ಫ್ಯಾಕ್ಟ್‌ಚೆಕ್: BJP ವಿರುದ್ದದ ಜನಾಕ್ರೋಶದ ವಿಡಿಯೋ ಕರ್ನಾಟಕದ್ದೆ?

BJPಯ ಚುನಾವಣಾ ಪ್ರಚಾರದ ವಾಹನವನ್ನು ಸಾರ್ವಜನಿಕರು ಎತ್ತಂಗಡಿ ಮಾಡುಸುತ್ತಿರುವ ವಿಡಿಯೋವೊಂದನ್ನು ಕರ್ನಾಟಕ ಕಾಂಗ್ರೆಸ್‌ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ.

ಖಾಲಿ ಕುರ್ಚಿಗಳ ಸಮಾವೇಶ ನಡೆಸುತ್ತಿದ್ದ ಬಿಜೆಪಿಗೆ ಜನಾಕ್ರೋಶ ದರ್ಶನ ಮುಂದುವರೆದಿದೆ. ಬಿಜೆಪಿ ಅಭ್ಯರ್ಥಿಗಳಷ್ಟೇ ಅಲ್ಲ, ಬಿಜೆಪಿಯ ಪ್ರಚಾರ ವಾಹನವನ್ನು ಕಂಡರೂ ಜನರಿಗೆ ಅಸಹ್ಯ, ಆಕ್ರೋಶ ಹುಟ್ಟುವಂತಾಗಿದೆ. ವಾಹನಕ್ಕೆ ಬಿದ್ದ ಒಂದೊಂದು ಕಲ್ಲೆಟುಗಳೂ BJP ಕರ್ನಾಟಕದಲ್ಲಿ ನಡೆಸಿದ ಬೆಲೆ ಏರಿಕೆ, ಭ್ರಷ್ಟಾಚಾರ, ವಂಚನೆ, ದುರಾಡಳಿತಕ್ಕೆ ಸಿಕ್ಕ ಉತ್ತರಗಳು ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದೆ.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರೂ ಈ ವೈರಲ್ ವಿಡಿಯೋವನ್ನು ಏನ್‌ಸುದ್ದಿ.ಕಾಂ ಗೆ ವಾಟಸಾಪ್‌ ಮಾಡುವ ಮೂಲಕ ಪರಿಶೀಲಿಸುವಂತೆ ವಿನಂತಿಸಿದ್ದಾರೆ. ಹಾಗಿದ್ದರೆ ಈ ಘಟನೆ ಕರ್ನಾಟಕದ ಯಾವ ಭಾಗದಲ್ಲಿ ನಡೆದಿದೆ, ಇದು ನಿಜವಾಗಿಯೂ ಕರ್ನಾಟಕದ್ದೇ? ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಕರ್ನಾಟಕ ಕಾಂಗ್ರೆಸ್ ತನ್ನ ಟ್ವಿಟರ್ ಅಕೌಂಟ್‌ನಲ್ಲಿ ಹಂಚಿಕೊಂಡ ಪೋಸ್ಟ್‌ಅನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ವೈರಲ್ ವಿಡಿಯೋ ಕರ್ನಾಟಕದ ಪ್ರಸಕ್ತ ರಾಜಕೀಯ ಪರಿಸ್ಥಿತಿಗೆ ಸಂಬಂಧಿಸಿದ್ದಲ್ಲ ಎಂದು ತಿಳಿದು ಬಂದಿದೆ. ಮತ್ತಷ್ಟು ಮಾಹಿತಿಗಾಗಿ ಸರ್ಚ್ ಮಾಡಿದಾಗ ಘಟನೆಯು 2022 ರಂದು ತೆಲಂಗಾಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ನವೆಂಬರ್ 1,2022ರಂದು ವಿಡಿಯೋ ಟ್ವೀಟ್ ಮಾಡಲಾಗಿದೆ. ತೆಲಂಗಾಣದ ನಲಗೊಂಡದಲ್ಲಿನ ಮುನುಗೊಡೆ ಎಂಬಲ್ಲಿ ಉಪ ಚುನಾವಣೆ ಸಂದರ್ಭದಲ್ಲಿ ಟಿಆರ್ ಎಸ್ (ಈಗ ಬಿಆರ್ ಎಸ್) ಹಾಗೂ ಬಿಜೆಪಿ ಕಾರ್ಯಕರ್ತರ ಮಧ್ಯೆ ನಡೆದ ಮಾರಾಮಾರಿಯ ವಿಡಿಯೋ ಎಂಬುದು ಸ್ಪಷ್ಟವಾಗಿದೆ. ಅಲ್ಲದೆ ಘಟನೆಯನ್ನು ಖಂಡಿಸುತ್ತ ತೆಲಂಗಾಣದ ಸಿಕಂದರಬಾದ್‌ನ ಸಂಸದ ಕೃಷ್ಣ ರೆಡ್ಡಿ ಎಂಬುವವರು ಟ್ವೀಟ್ ಮಾಡಿದ್ದಾರೆ.

ಇದೇ ವಿಡಿಯೋವನ್ನು ANI ಕೂಡ ಟ್ವೀಟ್ ಮಾಡಿದ್ದು ತೆಲಂಗಾಣದಲ್ಲಿ ನಡೆದ ಉಪ ಚುನಾವಣೆ ವೇಳೆ ಬಿಜೆಪಿ ವಾಹನದ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ ಎಂದು ವರದಿ ಮಾಡಿದೆ. ಬಿಜೆಪಿ ಶಾಸಕ ಎಟೆಲ ರಾಜೇಂದ್ರ ಅವರು ಪ್ರಚಾರ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬರು ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ವಿಡಿಯೋದಲ್ಲಿ ರಾಜೇಂದ್ರ ಅವರ ಕಾರಿಗೆ ಹಾನಿಯಾಗಿದೆ. ಬಿಜೆಪಿ ಮತ್ತು ಬಿಆರ್‌ಎಸ್ ಪ್ರಚಾರದ ವೇಳೆ ಈ ದಾಳಿ ನಡೆದಿದ್ದರಿಂದ ಎರಡು ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿದ್ದು, ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಎಂದು ವರದಿಯಾಗಿದೆ. ಹಾಗಾಗಿ ಈ ಘಟನೆ ತೆಲಂಗಾಣದಲ್ಲಿ 2022 ನವೆಂಬರ್ 1 ರಂದು ನಡೆದಿದೆ ಎಂದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಕರ್ನಾಟಕ ಕಾಂಗ್ರೆಸ್ ತಮ್ಮ ಟ್ವಿಟರ್‌ ಹ್ಯಾಂಡಲ್‌ನಿಂದ ಹಂಚಿಕೊಂಡಿರುವ ವಿಡಿಯೋ 1 ನವೆಂಬರ್ 2022ರಂದು ತೆಲಂಗಾಣದ ನಲಗೊಂಡದಲ್ಲಿನ ಮುನುಗೊಡೆ ಎಂಬಲ್ಲಿ ಉಪ ಚುನಾವಣೆ ವೇಳೆ ನಡೆದ ಘಟನೆಯನ್ನು ಕರ್ನಾಟಕದ ಪ್ರಸ್ತುತ 2023ರ ವಿಧಾನಸಭಾ ಚುನಾವಣೆಗೆ ಲಿಂಕ್ ಮಾಡಿ ಹಂಚಿಕೊಂಡಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಬೂಮ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : BBC ಚುನಾವಣಾ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಮತ್ತೆ ಕಮಲ ಅರಳಲಿದೆ ಎಂದು ನಕಲಿ ಸಮೀಕ್ಷೆ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights