ಫ್ಯಾಕ್ಟ್‌ಚೆಕ್ : ಮಾನಸಿಕ ರೋಗಿಯೊಬ್ಬ ಪತ್ನಿಯನ್ನೆ ಕೊಂದ ಘಟನೆಯನ್ನು ಲವ್ ಜಿಹಾದ್ ಎಂದು ಹಂಚಿಕೆ

ಹಿಂದೂ ಯುವತಿಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಲವ್ ಜಿಹಾದ್ ಹೆಸರಿನಲ್ಲಿ ಮದುವೆಯಾಗಿ ಈಗ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ತನ್ನ ಪತ್ನಿಯನ್ನು ಕೊಲೆ ಮಾಡಿರುವುದಾಗಿ ಸಂದರ್ಶನವೊಂದರಲ್ಲಿ ಆರೋಪಿ ಒಪ್ಪಿಕೊಂಡಿರುವ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇಸ್ಲಾಂ ಧರ್ಮದ ಮೇಲಿನ ಗೌರವಕ್ಕಾಗಿ ತಾನು ಹೀಗೆ ಮಾಡಿದೆ ಎಂದು ಆರೋಪಿ ವಿಡಿಯೊದಲ್ಲಿ ಹೇಳುತ್ತಾನೆ.

‘ತನ್ನ ಹೆಂಡತಿ ಹಿಂದೂ ಎಂಬ ಕಾರಣಕ್ಕೆ ಹತ್ಯೆ ಮಾಡಿದ್ದಾನೆ’ ಎಂಬ ಬರಹವನ್ನು ವಿಡಿಯೊದ ಕೆಳಭಾಗದಲ್ಲಿ ನೀಡಲಾಗಿದೆ. ವಿಡಿಯೊದ ಕೊನೆಯಲ್ಲಿ ಹಲವು ಹೆಣ್ಣುಮಕ್ಕಳ ಚಿತ್ರಗಳು ಕಾಣುತ್ತವೆ. ಇವರೆಲ್ಲಾ ‘ಲವ್ ಜಿಹಾದ್’ನ ಸಂತ್ರಸ್ತರು ಎಂದು ಹೇಳುತ್ತಾ ವಿಡಿಯೊ ಕೊನೆಗೊಳ್ಳುತ್ತದೆ.

‘ಹೆಂಡತಿ ಹಿಂದೂ ಎಂಬ ಕಾರಣಕ್ಕೆ ಕೊಲೆ ಮಾಡಿದೆ ಎಂದು ಆರೋಪಿಯು ಎಷ್ಟು ಹೆಮ್ಮೆಯಿಂದ ಹೇಳುತ್ತಿದ್ದಾನೆ. ಈ ವಿಡಿಯೊ ನೋಡಿ ಎಲ್ಲರೊಂದಿಗೆ ಹಂಚಿಕೊಳ್ಳಿ’ ಎಂದು ಟ್ವಿಟರ್ ಬಳಕೆದಾರರೊಬ್ಬರು ತಮ್ಮ ಖಾತೆಯಲ್ಲಿ ಬರೆದಿದ್ದಾರೆ. ಹಲವರು ವಿಡಿಯೊ ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಸುದ್ದಿ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಬಿಹಾರದ ಸಮಸ್ತಿಪುರ ಜಿಲ್ಲೆಯ ಮೆಹಬೂಬ್ ಎಂಬಾತ ವರ್ಷದ ಹಿಂದೆ ಮದುವೆಯಾಗಿದ್ದ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಆಲ್ಟ್‌ ನ್ಯೂಸ್ ವರದಿ ಮಾಡಿದೆ.

ಆದರೆ ಇಲ್ಲಿ ಇನ್ನೊಂದು ಟ್ವಿಸ್ಟ್‌ ಏನೆಂದರೆ ಕೊಲೆಯಾದ ಯುವತಿ ಹಿಂದೂ ಧರ್ಮಕ್ಕೆ ಸೇರಿದವಳಲ್ಲ ಎಂದು ಆಲ್ಟ್‌ ನ್ಯೂಸ್ ಫ್ಯಾಕ್ಟ್‌ಚೆಕ್ ಮಾಡಿದೆ.ಆದರೆ ಆರೋಪಿಯ ಪತ್ನಿ ಹಿಂದೂ ಧರ್ಮಕ್ಕೆ ಸೇರಿದವಳು ಎಂದು ತಪ್ಪಾಗಿ ಬಿಂಬಿಸಲಾಗಿದೆ. ಇಬ್ಬರೂ ಇಸ್ಲಾಂ ಧರ್ಮಕ್ಕೆ ಸೇರಿದವರು. ‘ಮಾನಸಿಕ ಅಸ್ವಸ್ಥನಾಗಿದ್ದ ಮೆಹಬೂಬ್, ಪತ್ನಿ ಯಾಸ್ಮೀನ್‌  ಅವರನ್ನು ಹತ್ಯೆ ಮಾಡಿದ್ದಾನೆ ಎಂದು ಪ್ರಕರಣದ ತನಿಖಾಧಿಕಾರಿ ಅವಿನಾಶ್ ಕುಮಾರ್ ತಿಳಿಸಿದ್ದು ಅದರ FIR ಪ್ರತಿಯನ್ನು ಪ್ರದರ್ಶಿಸಿದ್ದಾರೆ ಎಂದು ಆಲ್ಟ್‌ನ್ಯೂಸ್ ಫ್ಯಾಕ್ಟ್‌ಚೆಕ್ ವರದ ಮಾಡಿದೆ.

 

ಒಟ್ಟಾರೆಯಾಗಿ ಹೇಳುವುದಾದರೆ, ಒಂದೇ ಧರ್ಮದ ದಂಪತಿಗಳ ನಡುವೆ ಮನಸ್ತಾಪ ಉಂಟಾಗಿ, ಮಾನಸಿಕ ಅಸ್ವಸ್ಥನಾಗಿದ್ದ ಪತಿ ಮೆಹಬೂಬ್, ತನ್ನ ಪತ್ನಿ ಯಾಸ್ಮೀನ್‌  ಅವರನ್ನು ಹತ್ಯೆ ಮಾಡಿದ್ದ ಘಟನೆಯನ್ನು ಲವ್ ಜಿಹಾದ್ ಎಂದು ಕೋಮು ಹಿನ್ನಲೆಯಲ್ಲಿ ಹಂಚಿಕೊಳ್ಳಲಾಗಿದೆ. ಆದರೆ ವಾಸ್ತವವಾಗಿ ಇಬ್ಬರೂ ಮುಸ್ಇಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಸೋನಿಯಾ ಗಾಂಧಿ ಅನುಮತಿ ಪಡೆದು ಖುರ್ಚಿಯಲ್ಲಿ ಕುಳಿತರೆ ಮಲ್ಲಿಕಾರ್ಜುನ ಖರ್ಗೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights