ಫ್ಯಾಕ್ಟ್‌ಚೆಕ್ : ರೈಲು ಅಪಘಾತದ ಸಂತ್ರಸ್ತರಿಗೆ ದೋನಿ ಮತ್ತು, ಕೋಹ್ಲಿ ದೇಣಿಗೆ ನೀಡಿದ್ದಾರೆ ಎಂಬುದು ಸುಳ್ಳು

ಒಡಿಶಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 275 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದರು. ಈ ಘನ ಘೋರ ದುರಂತಕ್ಕೆ ದೇಶಾದ್ಯಂತ ಜನರು ಮಮ್ಮಲ ಮರುಗಿದ್ದಾರೆ.

ರೈಲು ಅಪಘಾತದ ಸಂತ್ರಸ್ತರಿಗೆ ಭಾರತೀಯ  ಕ್ರಿಕೆಟ್ ತಂಡದ ಮಾಜಿ ನಾಯಕರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಕ್ರಮವಾಗಿ 60 ಮತ್ತು 30 ಕೋಟಿ ರೂಪಾಯಿಗಳ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ ಎನ್ನುವ ಪೋಸ್ಟರ್‌ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

 

1 ವ್ಯಕ್ತಿ, ರೈಲು, ರಸ್ತೆ ಮತ್ತು ಪಠ್ಯ 'Virat Kohli Heart ca--.-ត. IG @pehla. pyar Virat Kohli Donates 30 Crore For Odisha Train Accident Relief' ಹೇಳುತ್ತಿದೆ ನ ಚಿತ್ರವಾಗಿರಬಹುದು1 ವ್ಯಕ್ತಿ ಮತ್ತು ಪಠ್ಯ 'Odisha Train Accident: MS Dhoni Donate 60 crore, true or False? Gull SRAnEA' ಹೇಳುತ್ತಿದೆ ನ ಚಿತ್ರವಾಗಿರಬಹುದು

ಕ್ರಿಕೆಟಿಗರಾದ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ಅವರು ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಕ್ರಮವಾಗಿ 60 ಕೋಟಿ ಮತ್ತು 30 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ./ ಸಹಾಯಹಸ್ತ ಚಾಚುವುದಾಗಿ ಭರವಸೆ ನೀಡಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹಾಗಿದ್ದರೆ ಈ ಸುದ್ದಿ ನಿಜವೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಮಗಳಲ್ಲಿ ಹಂಚಿಕೊಳ್ಳಲಾಗಿರುವ ಪೋಸ್ಟ್‌ಅನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ದೋನಿ ಮತ್ತು ಕೊಹ್ಲಿಯ ಟ್ವಿಟರ್ ಖಾತೆಗಳನ್ನು ಪರಿಶೀಲಿಸದಾಗ ಅಂತಹ ಯಾವುದೇ ಘೋಷಣೆಯನ್ನು ಮಾಡಿರುವ ಬಗ್ಗೆ ಟ್ವೀಟ್‌ಗಳಾಗಲಿ ಲಭ್ಯವಿಲ್ಲ.

ಈ ಭೀಕರ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಟೀಮ್ ಇಂಡಿಯಾದ ಆಟಗಾರ ವಿರಾಟ್ ಕೊಹ್ಲಿ ಕೂಡ ಸಂತಾಸ ಸೂಚಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ್ದ ಕೊಹ್ಲಿ, ಒಡಿಶಾದಲ್ಲಿ ಜರುಗಿದ ಭೀಕರ ರೈಲು ಅಪಘಾತದ ಸುದ್ದಿ ಕೇಳಿ ವಿಚಲಿತನಾಗಿದ್ದೇನೆ. ತುಂಬಾ ದುಃಖವಾಯಿತು. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ನನ್ನ ಸಂತಾಪಗಳು.

ಆ ಕುಟುಂಬ ಸದಸ್ಯರಿಗೆ ನೋವು ತಡೆದುಕೊಳ್ಳುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಹಾಗೆಯೇ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ವಿರಾಟ್ ಕೊಹ್ಲಿ ಟ್ವಿಟರ್​ನಲ್ಲಿ ಬರೆದುಕೊಂಡಿದ್ದರು.

ಆದರೆ ವಿರಾಟ್ ಕೊಹ್ಲಿ ಇದುವರೆಗೆ ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ವಿರಾಟ್ ಕೊಹ್ಲಿಯಾಗಲಿ ಅಥವಾ ಅವರ ಪತ್ನಿ ಅನುಷ್ಕಾ ಶರ್ಮಾ ಆಗಲಿ ಈ ಬಗ್ಗೆ ಯಾವುದೇ ಹೇಳಿಕೆಯನ್ನಾಗಲಿ ಅಥವಾ ಪ್ರಕಟಣೆಯನ್ನಾಗಲಿ ಹೊರಡಿಸಿಲ್ಲ

ಒಟ್ಟಾರೆಯಾಗಿ ಹೇಳುವುದಾದರೆ, ಒಡಿಶಾ ರೈಲು ಅಪಘಾತದ ಸಂತ್ರಸ್ತರಿಗೆ ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನೀಡಿದ ದೇಣಿಗೆಯನ್ನು ಯಾವುದೇ ವಿಶ್ವಾಸಾರ್ಹ ಮಾಧ್ಯಮ ವರದಿಗಳು ಅಥವಾ ಅಧಿಕೃತ ಹೇಳಿಕೆಗಳು ದೃಢಪಡಿಸುವುದಿಲ್ಲ. ಇದಲ್ಲದೆ, ಅವರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಅಂತಹ ಯಾವುದೇ ದೇಣಿಗೆಗಳನ್ನು ಸೂಚಿಸುವ ಯಾವುದೇ ಪೋಸ್ಟ್‌ಗಳಿಲ್ಲ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಯೋಗೇಂದ್ರ ಯಾದವ್ ಅವರ ಮೂಲ ಹೆಸರು ಸಲೀಂ ಎಂಬುದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights