ಫ್ಯಾಕ್ಟ್‌ಚೆಕ್ : ವಿಧಾನಸಭೆಯಲ್ಲಿ ನಮಾಜ್ ಮಾಡಲು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಶಿಫಾರಸ್ಸು ಮಾಡಿದೆಯೇ?

ನಮಾಜ್‌ಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ವೊಂದು ಹಲವು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಪ್ರಸಾರವಾಗುತ್ತಿದೆ. ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ಸಂದೇಶದಲ್ಲಿ ಸನಾತನ ಭಾರತಿಯ ಲೋಗೋದೊಂದಿಗೆ, ಸುವರ್ಣ ಏಷ್ಯಾನೆಟ್ ಕನ್ನಡ ಸುದ್ದಿ ಮಾಧ್ಯಮದ ಲೋಗೋ ಹೊಂದಿರುವ ಪೋಸ್ಟ್‌ನಲ್ಲಿ ವಿಧಾನಸಭೆಯಲ್ಲಿ ನಮಾಜ್‌ ಮಾಡಲು 7 ಜನರ ಸಮಿತಿಯನ್ನು ಶಿಫಾರಸ್ಸು ಮಾಡಲಾಗಿದೆ ಎಂದು ಬರೆಯಲಾಗಿದೆ. ಈಗ ಈ ಪೋಸ್ಟ್‌ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

“ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಪ್ರಿಯ ಹಿಂದೂಗಳೆ, ಹೆಚ್ಚೇನು ಹೇಳುವುದಿಲ್ಲ ಹೊಡೀರಿ ಚಪ್ಪಾಳೆ”ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಇತ್ತೀಚೆಗೆ ರಾಜ್ಯದಲ್ಲಿ ಬಹುಮತದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷವನ್ನು ಗುರಿಯಾಗಿಸಿಕೊಂಡು ಈ ಪೋಸ್ಟ್‌ಅನ್ನು ವಾಟ್ಸಾಪ್‌ ಗ್ರೂಪ್‌ಗಳ45 ಮೂಲಕ ಹಂಚಿಕೊಳ್ಳಲಾಗುತ್ತಿದೆ.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಈ ಪೋಸ್ಟ್‌ನಲ್ಲಿರುವ ಸಂದೇಶವನ್ನು ಪರಿಶೀಲಿಸುವಂತೆ ಏನ್‌ಸುದ್ದಿ.ಕಾಂಗೆ ವಿನಂತಿಸಿದ್ದಾರೆ. ಹಾಗಾಗಿ ಪೊಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ಮಾಡಿದಾಗ, ದಿನಾಂಕ 19 ಮೇ 2023ರಂದು ಪಿಟಿಐ (Press trust of India) ನಲ್ಲಿ ಸುದ್ದಿಯೊಂದು ಪ್ರಕಟವಾಗಿದೆ.

ಆ ಸುದ್ದಿಯ ಪ್ರಕಾರ, ಜಾರ್ಖಂಡ್‌ ವಿಧಾನಸಭೆಯಲ್ಲಿ ನಮಾಜ್‌ ಮಾಡಲು ಜಾಗ ಕಲ್ಪಿಸುವ ಸಂಬಂಧ ವರದಿ ನೀಡಲು 7 ಜನರ ತಂಡ ರಚಿಸಿರುವುದಾಗಿ ಜಾರ್ಖಂಡ್‌ ವಿಧಾನಸಭೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈಗಾಗಲೇ ಜಾಗ ಕಲ್ಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ಈ ಮಾಹಿತಿ ನೀಡಿದ ವಿಧಾನಸಭೆ, ಈ ಬಗ್ಗೆ ವರದಿ ನೀಡಲು ಸಮಿತಿ ರಚಿಸಲಾಗಿದೆ. ಅದು ವಿವಿಧ ರಾಜ್ಯಗಳಲ್ಲಿನ ಮಾಹಿತಿಯನ್ನು ಸಂಗ್ರಹಿಸಿ ಸಲ್ಲಿಸಲಿದೆ. ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದೆ.

2021ರಲ್ಲಿ ಜಾರ್ಖಂಡ್‌ ಸರ್ಕಾರ, ಕೊಠಡಿಯೊಂದನ್ನು ನಮಾಜ್‌ಗೆ ನೀಡಿತ್ತು. ಇದನ್ನು ವಿರೋಧಿಸಿದ್ದ ಬಿಜೆಪಿ ಹನುಮಂತನ ದೇಗುಲ ನಿರ್ಮಾಣಕ್ಕೆ ಅವಕಾಶ ಕೋರಿತ್ತು. ವೈರಲ್ ಮಾಡಲಾದ ಸುದ್ದಿ ಕರ್ನಾಟಕದ ಕಾಂಗ್ರೆಸ್‌ಗೂ ಸುದ್ದಿಗೂ ಸಂಬಂಧವಿಲ್ಲ.

ಕರ್ನಾಟಕದಲ್ಲಿ 2023ರ ಚುನಾವಣೆ ಮುಗಿದು ಬಹುಮತದ ಮೂಲಕ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದಂತೆ ಮುಸ್ಲಿಮರನ್ನು ಓಲೈಕೆ ಮಾಡುತ್ತಿದೆ ಎಂದು ಆಪಾಧಿಸಿ ಹಲವು ಬಲಪಂಥೀಯ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸುಳ್ಳು ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳುತ್ತಿದ್ದಾರೆ.

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಯೋಗ ಶಕ್ತಿಯಿಂದ ಹಕ್ಕಿಯಂತೆ ಹಾರಲು ಸಾಧ್ಯವೇ? ಈ ಸ್ಟೋರಿ ಓದಿ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights