ಫ್ಯಾಕ್ಟ್‌ಚೆಕ್ : ಪಶ್ಚಿಮ ಬಂಗಾಳದಲ್ಲಿ ಉಗ್ರರನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಕ್ಕೆ ಮುಸ್ಲಿಮರು ತಡೆಯೊಡಿದ್ದು ನಿಜವೇ?

ಪಶ್ಚಿಮ ಬಂಗಾಳದಲ್ಲಿ ಸೈನಿಕರ ಪರಿಸ್ಥಿತಿನೇ ಹೀಗಿರುವಾಗ ಸಾಮಾನ್ಯ ಹಿಂದುಗಳ ಪರಿಸ್ಥಿತಿ ಹೇಗಿರಬಹುದು? ಅವರುಗಳ ಜನಸಂಖ್ಯೆ ಜಾಸ್ತಿಯಾದರೆ ಭಾರತದಲ್ಲಿನ ಹಿಂದುಗಳ ಪರಿಸ್ಥಿತಿ ಹೇಗಾಗಬಹುದು? ಸ್ವಲ್ಪ ಯೋಚಿಸಿ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ‘ಪಶ್ಚಿಮ ಬಂಗಾಳದಲ್ಲಿ ಲಷ್ಕರ್ ಉಗ್ರನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಗಳಿಗೆ ಅಲ್ಲಿನ ಮುಸ್ಲಿಮರು ತಡೆಯೊಡ್ಡಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹರಿದಾಡುತ್ತಿದೆ.

ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋದಲ್ಲಿ ಮಾಡಲಾದ ಪ್ರತಿಪಾಧನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

‘ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶಕ್ಕೆ 2021ರ ಮಾರ್ಚ್‌ನಲ್ಲಿ ಭೇಟಿ ನೀಡಿದ್ದರು. ಅವರ ಭೇಟಿಯನ್ನು ಖಂಡಿಸಿ, ಅಲ್ಲಿನ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. 2021ರ ಮಾರ್ಚ್‌ 26ರಂದು ಚಿತ್ತಗಾಂಗ್‌ನಲ್ಲಿ ಭದ್ರತಾ ಪರಿಶೀಲನೆಗೆ ಎಂದು ಅಲ್ಲಿನ ಸೇನಾಧಿಕಾರಿಗಳು ಭೇಟಿ ನೀಡಿದ್ದರು. ಮೋದಿ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮುಸ್ಲಿಮರು ಆ ಸೇನಾಧಿಕಾರಿಗಳ ವಾಹನಗಳನ್ನು ತಡೆದಿದ್ದರು. ಪ್ರತಿಭಟನೆಯ ಹಳೆಯ ವಿಡಿಯೊವನ್ನು ತಪ್ಪು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ’ ಎಂದು ಬೂಮ್ ವರದಿ ಮಾಡಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬಾಂಗ್ಲಾದೇಶದಲ್ಲಿ 2021ರಲ್ಲಿ ನಡೆದ ಪ್ರತಿಭಟನೆಯ ವಿಡಿಯೋವನ್ನು, ಪಶ್ಚಿಮ ಬಂಗಾಳದಲ್ಲಿ ಲಷ್ಕರ್ ಉಗ್ರನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸೇನಾ ವಾಹನಗಳಿಗೆ ಅಲ್ಲಿನ ಮುಸ್ಲಿಮರು ತಡೆಯೊಡ್ಡಿದ್ದಾರೆ ಎಂಬ ತಪ್ಪು ಶೀರ್ಷಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ವಿಶ್ವದ ಅತ್ಯುತ್ತಮ ಪ್ರಧಾನಿ ಎಂದು ಯುನೆಸ್ಕೋ ಹೇಳಿಲ್ಲ!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights