ಫ್ಯಾಕ್ಟ್‌ಚೆಕ್ : ಶಾಸಕ ಮಾಡಾಳ್ ವಿರೂಪಾಕ್ಷಪ್ಪನನ್ನು BJP ಪಕ್ಷದಿಂದ ಉಚ್ಚಾಟಿಸುವಂತೆ ಅಮಿತ್ ಶಾ ಪತ್ರ ಬರಿದಿದ್ದಾರೆಯೇ?

ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್‌ ಲೋಕಾಯುಕ್ತ ಬಲೆಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದಿದ್ದರು. ಟೆಂಡರ್ ಕೊಡಿಸುವ ವಿಚಾರದಲ್ಲಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಡಿಮ್ಯಾಂಡ್ ಮಾಡಿ, ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದಿದ್ದರು.  ನಂತರ ಶಾಸಕರ ಪುತ್ರ ಪ್ರಶಾಂತ್‌ನನ್ನು 15ದಿನಗಳ ವರಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿತ್ತು.

ಬಳಿಕ ಏಕಾಏಕಿ ಮಾಡಾಳ್‌ ವಿರೂಪಾಕ್ಷಪ್ಪ ಕಣ್ಮರೆಯಾಗಿದ್ದರು. ಲೋಕಾಯುಕ್ತ ಅಧಿಕಾರಿಗಳು, ಪೊಲೀಸರು ಚನ್ನಗಿರಿ, ದಾವಣಗೆರೆ, ಬೆಂಗಳೂರಿನ ಮನೆ, ಕಚೇರಿಗಳಿಗೆ ನೋಟಿಸ್‌ ನೀಡಿ, ಮಾಡಾಳ್‌ ಬಂಧನಕ್ಕೆ ತಲಾಶ್‌ ನಡೆಸುತ್ತಿದ್ದರು. ನಿನ್ನೆ ಮಧ್ಯಾಹ್ನ (7 ಮಾರ್ಚ್) ಚನ್ನಗಿರಿ ತಾಲೂಕಿನ ಸ್ವಗ್ರಾಮ ಚನ್ನೇಶಪುರದಲ್ಲಿ ದಿಢೀರ್‌ ಪ್ರತ್ಯಕ್ಷವಾಗಿದ್ದಾರೆ. ಅವರ ಬೆಂಬಲಿಗರು ಕಾರಿನಲ್ಲಿ ಮೆರವಣಿಗೆ ನಡೆಸಿ ಪೂರ್ಣಕುಂಭ ಸ್ವಾಗತ ನೀಡಿದರು. ಸ್ವಗ್ರಾಮಕ್ಕೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಆಗಮಿಸುತ್ತಿದ್ದಂತೆ ಬೆಂಬಲಿಗರು ಹೂವಿನ ಹಾರ ಹಾಕಿ, ಕಾರಿನಲ್ಲಿ ಗ್ರಾಮದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಿ ಮಾಡಾಳ್‌ ಪರ ಘೋಷಣೆ ಕೂಗಿದ್ದಾರೆ.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಸುದ್ದಿಯೊಂದು ವೈರಲ್ ಆಗಿದ್ದು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧದ ಲಂಚ ಪ್ರಕರಣವು ರಾಜ್ಯ ವಿಧಾನಸಭಾ ಚುನಾವಣೆ ವೇಳೆ BJP ಪಕ್ಷಕ್ಕೆ ತೀವ್ರ ಮುಖಭಂಗವಾಗಿದ್ದು, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಈ ಮುಜುಗರದಿಂದ ಪಕ್ಷ ಪಾರಾಗಲು ಮಾಡಾಳ್ ವಿರೂಪಾಕ್ಷಪ್ಪನನ್ನು BJP ಪಕ್ಷದಿಂದ ತಾತ್ಕಾಲಿಕವಾಗಿ ಉಚ್ಚಾಟಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ BJP ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿರುವ ಅಮಿತ್ ಶಾ, ಜಿ ಪಿ ನಡ್ಡಾ ಅವರಿಗೆ ಶಾಸಕ ವಿರೂಪಾಕ್ಷಪ್ಪನವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಕೋರಿ ಪತ್ರ ಬರದಿರುವುದು ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವಂತೆ ಅಮಿತ್ ಶಾ ಅವರು BJP ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ, ವ್ಯಾಕರಣದ ಹಲವು ದೋಷಗಳು ಮತ್ತು ಅಸಮಂಜಸವಾದ ಪಠ್ಯವನ್ನು ಕಾಣಬಹುದಾಗಿದೆ. ಅಲ್ಲದೆ ಸರ್ಕಾರದ ಅಧಿಕೃತ ಪತ್ರವನ್ನು ಪಕ್ಷದ ಬಳಕೆಗೆ ಉಪಯೋಗಿಸುವಂತಿಲ್ಲ. ಹಾಗಾಗಿ ವೈರಲ್ ಪತ್ರದಲ್ಲಿ ಹಲವು ಸಮಸ್ಯಗಳು ಕಂಡುಬರುತ್ತವೆ.

ಅಲ್ಲದೆ ಇಂತಹ ಬೆಳವಣಿಗೆಗಳು ಏನಾದರೂ ನಡೆದಿದ್ದರೆ ರಾಷ್ಟ್ರೀಯ ಮಾಧ್ಯಮಗಳು ಇದನ್ನು ಹೆಚ್ಚು ಪ್ರಸಾರ ಮಾಡುತ್ತಿದ್ದವು, ರಾಷ್ಟ್ರ ಮಟ್ಟದ ಸುದ್ದಿಯಾಗಿ ಹೊರಹೊಮ್ಮುತಿತ್ತು. ಆದರೆ ಇಂತಹ ಯಾವುದೇ ಸುದ್ದಿಯಾಗಲಿ, ಬೆಳವಣಿಗೆಯಾಗಲಿ ಕಂಡುಬಂದಿಲ್ಲ. ಹಾಗಾಗಿ ಇದು ನಕಲಿ ಪತ್ರ ಎಂಬುದು ಸ್ಪಷ್ಟವಾಗುತ್ತದೆ. ಈ ಪತ್ರವು ಎಡಿಟ್ ಮಾಡುವ ಮೂಲಕ ರಚಿಸಲಾಗಿದೆ ಎಂಬುದನ್ನು ಮೇಲಿನ ಚಿತ್ರದಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿರುವ ಪತ್ರದಲ್ಲಿ ಉಲ್ಲೇಖಿಸಿದಂತೆ ಲಂಚ ಪ್ರಕರಣದಲ್ಲಿ ಭಾಗಿಯಾಗಿರುವ BJP ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ತಾತ್ಕಾಲಿಕವಾಗಿ ಉಚ್ಚಾಟಿಸಿವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ BJP ಅಧ್ಯಕ್ಷರಾದ ಜಿಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ  ಎಂಬುದು ಸುಳ್ಳು ಮತ್ತು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗುತ್ತಿರುವ ಪತ್ರ ನಕಲಿ ಎಂಬುದು ಸ್ಪಷ್ಟವಾಗಿದೆ. ಇಂತಹ ಯಾವುದೇ ಪತ್ರವನ್ನು ಅಮಿತ್ ಶಾ ಬರೆದಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ನ್ಯೂಸ್‌ ಚೆಕ್ಕರ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಉತ್ತರ ಪ್ರದೇಶದಲ್ಲಿ ಕಳೆದ 6 ವರ್ಷದಲ್ಲಿ ಒಬ್ಬೇ ಒಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿಲ್ಲ ಎಂದು ಸುಳ್ಳು ಹೇಳಿದ ಯೋಗಿ ಆದಿತ್ಯನಾಥ್


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights