ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರೆ?

ಕರ್ನಾಟಕ 2023ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ BJPಗೆ ಬಲ ತುಂಬಲು ಪ್ರಧಾನಿ ನರೇಂದ್ರ ಮೋದಿ ಕಳೆದ ಮೂರು ತಿಂಗಳಲ್ಲಿ ಕರ್ನಾಟಕಕ್ಕೆ ನಾಲ್ಕು ಬಾರಿ ಭೇಟಿ ನೀಡಿದ್ದಾರೆ.

ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿ ಹೊಂದಿರುವ BJP, ವಿಧಾನಸಭೆಯ ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಕಾಮಗಾರಿ ಅಪೂರ್ಣಗೊಂಡಿದ್ದರೂ ಮಾರ್ಚ್‌ 12ರಂದು ಉದ್ಘಾಟನೆಗೊಂಡಿತ್ತು. ನಂತರ ಕೆಆರ್‌ಪುರಂ ಹಾಗೂ ವೈಟ್‌ಫೀಲ್ಡ್‌ ನಡುವೆಯೂ ನೇರಳ ಬಣ್ಣದ ಮಾರ್ಗ ಅಪೂರ್ಣಗೊಂಡಿದ್ದರೂ ಮೋದಿ ಉದ್ಘಾಟಿಸಿದ್ದರು ಎಂದು ಕಾಂಗ್ರೆಸ್‌ ಆರೋಪಿಸಿತ್ತು.

ಇದರ ಬೆನ್ನಲ್ಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 16 ಮತ್ತು 17 ರಂದು ಕರ್ನಾಟಕಕ್ಕೆ ಭೇಟಿ ನೀಡಿದ್ದರು ಕೋಲಾರದಲ್ಲಿ ನಡೆದ ಕಾಂಗ್ರೆಸ್ ಸಮಾವೇಷದಲ್ಲಿ ಭಾಗವಹಿಸಿದ್ದರು. ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಹೇಳಿರುವಂತೆ ರಾಹುಲ್ ಗಾಂಧಿ ನಿಜವಾಗಿಯೂ ಮನೆ ಮನೆಗೆ ತೆರಳಿ ಮತ ಯಾಚನೆ ಮಾಡುತ್ತಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿರುವ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ಮಾಚ್‌ 21 ರಂದು ಕಾಂಗ್ರೆಸ್ ನಾಯಕಿ ಮತ್ತು ನಟಿ ನಗ್ಮಾ ತಮ್ಮ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಫೋಟೊಗಳು ಲಭ್ಯವಾಗಿದೆ. ನಗ್ಮಾ ಹಂಚಿಕೊಂಡಿರುವ ಪೋಸ್ಟ್‌ನ ಪ್ರಕಾರ ಕೇರಳದ ವಯನಾಡಿನ ಮುಟ್ಟಿಲ್ ಗ್ರಾಮದಲ್ಲಿ ರಾಹುಲ್ ಗಾಂಧಿಯವರು ಬೆಂಗಳೂರು ಕೇರಳ ಸಮಾಜಂ ನಿರ್ಮಿಸಿದ ಮನೆಗಳ ಕೀಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸುವ ಫೋಟೋಗಳು ಎಂಬ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ.

ಇಂಡಿಯಾ ಟುಡೇ ಫ್ಯಾಕ್ಟ್‌ಚೆಕ್ ಈ ಫೋಟೊಗಳನ್ನು ಪರಿಶೀಲಿಸಲು ಕೇರಳದ ವಯನಾಡಿದ ಯೂತ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಶಾಮನಾದ್ ಮರಕ್ಕರ್ ಅವರನ್ನು ಸಂಪರ್ಕಿಸಿದಾಗ, ವೈರಲ್ ವಿಡಿಯೋ ವಯನಾಡಿನ ಮುಟ್ಟಿಲ್ ಪಂಚಾಯತ್ ಕಚೇರಿ ವ್ಯಾಪ್ತಿಯಲ್ಲಿ ನಡೆದ ಫಲಾನುಭವಿಗಳಿಗೆ ಮನೆಗಳನ್ನು ವಿತರಣೆ ಮಾಡುತ್ತಿರುವ ಚಿತ್ರ ಎಂದು ಖಚಿತ ಪಡಿಸಿದ್ದಾರೆ.

ಮಾರ್ಚ್ 21 ರಂದು ವಯನಾಡ್‌ಗೆ ಕಾಂಗ್ರೆಸ್ ನಾಯಕರ ಈ ಭೇಟಿಯ ಕುರಿತು ಹಲವಾರು ಮಾಧ್ಯಮ ಸಂಸ್ಥೆಗಳು ವರದಿ ಮಾಡಿವೆ. ಅದೇ ದಿನ, ಗಾಂಧಿಯವರು ವಯನಾಡಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಸುಮಾರು 300 ಚುನಾಯಿತ ಸದಸ್ಯರನ್ನು ಭೇಟಿಯಾಗಿದ್ದರು. ನಂತರ ಫಾತಿಮಾ ಮಾತಾ ಮಿಷನ್ ಆಸ್ಪತ್ರೆಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ, ಅಪಘಾತದಲ್ಲಿ ಮೃತಪಟ್ಟ ಆಟೋ ಚಾಲಕನ ನಿವಾಸಕ್ಕೆ ಭೇಟಿ ನೀಡಿದ್ದರು.

ಏಪ್ರಿಲ್ 16 ಮತ್ತು 17 ರಂದು ರಾಹುಲ್ ಗಾಂಧಿಯವರು ಕರ್ನಾಟಕಕ್ಕೆ ಭೇಟಿ ನೀಡಿದ್ದರು, ಕೋಲಾರ ಮತ್ತು ಬೀದರ್‌ನಲ್ಲಿ ಅನೇಕ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ಆದರೆ, ಕರ್ನಾಟಕದಲ್ಲಿ ರಾಹುಲ್ ಗಾಂಧಿಯವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದ್ದಾರೆ ಎಂಬುದು ಸುಳ್ಳು ಮತ್ತು ಎಲ್ಲಿಯೂ ಇದು ವರದಿಯಾಗಿಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಇಂಡಿಯಾ ಟುಡೇ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ : ಮುಸ್ಲಿಂ ಪ್ರೇಮಿಯೊಬ್ಬ ತನ್ನ ಹಿಂದೂ ಗೆಳತಿಗೆ ಮಾರಣಾಂತಿಕ ಹಲ್ಲೆ ನಡೆಸಿದನೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights