Fact Check : ಕುಸ್ತಿಪಟುಗಳ ಪ್ರತಿಭಟನೆಗೆ ನೀಲಿ ಚಿತ್ರನಟಿಯರ ಬೆಂಬಲ ಎಂಬ ಎಡಿಟೆಡ್ ಚಿತ್ರ ಹಂಚಿಕೆ

BJP ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (Wrestling Federation of India) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಲವು ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳ ಪ್ರಕರಣಗಳನ್ನು ದಾಖಲಿಸಿದ್ದಾರೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ ನಂತರ ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಆತನನ್ನು ಬಂಧಿಸುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದು ಕುಸ್ತಿಪಟುಗಳು ತಿಳಿಸಿದ್ದಾರೆ.

https://twitter.com/akkhapandit/status/1652991607384461314?s=46&t=kIszbQH_arRSG8kPbuGeZw

ಇದರ ಮಧ್ಯ ಪ್ರಸ್ತುತ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಮಾಜಿ ನೀಲಿ ತಾರೆ ಮಿಯಾ ಖಲೀಫಾ ಪಾಲ್ಗೊಂಡಿದ್ದಾರೆ ಎಂದು ಪ್ರತಿಪಾದಿಸಿ ಫೋಟೊದೊಂದಿಗೆ ಪೋಸ್ಟ್‌ಅನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಹಾಗಿದ್ದರೆ ನಟಿ ಮಿಯಾ ಖಲೀಫಾ ಭಾಗವಿಸಿದ್ದರೆ ಅಥವಾ ಇದು ಎಡಿಟ್ ಮಾಡಿದ ಚಿತ್ರವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ದೆಹಲಿಯ ಜಂತರ್ ಮಂತರ್‌ನಲ್ಲಿ ಕೆಲ ದಿನಗಳಿಂದ ನಡೆಯುತ್ತಿರುವ ಕುಸ್ತಿಪಟುಗಳ ಪ್ರತಿಭಟನೆ ಸದ್ಯ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಬುಧವಾರ ತಡರಾತ್ರಿ ಪಾನಮತ್ತ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಡಚುವ ಹಾಸಿಗೆಗಳನ್ನು ತರಲು ಬಯಸಿದಾಗ ಪೊಲೀಸರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿರುವ ಫೋಟೊವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 27, ಏಪ್ರಿಲ್ 2023 ರಂದು ಧರಣಿ ನಿರತ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಲು ಭೂಪೇಂದರ್ ಚೌಧರಿ ಹೋಗಿದ್ದ ಸಂದರ್ಭದಲ್ಲಿ ತೆಗೆದ ಚಿತ್ರವನ್ನು ಹಂಚಿಕೊಂಡಿರುವುದು ಕಂಡುಬಂದಿದೆ.

ವಾಸ್ತವವಾಗಿ ಮೂಲ ಭೂಪೇಂದ್ರ ಚೌಧರಿ ಹಂಚಿಕೊಂಡಿರುವ ಮೂಲ ಚಿತ್ರ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಚಿತ್ರವನ್ನು ಹೋಲಿಕೆ ಮಾಡಿ ನೋಡಿದಾಗ ಎರಡೂ ಒಂದೇ ತೆರೆನಾದ ಚಿತ್ರ ಎಂದು ತಿಳಿದು ಬಂದಿದೆ. ಆದರೆ ಮೂಲ ಚಿತ್ರವನ್ನು ಎಡಿಟ್ ಮಾಡಿ ಮಾಜಿ ನೀಲಿ ತಾರೆ ಮೀಯಾ ಖಲೀಫಾ ಚಿತ್ರವನ್ನು ಎಡಿಟ್ ಮಾಡಿ ಸೇರಿಸುವ ಮೂಲಕ ತಪ್ಪಾಗಿ ಹಂಚಿಕೊಂಡಿದ್ದಾರೆ.

ಜಂತರ್ ಮಂತರ್ ನಲ್ಲಿ ಕುಸ್ತಿಪಟುಗಳ ಪ್ರತಿಭಟನೆಯ ಫೋಟೋಗಳನ್ನು ಸಿಯಾಸತ್ ಡೈಲಿ ಪ್ರಕಟಿಸಿದೆ. ಇದು 27, ಏಪ್ರಿಲ್ 2023 ರಂದು ರಾಷ್ಟ್ರೀಯ ಲೋಕದಳದ ನಾಯಕ ಜಯಂತ್ ಚೌಧರಿ ಅವರ ಭೇಟಿಯ ಸಮಯದಲ್ಲಿ ಅವರ ಪ್ರತಿಭಟನೆಯ ಅನೇಕ ಫೋಟೋಗಳನ್ನು ಹೊಂದಿದೆ. ಆದರೆ ಮಿಯಾ ಖಲೀಫಾ ಅವರ ಯಾವುದೇ ಫೋಟೋ ಕಂಡುಬಂದಿಲ್ಲ.

2021ರಲ್ಲಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಕುರಿತು ಮಾಜಿ ನೀಲಿ ತಾರೆ ಮಿಯಾ ಖಲೀಫಾ ಕೂಡ ರೈತರ ಪರ ಧ್ವನಿ ಎತ್ತಿದ್ದನ್ನು ಇಲ್ಲಿ ಸ್ಮರಿಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ವ್ಯಂಗ್ಯ ಮಾಡುವ ಸಲುವಾಗಿ ಮಾಜಿ ನೀಲಿ ತಾರೆ ಮೀಯಾ ಖಲಿಫಾ ಅವರ ಚಿತ್ರವನ್ನು ಎಡಿಟ್ ಮಾಡುವ ಮೂಲಕ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಯೂಟರ್ನ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಡಿ.ಕೆ. ಶಿವಕುಮಾರ್ ಅವರ ಹಳೆಯ ವಿಡಿಯೋವನ್ನು ಚುನಾವಣಾ ಪ್ರಚಾರದ್ದು ಎಂದು ತಪ್ಪಾಗಿ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights