ಫ್ಯಾಕ್ಟ್‌ಚೆಕ್ : ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಬೆಂಕಿ ಹಚ್ಚಿಕೊಂಡ ಘಟನೆ ನಡೆದಿದ್ದು ಉತ್ತರ ಪ್ರದೇಶದಲ್ಲಿ ಅಲ್ಲ!

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ವ್ಯಾಪಾರ ಮಳಿಗೆಗಳನ್ನು ಬುಲ್ಡೋಜರ್ ಮೂಲಕ ಕೆಡುವಲು ಮುಂದಾದಾಗ, ಬುಲ್ಡೋಜರ್ ಮುಂದೆ ಬಂದು ಪ್ರತಿಭಟಿಸಲು ಹೋಗಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿ ಮಾಡಿಕೊಂಡಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನು ಹಂಚಿಕೊಂಡಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದ ಕ್ರಮವನ್ನು (ಡೆಮಾಲಿಷನ್ ಡ್ರೈವ್) ಪ್ರತಿಭಟಿಸಿ ಇಬ್ಬರು ವ್ಯಕ್ತಿಗಳು ಆತ್ಮಾಹುತಿ ಮಾಡಿಕೊಂಡ ದೃಶ್ಯಗಳು ಉತ್ತರ ಪ್ರದೇಶದಿಂದ ಬಂದವು ಎಂದು ಹೇಳಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿವೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ದೃಶ್ಯಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 16 ಫೆಬ್ರವರಿ 2023ರಂದು ಬಿಹಾರದ ಪಾಟ್ನಾದಲ್ಲಿ ಈ ಘಟನೆ ನಡೆದಿದೆ ಎಂದು ವರದಗಳು ಲಭ್ಯವಾಗಿದೆ.

ವರದಿಯ ಪ್ರಕಾರ, 16 ಫೆಬ್ರವರಿ 2023 ರಂದು, ಅಧಿಕಾರಿಗಳ ತಂಡವು ಅತಿಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರವುಗೊಳಿಸಲು ಮುಂದಾದಾಗ ಹಾರ್ಡ್‌ವೇರ್ ಅಂಗಡಿಯ ಮಾಲೀಕ ಅನಿಲ್ ಕುಮಾರ್ ಅವರು ಬೆಂಕಿ ಹಚ್ಚಿಕೊಂಡರು. ನ್ಯೂಸ್ 18 ವರದಿಯ ಪ್ರಕಾರ, ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ ಅಲ್ಲ ಬದಲಿಗೆ ಬಿಹಾರದಲ್ಲಿ ಎಂಬುದು ಸ್ಪಷ್ಟವಾಗಿದೆ.

ಈ ವರದಿಗಳ ಆಧಾರದಲ್ಲಿ ಹೇಳುವುದಾದರೆ, ಅಕ್ರಮವಾಗಿ ನಿರ್ಮಿಸಿದ್ದ ಕಟ್ಟಡಗಳನ್ನು ತೆರುವುಗೊಳಿಸಲು ರೈಲ್ವೆ ಅಧಿಕಾರಿಗಳು ಮುಂದಾದಾಗ, ಪ್ರತಿಭಟನಾನಿರತ ಅಂಗಡಿಯ ಮಾಲೀಕ ಅನಿಲ್ ಕುಮಾರ್ ಅವರು ಬೆಂಕಿ ಹಚ್ಚಿಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಂತೆ, ಉತ್ತರ ಪ್ರದೇಶಕ್ಕೂ ಈ ಘಟನೆಗೂ ಸಂಬಂಧವಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಇಂದಿರಾ ಗಾಂಧಿ ಧರಿಸಿರುವುದು ಬುರ್ಖಾನು ಅಲ್ಲ ಹಿಜಾಬು ಅಲ್ಲ!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights