ಫ್ಯಾಕ್ಟ್‌ಚೆಕ್ : ನನ್ನ ಮಾತೃ ಭಾಷೆ ಉರ್ದು, ನಾನು ಕನ್ನಡ ಕಲಿಯೋದಿಲ್ಲ ಎಂದು ದರ್ಪ ತೋರಿದರೆ ಜಮೀರ್?

ಕಂಠೀರವ ಕ್ರೀಡಾಂಗಣದಲ್ಲಿ ದಿನಾಂಕ 20 ಮೇ 2023 ರಂದು ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾರಣಕ್ಕೆ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ನಂತರ ಇದೇ ವಿಷಯ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ.

ಪಠ್ಯ 'ನಮ್ ಮಾತಯಭಾಷೆ ಉರ್ದು, ಕನ್ನಡ ಓದೋಕೆ ಬರೆಯೋಕೆ ಬರಲ್ಲ ಮುಂದೆ ಕಲಿಯೋದು ಇಲ್ಲ, ಏನಿವಾಗ??' ಹೇಳುತ್ತಿದೆ ನ ಚಿತ್ರವಾಗಿರಬಹುದು

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದನ್ನು ಸಮರ್ಥಿಸಿಕೊಂಡು ಹೇಳಿಕೆ ನೀಡಿದ್ದಾರೆ ಎಂದು ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ. “ನಮ್ ಮಾತೃಭಾಷೆ ಉರ್ದು, ಕನ್ನಡ ಓದೋಕೆ ಬರೆಯೋಕೆ ಬರಲ್ಲ ಮುಂದೆ ಕಲಿಯೋದು ಇಲ್ಲ, ಏನಿವಾಗ??” ಎಂದು ಹೇಳಿದ್ದಾರೆ ಎಂದು ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಮುಂದುವರೆದು ಕನ್ನಡ ಪರ ಹೋರಾಟಗಾರರನ್ನು ಉಲ್ಲೇಖಿಸಿ “ನಕಲಿ ಕನ್ನಡ ಹೋರಾಟಗಾರರ ದರ್ಪ ಎಲ್ಲ ರಾಷ್ಟ್ರೀಯವಾದಿಗಳು ಹಿಂದುತ್ವವಾದಿಗಳ ಮೇಲೆ ಮಾತ್ರ, ಸಾಬರು ಜಿಹಾದಿಗಳ ಬಳಿ ಬಾಲ ಮುದುರಿಕೊಂಡು ಇರುತ್ತಾರೆ” ಎಂದು ಪ್ರಚೋದನಾತ್ಮಕ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿದ್ದಾರೆ.

3 ಜನರು ಮತ್ತು ಪಠ್ಯ 'i ಪ್ರಮಾಣ ವಚನದ ಬಗ್ಗೆ ಜಮೀರ್ ಫಸ್ಟ್ ರಿಯಾಕ್ಷನ್' ಹೇಳುತ್ತಿದೆ ನ ಚಿತ್ರವಾಗಿರಬಹುದು

ಈ ಪೋಸ್ಟ್‌ನಲ್ಲಿ ಟಿವಿ9 ಕನ್ನಡ ಸುದ್ದಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ್ದಾರೆ ಎಂಬ ಥಂಬ್ ನೇಲ್ ಚಿತ್ರವನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಜಮೀರ್ ಅಹ್ಮದ್ ಖಾನ್ ನಿಜವಾಗಿಯೂ ಇಂತಹ ಪ್ರತಿಕ್ರಿಯೆ ನೀಡಿದ್ದಾರೆಯೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಒಂದು ಕಡೆ ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಜಮೀರ್ ನಡೆ ಖಂಡಿಸಿ ಟ್ವೀಟ್ ಮಾಡಿರುವ ಕನ್ನಡ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಟಿ.ಎ. ನಾರಾಯಣಗೌಡ, ‘ಕರ್ನಾಟಕ ಸರ್ಕಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್ ಅವರು ಇನ್ನೂ ಕನ್ನಡ ಕಲಿಯದಿರುವುದು ನಾಚಿಕೆಗೇಡು.ಎಲ್ಲ ಸಚಿವರೂ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಜಮೀರ್ ಅಹಮದ್ ಅವರು ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಕಾರಣಕ್ಕೆ ಬಂದು ಇಷ್ಟು ವರ್ಷಗಳಾದರೂ ಕನ್ನಡ ಕಲಿಯದಿರುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಂತಿಮವಾಗಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಖಾನ್, ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಸಚಿವ ಜಮೀರ್ ನಡೆಗೆ ಸಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Image

 

ಕನ್ನಡದಲ್ಲಿ ಟ್ವೀಟ್‌ ಮಾಡಿದ್ದ ಜಮೀರ್‌

ಜಮೀರ್ ಆಹ್ಮದ್ ಖಾನ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದಂತೆ ಜಮೀರ್ ತಮ್ಮ ಟ್ವಿಟರ್‌ನಲ್ಲಿ ಕನ್ನಡದಲ್ಲಿ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ.

ಭಾರತೀಯ ಸಂವಿಧಾನದಲ್ಲಿ ನಿಜವಾದ ಶ್ರದ್ಧೆ ಮತ್ತು ನಿಷ್ಠೆ ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತ್ವ ಮತ್ತು ಅಖಂಡತೆಯನ್ನು ಎತ್ತಹಿಡಿಯುತ್ತೇನೆಂದು, ಸಚಿವನಾಗಿ ನನ್ನ ಕರ್ತವ್ಯಗಳನ್ನು ಶ್ರದ್ಧಾಪೂರ್ವಕವಾಗಿ ಮತ್ತು ಅಂತಃಕರಣಪೂರ್ವಕವಾಗಿ ನಿರ್ವಹಿಸುತ್ತೇನೆಂದು ದೇವರ ಮತ್ತು ನನ್ನ ತಾಯಿಯ ಹೆಸರಿನಲ್ಲಿ ಪ್ರಮಾಣ ಮಾಡಿದ್ದೇನೆ ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ ಟ್ವೀಟ್‌ ಮಾಡಿದ್ದಾರೆ.

ಸಚಿವರಾಗಿ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಅದನ್ನು ಸಮರ್ಥಿಸಿಕೊಂಡು, ದರ್ಪದಿಂದ ಪ್ರತಿಕ್ರಿಯೆ ನೀಡಿದ್ದಾರೆಯೇ ಎಂದು ಪರಿಶೀಲಿಸಿದಾಗ, ಅಂತಹ ಯಾವುದೇ ಹೇಳಿಕೆಯನ್ನು ನೀಡಿರುವ ಸುದ್ದಿಯಾಗಲಿ ವರದಿಯಾಗಲಿ ಲಭ್ಯವಾಗಿಲ್ಲ, ಬದಲಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಸಿ, ಕಾಂಗ್ರೆಸ್ ಪಕ್ಷ ತಮ್ಮ ಕೆಲಸವನ್ನು ಗುರುತಿಸಿ ಮೊದಲ ಪಟ್ಟಿಯಲ್ಲೆ ಸಚಿವನನ್ನಾಗಿ ಆಯ್ಕೆ ಮಾಡಿರುವುದು ಸಂತಸ ತಂದಿದೆ. ಯಾವುದೇ ಖಾತೆಯನ್ನು ನೀಡಿದರೂ ನಾನು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾನು ಮೊದಲು ಕನ್ನಡಿಗ.. ಆಮೇಲೆ ಮುಸ್ಲಿಂ ಎಂದಿದ್ದ ಜಮೀರ್
ಇನ್ನು 2018ರ ಚುನಾವಣೆಯ ಪ್ರಚಾರದ ಅಂತಿಮ ದಿನದಂದು ಮತಯಾಚನೆ ವೇಳೆ ಮಾತನಾಡಿದ್ದ ಜಮೀರ್ ಅಹ್ಮದ್, ನಾನು ಮೊದಲು ಕನ್ನಡಿಗ.. ಆಮೇಲೆ ಮುಸ್ಲಿಂ ಎಂದು ಹೇಳಿದ್ದರು. ಇಂತಹ ಜಮೀರ್ ಅಹ್ಮದ್ ಇಂದು ಕನ್ನಡ ಬಿಟ್ಟು ಇಂಗ್ಲೀಷ್ ನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಪರ ವಿರೋಧದ ಚರ್ಚೆ ಕಾರಣವಾಗಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದನ್ನು ಸಮರ್ಥಿಸಿಕೊಂಡು ದರ್ಪದ ಹೇಳಿಕೆ ನೀಡಿದ್ದಾರೆ ಎಂಬುದು ಸುಳ್ಳು. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಬೆಂಬಲಿಗರು ಪೊಲೀಸರಿಗೆ ಬೆದರಿಕೆ ಹಾಕಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights