ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ಗಾಯಕಿ ರಿಹಾನಳನ್ನ ನೋಡುತ್ತಿರುವಂತೆ ಎಡಿಟ್ ಮಾಡಿದ ಚಿತ್ರ ಹಂಚಿಕೆ

ಪ್ರಧಾನಿ ನರೇಂದ್ರ ಮೋದಿ ಅವರು ಗಾಯಕಿ ರಿಹಾನ್ನಾ ಅವರನ್ನು ತದೇಕಚಿತ್ತದಿಂದ ನೋಡುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪ್ರಧಾನಿ ಮೋದಿ ರಿಹಾನ್ನಾಳನ್ನು ಈ ರೀತಿ ನಿಜವಾಗಿಯೂ ನೋಡಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ, ಪ್ರಧಾನಿ ಮೋದಿ ಮತ್ತು ರಿಹಾನ್ನಾ ಭೇಟಿಯಾದ ಅಥವಾ ವೇದಿಕೆಯನ್ನು ಹಂಚಿಕೊಂಡ ಬಗ್ಗೆ ಯಾವುದಾದರೂ ಕಾರ್ಯಕ್ರಮಗಳು ನಡೆದಿವೆಯೇ ಎಂದು ಪರಿಶೀಲಿಸಿದಾಗ ಅಂತಹ ಯಾವುದೇ ವರದಿಗಳನ್ನು ಲಭ್ಯವಾಗಿಲ್ಲ.

Rihanna

ರಿಹಾನ್ನಾ ಅವರ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, 2017 ರ (ಇಲ್ಲಿ ಮತ್ತು ಇಲ್ಲಿ) ಕೆಲವು ಸುದ್ದಿ ಲೇಖನಗಳಿಗೆ ನಮ್ಮನ್ನು ಕರೆದೊಯ್ಯಿತು, ಹಾರ್ವರ್ಡ್ ವಿಶ್ವವಿದ್ಯಾಲಯದ ವರ್ಷದ ಮಾನವೀಯ ಪ್ರಶಸ್ತಿಯನ್ನು ಅವರಿಗೆ ನೀಡಿದಾಗ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ ಎಂದು ಫ್ಯಾಕ್ಟ್‌ಲಿ ವರದಿ ಮಾಡಿದೆ.

ಇದಲ್ಲದೆ, ನರೇಂದ್ರ ಮೋದಿಯವರ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ದಿ ಟ್ರಿಬ್ಯೂನ್‌ನ ಸುದ್ದಿ ವರದಿ ಲಭ್ಯವಾಗಿದೆ. ಅದರಲ್ಲಿ ವೈರಲ್ ಫೋಟೋದಲ್ಲಿ ಕಂಡುಬರುವ ಕುರ್ತಾವನ್ನು ಅವರು ಧರಿಸಿರುವ ಮಧ್ಯದ ಶಾಟ್ ಇದೆ. ಈ ವರದಿಯು 2019 ರಲ್ಲಿ ಅವರು ನವದೆಹಲಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿದಾಗ ಸೆರೆಹಿಡಿದ ಚಿತ್ರ ಎಂದು ತಿಳಿದು ಬಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಗಾಯಕಿ ರಿಹಾನ ಮತ್ತು ಪ್ರಧಾನಿ ಮೋದಿಯವರ ಬೇರೆ ಬೇರೆ ಕಾರ್ಯಕ್ರಮಗಳ ಚಿತ್ರವನ್ನು ಎಡಿಟ್ ಮಾಡಿ ಒಂದೇ ವೇದಿಕೆಯಲ್ಲಿ ಇಬ್ಬರು ಒಟ್ಟಿಗೆ ಕುಳಿತ್ತಿರುಂತೆ ಮತ್ತು ಮೋದಿ ರಿಹಾನ ಅವರನ್ನು ನೋಡುತ್ತಿರುವಂತೆ ಎಡಿಟ್ ಮಾಡಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿ ‘ಭೂಮಿಯ ಮೇಲಿನ ಕೊನೆಯ ಭರವಸೆ’ ಎಂದು ನ್ಯೂಯಾರ್ಕ್ ಟೈಮ್ಸ್‌ ಲೇಖನ ಪ್ರಕಟಿಸಿದೆಯೇ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights