ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಜಿಂದಾಬಾದ್ ಎಂದಿದ್ದಕ್ಕೆ ವಿರಾಟ್ ಕೊಹ್ಲಿ ಮೇಲೆ ಗರಮ್ಮಾದರೆ ಗೌತಮ್ ಗಂಭೀರ್?

ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ನಡುವಿನ IPL ಪಂದ್ಯದ ನಂತರ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ವಾಗ್ವಾದ ನಡೆಸಿದರು. ಇವರಿಬ್ಬರ ನಡುವಿನ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಈ ಪಂದ್ಯದಲ್ಲಿ ಆರ್​ಸಿಬಿ 18 ರನ್​ಗಳ ಜಯ ದಾಖಲಿಸಿತು. ಆ ಬಳಿಕ ನಡೆದ ಆಟಗಾರರ ನಡುವಿನ ಹಸ್ತಲಾಘವದ ವೇಳೆ ವಿರಾಟ್ ಕೊಹ್ಲಿ ರಾಹುಲ್ ಗಾಂಧಿಗೆ ಜೈ ಎಂದಿದ್ದು ಗೌತಮ್ ಗಂಭೀರ್ ಕೋಪಕ್ಕೆ ಕಾರಣವಾಗಿದೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರಾಟ್‌ ಕೊಹ್ಲಿ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡ ಮೆಂಟರ್‌ ಗೌತಮ್ ಗಂಭೀರ್ ನಡುವೆ ವಾಗ್ವಾದ ನಡೆದಿತ್ತು.

ನಸೀಮಾ ಫಾತಿಮಾ ಎಂಬ ಟ್ವಿಟರ್ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದು “ವಿರಾಟ್ ಕೊಹ್ಲಿ “ರಾಹುಲ್ ಗಾಂಧಿ” ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರಿಂದ ಕೊಹ್ಲಿ ವಿರುದ್ದ ಗೌತಮ್ ಗಂಭೀರ್ ಕೋಪ ಮಾಡಿಕೊಂಡಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸದಾಗ, ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವೆ ನಡೆದ ಮಾತಿನ ಚಕಮಕಿಗೆ ಕಾರಣವೇನೆಂದು ತಿಳಿದುಬಂದಿದೆ.

ಮಾತಿನ ಚಕಮಕಿಗೆ ಕಾರಣವೇನು?

ಏಪ್ರಿಲ್‌ 10ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಲಖನೌ ಮತ್ತು ಬೆಂಗಳೂರು ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಲಖನೌ ಒಂದು ವಿಕೆಟ್‌ ಜಯ ಸಾಧಿಸಿತ್ತು. ಈ ಗೆಲುವಿನ ಸಂಭ್ರಮದಲ್ಲಿದ್ದ ಗಂಭೀರ್ ನೆರೆದಿದ್ದ ಆರ್​ಸಿಬಿ ಪ್ರೇಕ್ಷಕರನ್ನು ಗುರಿಯಾಗಿಸಿ ಬಾಯಿ ಮುಚ್ಕೊಂಡಿರಬೇಕು ಎಂದು ಸನ್ನೆ ಮಾಡಿದ್ದರು.

ಇದಕ್ಕೆ ಪ್ರತ್ಯುತ್ತರವಾಗಿ ಲಖನೌದ ಕೃಣಾಲ್‌ ಪಾಂಡ್ಯ ಔಟಾದ ಬಳಿಕ ವಿರಾಟ್‌ ಕೊಹ್ಲಿ ಆರ್‌ಸಿಬಿ ಅಭಿಮಾನಿಗಳತ್ತ ತಿರುಗಿ, ಗೌತಮ್ ಗಂಭೀರ್ ​ಆರ್​ಸಿಬಿ ಅಭಿಮಾನಿಗಳಿಗೆ ಹೇಗೆ ಖಡಕ್ ಸೂಚನೆ ನೀಡಿದ್ದಾರೋ ಅದೇ ಮಾದರಿಯಲ್ಲಿ ವಿರಾಟ್ ಕೊಹ್ಲಿ ಬಾಯಿ ಮುಚ್ಕೊಂಡಿರಬೇಡಿ ಎನ್ನುವ ಮೂಲಕ ಗಮನ ಸೆಳೆದರು.

ಮ್ಯಾಕ್ಸ್​ವೆಲ್ ಎಸೆತದಲ್ಲಿ ಕೃಣಾಲ್‌ ಪಾಂಡ್ಯ ಬೌಂಡರಿ ಲೈನ್​ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡಿದ್ದರು. ಅತ್ತ ಕ್ಯಾಚ್ ಹಿಡಿದ ಬೆನ್ನಲ್ಲೇ ಕೊಹ್ಲಿ ಪ್ರೇಕ್ಷಕರ ಗ್ಯಾಲರಿಯತ್ತ ಮುಖ ಮಾಡಿ, ಆರ್‌ಸಿಬಿ ಅಭಿಮಾನಿಗಳಿಗೆ ಬಾಯಿ ಮುಚ್ಕೊಂಡಿರಬೇಡಿ ಎಂದು ಸನ್ನೆ ಮಾಡಿದ್ದರು. ಇದೇ ವಿಷಯವಾಗಿ ಗಂಭೀರ್ ಹಾಗೂ ವಿರಾಟ್ ಕೊಹ್ಲಿಯ ನಡುವೆ ಮಾತಿನ ಚಕಮಕಿ ನಡೆದಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡದ ಮೆಂಟರ್ ಗೌತಮ್ ಗಂಭೀರ್ ಮತ್ತು ಇಬ್ಬರೂ ತಮ್ಮ ಪಂದ್ಯ ಶುಲ್ಕವನ್ನು ಸಂಪೂರ್ಣವಾಗಿ ದಂಡ ರೂಪದಲ್ಲಿ ಭರಿಸಬೇಕಿದೆ. ಪಂದ್ಯದ ನಂತರ ಉಭಯ ತಂಡದ ಆಟಗಾರರು ಪರಸ್ಪರ ಹಸ್ತಲಾಘವ ನೀಡುವ ಸಂದರ್ಭದಲ್ಲಿ ಲಖನೌ ತಂಡದ ನವೀನ್ ಉಲ್ ಹಕ್ ಮತ್ತು ಕೊಹ್ಲಿ ನಡುವೆ ಮಾತಿನ ಚಕಮಕಿ ನಡೆಯಿತು. ಇದರಿಂದಾಗಿ ನವೀನ್‌ಗೂ ಕೂಡ ಪಂದ್ಯ ಶುಲ್ಕದ ಶೇ 50ರಷ್ಟು ದಂಡ ಹಾಕಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ವಿರಾಟ್ ಕೊಹ್ಲಿ “ರಾಹುಲ್ ಗಾಂಧಿ” ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರಿಂದ ಕೊಹ್ಲಿ ಮೇಲೆ ಕೋಪಗೊಂಡು ಗೌತಮ್ ಗಂಭೀರ್ ಜಗಳಕ್ಕೆ ಬಂದರು ಎಂಬುದು ಸುಳ್ಳು.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ



 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights