ಫ್ಯಾಕ್ಟ್ಚೆಕ್ : ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷದಲ್ಲಿ ಒಬ್ಬೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಸುಳ್ಳು ಹೇಳಿದ ಯೋಗಿ ಆದಿತ್ಯನಾಥ್
ಮಾರ್ಚ್ 6, 2023 ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಕ್ನೋದಲ್ಲಿ ಸಹಕಾರಿ ಕಬ್ಬು ಮತ್ತು ಸಕ್ಕರೆ ಕಾರ್ಖಾನೆ ಸೊಸೈಟಿಯ ಕೃಷಿ ಯಂತ್ರೋಪಕರಣ ಬ್ಯಾಂಕ್ಗಳಿಗಾಗಿ 77 ಟ್ರಾಕ್ಟರ್ಗಳನ್ನು ವಿತರಿಸಿದ್ದಾರೆ. ಈ ಸಂದರ್ಭದಲ್ಲಿ ಯೋಗಿ ಆದಿತ್ಯನಾಥ್ ಅವರು ಕಳೆದ ಆರು ವರ್ಷಗಳಲ್ಲಿ ಉತ್ತರ ಪ್ರದೇಶದಲ್ಲಿ ಯಾವುದೇ ರೈತ ಅಸಹಾಯಕರಾಗಿ ಆತ್ಮಹತ್ಯೆಗೆ ಯತ್ನಿಸಿಲ್ಲ ಎಂದು ಹೇಳಿದ್ದಾರೆ ಎಂದು NDTV ವರದಿ ಮಾಡಿದೆ.
"No Farmer Committed Suicide In UP In 6 Years": Yogi Adityanath https://t.co/hsCTZUUqlo pic.twitter.com/HvCeRRRgpp
— NDTV News feed (@ndtvfeed) March 6, 2023
ಈ ಘಟನೆಯನ್ನು ನ್ಯೂಸ್ 18 ಯುಪಿ ಉತ್ತರಾಖಂಡ್ ಲೈವ್ ವರದಿ ಮಾಡಿದೆ, ಅಲ್ಲಿ ಯೋಗಿ ಆದಿತ್ಯನಾಥ್ ಅವರು ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಹಾಗಿದ್ದರೆ ಯೋಗಿ ಆದಿತ್ಯನಾಥ್ ಅವರ ಅಧಿಕಾರಾವಧಿಯಲ್ಲಿ ರೈತರು ಸುಭೀಕ್ಷವಾಗಿದ್ದಾರೆಯೆ ಎಂದು ಯೋಗಿ ಆದಿತ್ಯನಾಥ್ ಅವರ ಮಾತುಗಳು ವಾಸ್ತವವಾಗಿ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್ಚೆಕ್ :
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧಿಕಾರಾವಧಿಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ನೀಡಿರುವ ಹೇಳಿಕೆಯ ಸತ್ಯಾಸತ್ಯತೆಯನ್ನು ತಿಳಿಯಲು ಸರ್ಕಾರದ ವೆಬ್ಸೈಟ್ಅನ್ನು ಪರಿಶೀಲಿಸಿದಾಗ, National Crime Records Bureau (NCRB) ವೆಬ್ಸೈಟ್ನಲ್ಲಿ ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮಾಹಿತಿ ಲಭ್ಯವಾಗಿದೆ.

ವಾರ್ಷಿಕ ವರದಿಯ ಪ್ರಕಾರ ‘ಭಾರತದಲ್ಲಿ ಅಪಘಾತದ ಸಾವುಗಳು ಮತ್ತು ಆತ್ಮಹತ್ಯೆಯ’ ವರದಿಗಳನ್ನು 2016 ರಿಂದ 2021 ರವರೆಗೆ ಉಲ್ಲೇಖಿಸಲಾಗಿದೆ. 2022 ರ ವರದಿಯು ಸಧ್ಯಕ್ಕೆ ಲಭ್ಯವಿಲ್ಲ. ಈ ಹಿಂದೆ ಅಂದರೆ 2017 ರಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು ನಂತರ 2022 ರ ಚುನಾವಣೆಯಲ್ಲಿ ಪುನಃ ಅಧಿಕಾರದ ಗದ್ದುಗೆ ಏರಿದರು.
ವೆಬ್ಸೈಟ್ನಲ್ಲಿ ರೈತರು/ಕೃಷಿಕರು ಮತ್ತು ಕೃಷಿ ಕಾರ್ಮಿಕರು ರಾಜ್ಯವಾರು ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆಯನ್ನು ಒಳಗೊಂಡಿದೆ. ಲಭ್ಯವಾಗಿರುವ ರೈತರ ಆತ್ಮಹತ್ಯೆಯ ಡಾಟಾ ಪ್ರಕಾರ, 2017 ರಲ್ಲಿ ಒಟ್ಟು 110 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, 94 ಸ್ವಂತ ಭೂಮಿಯಲ್ಲಿ ಸಾಗುವಳಿ ಮತ್ತು 16 ಗುತ್ತಿಗೆ ಭೂಮಿಯಲ್ಲಿ ಸಾಗುವಳ ಮಾಡುವ ರೈತರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು ಹೇಳುತ್ತದೆ. ಇದರ ಜೊತೆಗೆ ಒಂದೇ ವರ್ಷದಲ್ಲಿ 93 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2018ರಲ್ಲಿ ಸ್ವಂತ ಜಮೀನಿನಲ್ಲಿ ಸಾಗುವಳಿ ಮಾಡಿದ 36 ರೈತರು, ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡಿದ 44 ರೈತರು ಮತ್ತು 174 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ವಂತ ಭೂಮಿಯಲ್ಲಿ ಕೃಷಿ ಮಾಡಿದ 92 ರೈತರು, ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡಿದ 16 ರೈತರು ಮತ್ತು 153 ಕೃಷಿ ಕಾರ್ಮಿಕರು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎಂದು 2019 ರ ವರದಿ ಹೇಳುತ್ತದೆ.
ಅದೇ ರೀತಿ 2020ರಲ್ಲಿ ಸ್ವಂತ ಜಮೀನಿನಲ್ಲಿ ಕೃಷಿ ಮಾಡಿದ 60 ರೈತರು, ಗುತ್ತಿಗೆ ಜಮೀನಿನಲ್ಲಿ ಕೃಷಿ ಮಾಡಿದ 27 ರೈತರು ಮತ್ತು 85 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016ರಲ್ಲಿ ಸ್ವಂತ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡಿದ್ದ 53 ರೈತರು, 16 ಮಂದಿ ಗುತ್ತಿಗೆ ಭೂಮಿಯಲ್ಲಿ ಕೃಷಿ ಮಾಡಿದ್ದ ರೈತರು, 115 ಕೃಷಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬರುವ ಮೊದಲು 2016 ರ ಡೇಟಾ ಇದು. 2017 ರಿಂದ 2021 ರ ಅವಧಿಯಲ್ಲಿ ಯುಪಿಯಲ್ಲಿ ರೈತರು ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಕಳೆದ 6 ವರ್ಷಗಳಲ್ಲಿ ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೀಡಿರುವ ಹೇಳಿಕೆ ಸುಳ್ಳಾಗಿದೆ. 2017 ರಿಂದ 2021 ರವರೆಗೆ ಒಟ್ಟು 398 ರೈತರು ಮತ್ತು 731 ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸರ್ಕಾರದ ಅಂಕಿ ಅಂಶಗಳು ದೃಢಪಡಿಸುತ್ತವೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್ಚೆಕ್ : ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಹಿಂದೂ ಯುವಕನನ್ನು ಕೊಲೆ ಮಾಡಿದ್ದು ನಿಜವೇ?

