಾದ ಚಾಕುವಿನಿಂದ ಆಕೆಯ ಮೇಲೆ ದಾಳಿ ಮಾಡಿದ್ದಲ್ಲದೇ, ಬೀದಿಗಳಲ್ಲಿ ಆಕೆಯ ಕೂದಲು ಹಿಡಿದು ಎಳೆದೊಯ್ದಿದ್ದಾನೆ.

ಹಿಂಸೆಗೊಳಗಾದ ಬಾಲಕಿಯು ಆ ವ್ಯಕ್ತಿಯ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಮದುವೆಯಾಗುವುದಾಗಿ ಪ್ರಸ್ತಾಪ ಮಾಡಿದ್ದನು, ಆದರೆ ಆಕೆ ಮತ್ತು ಆಕೆಯ ಕುಟುಂಬದವರು ಮದುವೆಗೆ ಒಪ್ಪಲಿಲ್ಲ. ಆಗ ಬಾಲಕಿಯು ಅಲ್ಲಿ ಕೆಲಸ ಬಿಟ್ಟಿದ್ದಾಳೆ. ಆ ನಂತರದಲ್ಲಿ ಈ ಘಟನೆ ಸಂಭವಿಸಿದೆ” ಎಂದು ರಾಯ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗರವಾಲ್ ಎಎನ್‌ಐಗೆ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಗೆ ಕೋಮು ಬಣ್ಣ ಹಚ್ಚಿ ಹಂಚಿಕೊಳ್ಳಲಾಗುತ್ತಿದೆ ಎಂದು ಬೂಮ್ ಪೊಲೀಸ್‌ ಅಧಿಕಾರಿಗಳನ್ನು ಪ್ರಶ್ನಿಸಿದಾಗ, ಘಟನೆಗೆ ಸಂಬಂಧಿಸಿದಂತೆ ಯಾವುದೇ ಕೋಮು ಆಯಾಮವಾಗಲಿ, ಕೋಮು ಹಿನ್ನಲೆಯಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

”ಆರೋಪಿಯನ್ನು 47ವರ್ಷದ ಓಂಕಾರ ತಿವಾರಿ ಎಂದು ಪತ್ತೆ ಮಾಡಲಾಗಿದ್ದು, ಆತನ ಮೇಲೆ ಘಟನೆ ಸಂಬಂಧಿತ ಪ್ರಕರಣಗಳು ಮತ್ತು ಶಸ್ತ್ರಾಸ್ತ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವುದಾಗಿ” ಪೊಲೀಸರು ತಿಳಿಸಿದ್ದಾರೆ.

ಒಟ್ಟಾಅರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಮಗಳಲ್ಲಿ ವೈರಲ್ ಆಗಿರುವಂತೆ ಬಾಲಕಿ ಮೇಲೆ ದೌರ್ಜನ್ಯ ಎಸಗಿ ಚಾಕುವಿನಿಂದ ಹಲ್ಲೆ ಮಾಡಿರುವ ವ್ಯಕ್ತಿ 47ವರ್ಷದ ಓಂಕಾರ ತಿವಾರಿ ಹಿಂದೂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಸೂರ್ಯನಿಂದ ಕಳಚಿ ಬಿತ್ತೆ ಬೃಹತ್ ಗಾತ್ರದ ತುಂಡು? ಇದು ಅಪಾಯದ ಮುನ್ಸೂಚನೆಯೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights