ಫ್ಯಾಕ್ಟ್‌ಚೆಕ್ : ಸೋನಿಯಾ ಗಾಂಧಿ ಅನುಮತಿ ಪಡೆದು ಖುರ್ಚಿಯಲ್ಲಿ ಕುಳಿತರೆ ಮಲ್ಲಿಕಾರ್ಜುನ ಖರ್ಗೆ?

ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವೇದಿಕೆಯಲ್ಲಿ ಇರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. 18 ಸೆಕೆಂಡ್‌ಗಳ ದೃಶ್ಯಾವಳಿಯಲ್ಲಿ, ಸೋನಿಯಾ ಗಾಂಧಿ ಮತ್ತು ಇತರ ನಾಯಕರು ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವುದನ್ನು ಕಾಣಬಹುದು, ಆದರೆ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ ನಿಂತುಕೊಂಡೆ ಇರುತ್ತಾರೆ.

ಹಲವು BJP ಬೆಂಬಲಿಗರು ಸಾಮಾಜಿಕ ಮಾಧ್ಯಮ ಬಳಕೆದಾರರು ಖರ್ಗೆ ಅವರು ಕುಳಿತುಕೊಳ್ಳಲು ಸೋನಿಯಾ ಗಾಂಧಿಯವರ ಅನುಮತಿ ಕಾಯುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ ಮತ್ತು “ಸ್ವಾಭಿಮಾನಿ” ಕರ್ನಾಟಕದ ಮತದಾರರನ್ನು “ಮೇ 10 ರಂದು ಬುದ್ಧಿವಂತಿಕೆಯಿಂದ ಮತ ಚಲಾಯಿಸಿ” ಎಂಬ ಒಕ್ಕಣೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಹಾಗಿದ್ದರೆ ಈ ವಿಡಿಯೋದಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ? ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಕುಳಿತುಕೊಳ್ಳಲ್ಲು ಸೋನಿಯಾ ಗಾಂಧಿ ಅನುಮತಿಯನ್ನು ಕಾಯುತ್ತಿದ್ದರೆ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ BJP ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ವಿಡಿಯೋವನ್ನು ಹಂಚಿಕೊಂಡಿದ್ದು,  2023ರ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರ ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಮೇದಿಕೆ ಮೇಲೆ ಕುಳಿತುಕೊಳ್ಳಲು ಸೋನಿಯಾ ಗಾಂಧಿ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ಪ್ರತಿಪಾದಿಸಿ ವೈರಲ್ ಆಗಿರುವ ವಿಡಿಯೋವನ್ನು ಪರಿಶೀಲಿಸಿದಾಗ ಮೂಲ ವಿಡಿಯೋ ಲಭ್ಯವಾಗಿದೆ.

ಕಾಂಗ್ರೆಸ್‌ನ ಅಧಿಕೃತ ಯೂಟ್ಯೂಬ್ ಚಾನೆಲ್ ನಲ್ಲಿ ಅಪ್‌ಲೋಡ್ ಮಾಡಿದ ಮೂಲ ವಿಡಿಯೋ ಲಭ್ಯವಾಗಿದ್ದು, ಮೇ 6, 2023 ರಂದು ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಚುನಾವನಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಖರ್ಗೆ ಕುಳಿತುಕೊಳ್ಳಲು ಸೋನಿಯಾ ಗಾಂಧಿಯವರ ಅನುಮತಿಗಾಗಿ ಕಾಯುತ್ತಿದ್ದಾರೆ ಎಂದು ಹೇಳಲಾಗುವ ದೃಶ್ಯ ಇದೇ ವಿಡಿಯೋದಿಂದ ಎಡಿಟ್ ಮಾಡಿ ತೆಗೆದುಕೊಳ್ಳಲಾಗಿದೆ. ಸುಮಾರು 22:30 ನಿಮಿಷಗಳ ವೀಡಿಯೊದಲ್ಲಿ, ಖರ್ಗೆ ಅವರು ಕುಳಿತುಕೊಳ್ಳಲು ಸೋನಿಯಾ ಗಾಂಧಿಯವರ “ಅನುಮತಿ”ಗಾಗಿ ಕಾಯುತ್ತಿದ್ದಾರೆ ಎಂದು ತೋರಿಸಲು ಹಂಚಿಕೊಂಡ ವೈರಲ್ ದೃಶ್ಯಗಳನ್ನು ನಾವು ಗಮನಿಸಿದ್ದೇವೆ.

ವೀಡಿಯೊದ ದೀರ್ಘ ಆವೃತ್ತಿಯಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಆಸನದಲ್ಲಿ ಕುಳಿತುಕೊಂಡ ನಂತರ ಮಲ್ಲಿಕಾರ್ಜುನ ಖರ್ಗೆ ಸಭೆಯನ್ನು ಉದ್ದೇಶಿಸಿ ಮಾತನಾಡಲು ವೇದಿಕೆ ಪೋಡಿಯಂನತ್ತ ಹೋಗುವುದನ್ನು ಕಾಣಬಹುದು. ಇದಲ್ಲದೆ, ಖರ್ಗೆಯವರ ಹೆಸರನ್ನು ಘೋಷಿಸಿದ ತಕ್ಷಣ, ಸೋನಿಯಾ ಗಾಂಧಿ ಸೇರಿದಂತೆ ವೇದಿಕೆಯಲ್ಲಿ ಕುಳಿತಿದ್ದ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟುವುದನ್ನು ಕಾಣಬಹುದು.

ವೈರಲ್ ವಿಡಿಯೋದಲ್ಲಿ ನಿರೂಪಕರು ಮಲ್ಲಿಕಾರ್ಜುನ ಖರ್ಗೆ  ಹೆಸರನ್ನು ಕೂಗುವುದನ್ನು ಮ್ಯೂಟ್ ಮಾಡಲಾಗಿದೆ. ಮೂಲ ವಿಡಿಯೋದಲ್ಲಿ ಇದೆಲ್ಲವನ್ನೂ ಕೇಳಬಹುದು. ಹಾಗಾಗಿ ಮೂಲ ವಿಡಿಯೋದ ಕೆಲವು ತಣುಕನ್ನು ಎಡಿಟ್ ಮಾಡಿ ಮಲ್ಲಿಕಾರ್ಜುನ ಖರ್ಗೆ ಕುಳಿತುಕೊಳ್ಳಲು ಸೋನಿಯಾ ಗಾಂಧಿ ಅನುಮತಿಗಾಗಿ ಕಾಯುತ್ತಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ನ್ಯೂಸ್ ಚೆಕ್ಕರ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂದು ಪ್ರಕಾಶ್ ರಾಜ್ ಹೇಳಿದ್ದು ಯಾವಾಗ ಗೊತ್ತೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights