ಫ್ಯಾಕ್ಟ್‌ಚೆಕ್ : ಪಾಕಿಸ್ತಾನದಲ್ಲೂ ಅರಳಿದ ಕಮಲ ಎಂದು ಸುಳ್ಳು ವಿಡಿಯೋ ಹಂಚಿಕೊಂಡ BJP ಬೆಂಬಲಿಗರು

ಪಾಕಿಸ್ತಾನದ ಬಲೂಚಿಸ್ತಾನದಲ್ಲಿ BJP ತನ್ನ ಘಟಕವನ್ನು ತೆರೆದಿದು, ಕಮಲ ಧ್ವಜವನ್ನು ಎತ್ತಿಹಿಡಿದಿದೆ ಎಂಬ ಹೇಳಿಕೆಯೊಂದಿಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ಜನರ ಗುಂಪು BJP ಯನ್ನು ಬೆಂಬಲಿಸಿ ಪಕ್ಷದ ಧ್ವಜವನ್ನು ಬೀಸುತ್ತಿರುವುದನ್ನು ಕಾಣಬಹುದು. ಬುರ್ಖಾ ಧರಿಸಿದ ಕೆಲವು ಮಹಿಳೆಯರನ್ನೂ ವಿಡಿಯೋದಲ್ಲಿ ಕಾಣಬಹುದು. ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ನಮಗೆ ಸ್ವಾತಂತ್ರ್ಯ ಸಿಗುತ್ತದೆ ಎಂದು ಅವರು ನಂಬುತ್ತಾರೆ ಎಂದು ಪೋಸ್ಟ್‌ನ ಶೀರ್ಷಿಕೆಯಲ್ಲಿ ಹೇಳಲಾಗಿದೆ.

ಹಲವು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ವಾಟ್ಸಾಪ್ ಗ್ರೂಪ್‌ಗಳಲ್ಲಿ ಈ ವಿಡಿಯೋ ಪ್ರಸಾರವಾಗುತ್ತಿದ್ದು, ಹಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಏನ್‌ಸುದ್ದಿ.ಕಾಂಗೆ ಈ ವಿಡಿಯೋವನ್ನು ಹಂಚಿಕೊಳ್ಳುವ ಮೂಲಕ ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ವಿನಂತಿಸಿದ್ದಾರೆ.

ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಇದೇ ಹೇಳಿಕೆಯೊಂದಿಗೆ ವಿಡಿಯೊವನ್ನು ಪೋಸ್ಟ್‌ ಮಾಡಲಾಗಿದೆ.

ಪೋಸ್ಟ್‌ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಇಲ್ಲಿ ಮತ್ತು ಇಲ್ಲಿ ನೋಡಬಹುದು. ಹಾಗಿದ್ದರೆ ಪಾಕಿಸ್ತಾನದಲ್ಲಿ BJPಗೆ ಬೆಂಬಲ ಸಿಕ್ಕಿದೆಯೇ? ಪಾಕಿಸ್ತಾನದಲ್ಲೂ BJP ಬೆಂಬಲಿಗರಿದ್ದಾರೆಯೇ ? ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಫೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯ ಸುಳಿವಿನ ಜಾಡು ಹಿಡಿದು ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಸರ್ಚ್ ಮಾಡಿದಾಗ ವಿಡಿಯೋವನ್ನು  2019ರಲ್ಲಿ ಸೆರೆಹಿಡಿಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಈ ವಿಡಿಯೊ ಪಾಕಿಸ್ತಾನದಲ್ಲ, ಭಾರತದ ಕಾಶ್ಮೀರದಲ್ಲಿ ಚಿತ್ರೀಕರಿಸಲಾಗಿದೆ ಎಂದು ಖಚಿತವಾಗಿದೆ.

ಏನ್‌ಸುದ್ದಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
100 ₹200 ₹500 ₹1000 Others

ಅನಂತನಾಗ್‌ನ ಬಿಜೆಪಿ ಅಭ್ಯರ್ಥಿ ಸೋಫಿ ಯೂಸುಫ್ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದ ಸಂದರ್ಭದಲ್ಲಿ ಅವರ ಬೆಂಬಲಿಗರು BJP ಪರ ಘೋಷಣೆ ಕೂಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಸಿದಾಗ, ಈ ವೀಡಿಯೊವನ್ನು 2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅನಂತನಾಗ್‌ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸೋಫಿ ಯೂಸುಫ್ ಅವರು ನಾಮಪತ್ರ ಸಲ್ಲಿಸಿದಾಗ ಚಿತ್ರೀಕರಿಸಲಾಗಿದೆ ಎಂದು BJP ತನ್ನ ಅಧಿಕೃತ ಟ್ವಿಟರ್ ಖಾತೆಯಿಂದ ಪೋಸ್ಟ್‌ವೊಂದನ್ನು ಮಾಡಿದೆ.

ಕಾಶ್ಮೀರದ ಅನಂತ್‌ನಾಗ್‌ ಸಂಸದೀಯ ಕ್ಷೇತ್ರದ ಅಭ್ಯರ್ಥಿ ಸೋಫಿ ಯೂಸುಫ್ ಸಾವಿರಾರು ಬೆಂಬಲಿಗರೊಂದಿಗೆ ಅನಂತನಾಗ್‌ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು BJP ತನ್ನ ಅದೀಕೃತ ಟ್ವಿಟರ್ ಹ್ಯಾಂಟಲ್‌ನಿಂದ ಪೋಸ್ಟ್‌ ಮಾಡಿದೆ. ಇದೇ ಹಳೆಯ ವಿಡಿಯೊವನ್ನು ಕೆಲವರು ಪಾಕಿಸ್ತಾನದಲ್ಲಿ BJP ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ ಎಂದು ತಪ್ಪಾಗಿ ಹಂಚಿಕೊಂಡಿದ್ದಾರೆ. ಈ ವಿಡಿಯೋ 2019ರಿಂದಲೂ ಸುಳ್ಳು ನಿಊಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2019ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಶ್ಮೀರದ ಅನಂತ್‌ನಾಗ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಫಿ ಯೂಸುಫ್‌ ಅವರು ನಾಮಪತ್ರ ಸಲ್ಲಿಸಿವ ಸಂದರ್ಭದಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಬಳಸಿಕೊಂಡು ಪಾಕಿಸ್ತಾನದಲ್ಲಿ ಮೋದಿ ಅಲೆ, BJP ಧ್ವಜಗಳು ಹಾರಾಡುತ್ತಿವೆ ಎಂದೆಲ್ಲ ಸುಳ್ಳು ಹೇಳಿಕೆಗಳೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ.


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮದುವೆ ದಿಬ್ಬಣಕ್ಕೆಂದು ಹೆಲಿಕಾಪ್ಟರ್‌ನಲ್ಲಿ ಬಂದ ವಧು ಅಪಘಾತಕ್ಕೀಡಾಗಿ ಬೆಂಕಿಗೆ ಆಹುತಿಯಾದಳೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights