ಫ್ಯಾಕ್ಟ್‌ಚೆಕ್ : ದೆಹಲಿ ಸರ್ಕಾರಿ ಶಾಲೆಗಳನ್ನು ಮದರಸವನ್ನಾಗಿ ಪರಿವರ್ತಿಸಿದರೆ ಅರವಿಂದ್ ಕೇಜ್ರಿವಾಲ್?

ದೆಹಲಿಯ ಸರ್ಕಾರಿ ಶಾಲೆಯನ್ನು ಮದರಸಾವನ್ನಾಗಿ ಪರಿವರ್ತಿಸಲಾಗುತ್ತಿದೆ, ಅರವಿಂದ್ ಕೇಜ್ರಿವಾಲ್ ಸರ್ಕಾರದ ಕಾರ್ಯವಿಧಾನವನ್ನು ನೋಡಿದರೆ ಇವರು ಏನು ಮಾಡಲು ಹೊರಟಿದ್ದಾರೆ ಎಂದು ತಿಳಿಯುತ್ತದೆ ಎಂದು ಪ್ರತಿಪಾದಿಸಿ ವಿಡಿಯೋ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಸರ್ಕಾರಿ ಶಾಲೆಯೊಂದರಲ್ಲಿ ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದೆ. ಶಾಲೆಯ ಕೋಣೆಯೊಂದರಲ್ಲಿ ಮಹಿಳೆಯರು, ಮಕ್ಕಳು ಕುಳಿತಿರುವ ಹಾಗೂ ಅಡುಗೆ ಮಾಡುತ್ತಿರುವ ದೃಶ್ಯ ಈ ವಿಡಿಯೊದಲ್ಲಿದೆ. ವ್ಯಕ್ತಿಯೊಬ್ಬರು ಮಕ್ಕಳಿಗೆ ಬೋಧಿಸುತ್ತಿರುವುದು ಕಾಣುತ್ತದೆ. ಶಾಲೆಯಲ್ಲಿ ಏನು ಚಟುವಟಿಕೆ ನಡೆಯುತ್ತಿದೆ ಎಂದು ಮತ್ತೊಬ್ಬ ವ್ಯಕ್ತಿ ಪ್ರಶ್ನಿಸುತ್ತಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶಾಲೆಗಳನ್ನು ಮದರಸಾಗಳನ್ನಾಗಿ ಪರಿವರ್ತಿಸುತ್ತಿದ್ದಾರೆ ಎಂದು ಟ್ವಿಟರ್ ಬಳಕೆದಾರರೊಬ್ಬರು ಈ ವಿಡಿಯೊ ಕುರಿತು ಬರೆದಿದ್ದಾರೆ. ಹಾಗಿದ್ದರೆ ಈ ಸುದ್ದಿ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಪೋಸ್ಟ್‌ಅನ್ನು ಪರಿಶಿಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಎರಡು ವರ್ಷ ಹಳೆಯದು ಹಾಗೂ ಉತ್ತರ ಪ್ರದೇಶದ ಗಾಜಿಯಾಬಾದ್‌ಗೆ ಸಂಬಂಧಿಸಿದ್ದು ಎಂದು ತಿಳಿದುಬಂದಿದೆ.

ಮಿರ್ಜಾಪುರದ ಭಾರತ್‌ ನಗರ ಪ್ರಾಥಮಿಕ ಶಾಲೆಯಲ್ಲಿ  ಔತಣಕೂಟ ಏರ್ಪಾಡಿಸಲಾಗಿತ್ತು. ಸಾಮಾಜಿಕ ಕಾರ್ಯಕರ್ತ ಅಶುತೋಷ್ ಗುಪ್ತಾ ಎಂಬವರು ಈ ಬಗ್ಗೆ ವಿಡಿಯೊ ಮಾಡಿ, ಪೊಲೀಸರಿಗೆ ದೂರು ನೀಡಿದ್ದರು. ಆದರೆ ದೆಹಲಿಯ ಶಾಲೆಯನ್ನು ಮದರಸಾವನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ತಪ್ಪಾಗಿ ಬಿಂಬಿಸಲಾಗಿದೆ ಎಂದು ‘ಬೂಮ್ ವರದಿ ಮಾಡಿದೆ.

ಈ ದೃಶ್ಯಗಳು ಉತ್ತರ ಪ್ರದೇಶದ ಗಾಜಿಯಾಬಾದ್‌ನ ಸರ್ಕಾರಿ ಶಾಲೆಯದ್ದು. ಘಾಜಿಯಾಬಾದ್‌ನಲ್ಲಿರುವ ದೃಶ್ಯಗಳನ್ನು ಸ್ಥಳೀಯ ಸುದ್ದಿ ಸಂಸ್ಥೆಗಳು  ವರದಿ ಮಾಡಿವೆ. ವರದಿಗಳ ಪ್ರಕಾರ, ವೈರಲ್ ದೃಶ್ಯಗಳು ಶಾಲೆಯ ಮುಸ್ಲಿಂ ಶಿಕ್ಷಕರೊಬ್ಬರು ತಮ್ಮ ಮಕ್ಕಳ ಯೋಗಕ್ಷೇಮಕ್ಕಾಗಿ ಶಾಲಾ ಆಡಳಿತ ಮಂಡಳಿಯ ಅನುಮತಿ ಮೇರೆಗೆ ಆಯೋಜಿಸಿದ ಕುರಾನ್ ಪಠಣ ಕಾರ್ಯಕ್ರಮಕ್ಕೆ ಸಂಬಂಧಿಸಿವೆ ಎಂದು ತಿಳಿಸಿವೆ.

ಈ ಘಟನೆಯ ಬಗ್ಗೆ ಶಾಲೆಯ ಆಡಳಿತ ಮಂಡಳಿಯು ಯಾವುದೇ ದೂರು ದಾಖಲಿಸಿಲ್ಲ, ಆದ್ದರಿಂದ ಯಾವುದೇ ಪ್ರಕರಣ ದಾಖಲಾಗಿಲ್ಲ  ಎಂದು ವಿಜಯ್ ನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಹೇಳಿದರು, ವೀಡಿಯೊದಲ್ಲಿರುವ ಜನರನ್ನು ಅಲ್ಲಿ ಸೇರಲು ಅನುಮತಿಯಿಲ್ಲದ ಕಾರಣ ಅವರ ಮನೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವಿಡಿಯೋ ದೆಹಲಿ ಸರ್ಕಾರಿ ಶಾಲೆಗೆ ಸಂಬಂಧಿಸಿದ್ದಲ್ಲ, ಬದಲಿಗೆ ಉತ್ತರ ಪ್ರದೇಶದ ಗಾಜಿಯಾಬಾದ್‌ನ ವಿಜಯ್ ನಗರದಲ್ಲಿ ನವೆಂಬರ್ 2021ರಲ್ಲಿ ನಡೆದಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮಾನಸಿಕ ರೋಗಿಯೊಬ್ಬ ಪತ್ನಿಯನ್ನೆ ಕೊಂದ ಘಟನೆಯನ್ನು ಲವ್ ಜಿಹಾದ್ ಎಂದು ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights