ಫ್ಯಾಕ್ಟ್‌ಚೆಕ್ : ರೈಲಿಗೆ ಕಲ್ಲು ತೂರುತ್ತಿರುವ ಹಳೆಯ ವಿಡಿಯೋವನ್ನು ಇತ್ತೀಚಿನದು ಎಂದು ತಪ್ಪಾಗಿ ಹಂಚಿಕೆ

ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ 270ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರೆ, 1000ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿದ್ದರು. ಈ ರೈಲು ಅಪಘಾತದ ಘಟನೆ ನಡೆದ ಹಿನ್ನಲೆಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ.

ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮುಸ್ಲಿಮರು ಚಲಿಸುತ್ತಿರುವ ರೈಲಿಗೆ ಕಲ್ಲುತೂರಾಟ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಇದು ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸದಾಗ, ಈ ವಿಡಿಯೋ 2019ರಿಂದಲೂ ಸೋಶಿಯಲ್ ಮೀಡಿಯಾದಲ್ಲಿ ಪ್ರಸಾರವಾಗುತ್ತಿದೆ. ಅಂದರೆ ವಾಸ್ತವವಾಗಿ ಈ ಘಟನೆ ಇತ್ತೀಚೆಗೆ ನಡೆದ ಭೀಕರ ರೈಲು ಅಪಘಾತದ ಹಿನ್ನಲೆಯನ್ನು ಹೊಂದಿಲ್ಲ.

2019 ರಿಂದಲೂ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದ್ದು, ಘಟನೆ ಹಿನ್ನಲೆ ಮತ್ತು ಸಂದರ್ಭವನ್ನು ಪತ್ತೆಹಚ್ಚಲಾಗಿಲ್ಲ.

 

ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ರೈಲಿನ ಮೇಲೆ ಮುಸ್ಲಿಂ ಗುಂಪು ಕಲ್ಲು ತೂರಾಟದ ದೃಶ್ಯಗಳು ಎಂದು ಕೆಲವು ಬಳಕೆದಾರರು ಉಲ್ಲೇಖಿಸಿದ್ದಾರೆ. ಘಟನೆಯ ನಿಖರವಾದ ಸ್ಥಳವನ್ನು ಖಚಿತಪಡಿಸಲು ಸಾಧ್ಯವಾಗದಿದ್ದರೂ, ಪೋಸ್ಟ್‌ನಲ್ಲಿ ಹಂಚಿಕೊಂಡ ವೀಡಿಯೊ ಹಳೆಯದು ಎಂದು ದೃಢೀಕರಿಸಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಒಡಿಶಾ ರೈಲು ಅಪಘಾತ ನಡೆದ ನಂತರ ರೈಲು ಹಳಿಗಳು ಮತ್ತು ರೈಲುಗಳನ್ನು ಧ್ವಂಸ ಮಾಡಲು ಮುಸ್ಲಿಮರು ಯೋಜಿತ ಸಂಚುರೂಪಿಸಿದ್ದಾರೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಸಂಬಂಧವಿಲ್ಲದ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್: 1st PUC ಯಲ್ಲೇ ಫೇಲ್ ಆಗಿದ್ರಾ ಪ್ರಯಾಂಕ್ ಖರ್ಗೆ? ಇಲ್ಲಿದೆ ಫುಲ್ ಡೀಟೇಲ್ಸ್!


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights