ಫ್ಯಾಕ್ಟ್‌ಚೆಕ್ : ಪಿಕಾಸಿಯಿಂದ ಯುವತಿಯ ತಲೆಯನ್ನು ಹೊಡೆದು, ಕಲ್ಲಿನಿಂದ ಜಜ್ಜಿ ಹಾಕುವ ವಿಡಿಯೋ ಮಣೀಪುರದ್ದಲ್ಲ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ಇಡೀ ದೇಶವನ್ನೆ ಬೆಚ್ಚಿ ಬೀಳುವಂತೆ ಮಾಡಿತ್ತು. ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಕುಕಿ-ಜೋಮಿ ಸಮುದಾಯಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಪುರುಷರ ನೇತೃತ್ವದ ಜನಸಮೂಹವು ಬೆತ್ತಲೆಯಾಗಿ ಮೆರವಣಿಗೆ ಮಾಡುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಘಟನೆ ನಡೆದು ಎರಡು ತಿಂಗಳ ನಂತರ ವಿಡಿಯೋ ವೈರಲ್ ಆಗಿತ್ತು. ನಂತರದಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವಿಡಿಯೊವನ್ನು ಹಂಚಿಕೊಳ್ಳದಂತೆ ಕೇಂದ್ರ ಸರ್ಕಾರ ಟ್ವಿಟರ್ ಮತ್ತು ಇತರ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ಆದೇಶ ನೀಡಿತ್ತು.

ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಮಣಿಪುರದಲ್ಲಿ ನಡೆದ ಘಟನೆ ಎಂದು ಬೇರೆ ಬೇರೆ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಮಣಿಪುರದಲ್ಲಿ ಕ್ರಿಶ್ಚಯನ್ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ವಿಡಿಯೋವನ್ನು ಪ್ರಸಾರ ಮಾಡಲಾಗುತ್ತಿದೆ.

https://twitter.com/Muthuku83913977/status/1684175071936647168

ಯುವತಿಯೊಬ್ಬಳ ಬಾಯಿಯನ್ನು ಬಟ್ಟೆಯಿಂದ ಬಿಗಿದು, ಕೈಗಳನ್ನು ಕಟ್ಟಿಹಾಕಿ ಪಿಕಾಸಿ, ಹಾರೆಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದೂ ಸಾಲದೂ ಎಂದು ದೊಡ್ಡ ಸೈಜಿನ ಕಲ್ಲನ್ನು ತಲೆಯ ಮೇಲೆ ಹಾಕುತ್ತಿರುವ ವಿಡಿಯೋ ಭಯಾನಕವಾಗಿದೆ. ಈ ದೃಶ್ಯಗಳು ಮಣಿಪುರದ್ದು ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ಈ ವಿಡಿಯೋದ ಸತ್ಯಾ ಸತ್ಯತೆಯನ್ನು ಪರಿಶೀಲಿಸುವಂತೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಏನ್‌ಸುದ್ದಿ.ಕಾಂಗೆ ಸಂದೇಶಗಳ ಮೂಲಕ ವಿನಂತಿಸಿದ್ದಾರೆ. ಹಾಗಿದ್ದರೆ ವಿಡಿಯೋ ನಿಜವಾಗಿಯೂ ಮಣಿಪುರದ ಘಟನೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಮಣಿಪುರದಲ್ಲಿ ನಡೆದ ಘಟನೆಯ ವಿಡಿಯೋ ಎಂಬ ಪ್ರತಿಪಾದನೆಯೊಂದಿಗೆ ಪ್ರಸಾರವಾಗುತ್ತಿರುವ ದೃಶ್ಯಗಳನ್ನು ಪರಿಶೀಲಿಸಿದಾಗ ಇದು 2020ರಲ್ಲಿ ಬ್ರೆಜಿಲ್‌ನಲ್ಲಿ ನಡೆದ ಘಟನೆ ಎಂದು ತಿಳಿದು ಬಂದಿದೆ.

ವಿಡಿಯೊದಲ್ಲಿ ಮಹಿಳೆ ಧರಿಸಿರುವ ಟಿ-ಶರ್ಟ್ ಬ್ರೆಜಿಲಿಯನ್ ಸಾಕರ್ ತಂಡ ಫೋರ್ಟಲೆಜಾ ಎಸ್ಪೋರ್ಟೆ ಕ್ಲಬ್‌ನ ಅಧಿಕೃತ ಜರ್ಸಿಯಾಗಿದೆ.  ‘ಡಾಕ್ಯುಮೆಂಟಿಂಗ್ ರಿಯಾಲಿಟಿ’ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಫೋಟೋಗಳು ವಿಡಿಯೊದಲ್ಲಿರುವ ಮಹಿಳೆಯನ್ನು 23 ವರ್ಷದ ಥಾಲಿಯಾ ಟೊರೆಸ್ ಡಿ ಸೋಜಾ ಎಂದು ಬಹಿರಂಗಪಡಿಸಿದೆ. ಹಾಗಾಗಿ ಈ ಘಟನೆ ನಡೆದಿರುವುದು ಭಾರತದಲ್ಲಿ ಅಲ್ಲ ಎಂದು ಸ್ಪಷ್ಟವಾಗಿದೆ.

ಸೆಪ್ಟೆಂಬರ್ 02, 2020 ರಲ್ಲಿ ಸೊಬ್ರಾಲಗೋರಾದಲ್ಲಿ ಪ್ರಕಟವಾದ ಸುದ್ದಿ ವರದಿಯ ಪ್ರಕಾರ ಆಗಸ್ಟ್ 2020 ರಲ್ಲಿ ಸಿಯಾರಾದಲ್ಲಿ 17 ಮಹಿಳೆಯರನ್ನು ಕೊಲೆ ಮಾಡಲಾಗಿದೆ ಎಂದು ವರದಿ ಮಾಡಿದೆ. 2020 ರಲ್ಲಿ  226 ಮಹಿಳೆಯರು ಕೊಲ್ಲಲ್ಪಟ್ಟಿದ್ದಾರೆ ಎಂದು ಉಲ್ಲೇಖಿಸಿದೆ.

ವೈರಲ್ ವೀಡಿಯೋದಲ್ಲಿರುವ ಅದೇ ದೃಶ್ಯಗಳನ್ನು ಹೊಂದಿರುವ ವೀಡಿಯೊವನ್ನು ಆಗಸ್ಟ್ 2020 ರಲ್ಲಿ ಹುಡ್‌ಸೈಟ್ ವೆಬ್‌ಸೈಟ್‌ನಲ್ಲಿ ‘ಬ್ರೆಜಿಲ್‌ನಲ್ಲಿ ಹದಿಹರೆಯದ ಹುಡುಗಿಯನ್ನು ಗುದ್ದಲಿಯಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ’ ಎಂಬ ಶೀರ್ಷಿಕೆಯೊಂದಿಗೆ ಪ್ರಕಟಿಸಲಾಗಿದೆ.

 

ಈ ಹಿಂದೆಯೂ ಇದೇ ವಿಡಿಯೋವನ್ನು ಭಾರತದದ್ದು ಎಂದು ಹಂಚಿಕೊಳ್ಳಲಾಗಿತ್ತು, ಹಲವು ವರ್ಷಗಳಿಂದ ಇದೇ ವಿಡಿಯೋವನ್ನು ಬೇರೆ ಬೇರೆ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ. ಈ ಹಿಂದೆಯೂ ಈ ವಿಡಿಯೋವನ್ನು ಭಾರತದಲ್ಲಿ ಲವ್ ಜಿಹಾದ್‌ ಎಂದು ಹಿಂದೂ ಯುವತಿಯನ್ನು ಹತ್ಯೆ ಮಾಡಿಲಾಗಿದೆ ಎಂದು ವೈರಲ್ ಮಾಡಲಾಗಿತ್ತು. ಆಗ ಏನ್‌ಸುದ್ದಿ.ಕಾಂ ಇದರ ಸತ್ಯಾಸತ್ಯತೆ ಏನೆಂದು ಫ್ಯಾಕ್ಟ್‌ಚೆಕ್ ಸ್ಟೋರಿಯನ್ನು ಪ್ರಕಟಿಸಿತ್ತು.

ಬ್ರೆಜಿಲ್‌ನ  ವಿಡಿಯೋ ಇದೀಗ ‘ಮಣಿಪುರದಲ್ಲಿ ಕ್ರಿಶ್ಚಿಯನ್ ಮಹಿಳೆಯನ್ನು’  ಕೊಡಲಿಯಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ವಿಡಿಯೋ ಎಂದು ವಾಟ್ಸಾಪ್‌ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಬ್ರೆಜಿಲ್‌ನ ಥಾಲಿಯಾ ಟೊರೆಸ್ ಡಿ ಸೋಜಾ ಎಂಬ ಮಹಿಳೆಯನ್ನು ಕೊಡಲಿ ಮತ್ತು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಹಳೆಯ ವಿಡಿಯೋವನ್ನು ಮಣಿಪುರದಲ್ಲಿ ಕ್ರಿಶ್ಚಯನ್ ಮಹಿಳೆಯನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರತಿಪಾದನೆಯೊಂದಿಗೆ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕಬ್ಬು, ಹತ್ತಿ, ಜೋಳದ ಹೊಲಗಳಲ್ಲಿ ಕಾಣಿಸಿಕೊಳ್ಳುವ ಈ ಕೀಟ ಕಚ್ಚಿದರೆ ಸಾವು ನಿಶ್ಚಿತವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights