ಫ್ಯಾಕ್ಟ್‌ಚೆಕ್ : ಯೋಗಿ ಆದಿತ್ಯನಾಥ್ ಟಿಪ್ಪು ಚಿತ್ರಕ್ಕೆ ನಮಸ್ಕರಿಸಿದ್ದಾರೆ ಎಂದು ಎಡಿಟ್ ಮಾಡಿದ ಫೋಟೊ ಹಂಚಿಕೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟಿಪ್ಪು ಸುಲ್ತಾನ್ ಅವರ ಭಾವಚಿತ್ರದ ಮುಂದೆ ನಮಸ್ಕರಿಸುತ್ತಿರುವ ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಯೋಗಿ ಆದಿತ್ಯನಾಥ್ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ನಿಜವಾಗಿಯೂ ನಮಸ್ಕರಿಸಿದರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾಡಲಾದ ಪ್ರತಿಪಾದನೆಯನ್ನು ಪರಿಶೀಲಿಸೋಣ.

4 ಜನರು, ಸ್ಲೋ ಲೋರಿಸ್ ಮತ್ತು ಡೈಸ್ ನ ಚಿತ್ರವಾಗಿರಬಹುದು

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಫೋಟೊವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಯೋಗಿ ಆದಿತ್ಯನಾಥ್ ಅವರ ಅಧಿಕೃತ ಫೇಸ್‌ಬುಕ್ ಫೇಜ್‌ನಲ್ಲಿ 29 ಜೂನ್ 2021 ರಂದು ಪೋಸ್ಟ್ ಮಾಡಲಾದ ಇದೇ ರೀತಿಯ ಚಿತ್ರವೊಂದು ಲಭ್ಯವಾಗಿದೆ. ” ಡಾ. B.R.ಅಂಬೇಡ್ಕರ್ ಅವರನ್ನು ಗೌರವಿಸುವ ಸ್ಮಾರಕದ ಉದ್ಘಾಟನೆ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಘಟನೆಯ ಕೀ ವರ್ಡ್ ಮೂಲಕ ಸರ್ಚ್ ಮಾಡಿದಾಗ, ಜೂನ್ 2021 ರಲ್ಲಿ, ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಲಕ್ನೋದಲ್ಲಿ ಡಾ. ಅಂಬೇಡ್ಕರ್ ಸ್ಮಾರಕಕ್ಕೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ. ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಂದಿನ ರಾಷ್ಟ್ರಪತಿ ಕೋವಿಂದ್ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು  ಗೌರವ ಸಲ್ಲಿಸುತ್ತಿರುವ ಛಾಯಾಚಿತ್ರಗಳನ್ನು  ಇಲ್ಲಿ, ಇಲ್ಲಿ ಮತ್ತು ಇಲ್ಲಿ ಕಾಣಬಹುದು.

ವೈರಲ್ ಚಿತ್ರವನ್ನು ಮೂಲ ಚಿತ್ರದೊಂದಿಗೆ ಹೋಲಿಸಿದಾಗ, ವೈರಲ್ ಫೋಟೋವನ್ನು ಎಡಿಟ್ ಮೂಲಕ ಮಾರ್ಫ್ ಮಡಲಾಗಿದೆ ಎಂಬುದು ಸ್ಪಷ್ಟವಾಗಿದೆ, ಇದರಲ್ಲಿ ಡಾ. ಅಂಬೇಡ್ಕರ್ ಅವರ ಭಾವಚಿತ್ರದ ಬದಲಿಗೆ ಟಿಪ್ಪು ಸುಲ್ತಾನ್ ಅವರ ಚಿತ್ರವನ್ನು ಡಿಜಿಟಲ್ ಎಡಿಟೆಡ್ ಮೂಲಕ ಸೇರಿಸಲಾಗಿದೆ ಎಂದು ಸ್ಪಷ್ಟವಾಗುತ್ತದೆ. ವಾಸ್ತವವಾಗಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಯೋಗಿ ಆದಿತ್ಯನಾಥ್ ನಮಸ್ಕರಿಸಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಯೋಗಿ ಆದಿತ್ಯನಾಥ್ ನಮಸ್ಕರಿಸುವ ಈ ಫೋಟೋವನ್ನು ಡಿಜಿಟಲ್ ಮೂಲಕ ಎಡಿಟ್ ಮಾಡಲಾಗಿದೆ. ಮೂಲ ಫೋಟೋದಲ್ಲಿ ಯೋಗಿ ಆದಿತ್ಯನಾಥ್ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನಮಸ್ಕರಿದ್ದಾರೆ. ಆದರೆ ಫೋಟೊವನ್ನು ಎಡಿಟ್ ಮಾಡುವ ಮೂಲಕ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ಗಿಟಾರ್ ನುಡಿಸುತ್ತಿರುವ ಚಿತ್ರದ ಹಿಂದಿನ ವಾಸ್ತವವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights