ಫ್ಯಾಕ್ಟ್‌ಚೆಕ್ : 2019ರಲ್ಲಿ ಗುಜರಾತ್‌ನಲ್ಲಿ ನಡೆದ ಹಿಂಸಾಚಾರದ ಹಳೆಯ ವಿಡಿಯೋವನ್ನು ಕೋಮು ನಿರೂಪಣೆಯೊಂದಿಗೆ ಹಂಚಿಕೆ

ಜನರ ಗುಂಪೊಂದು ಸಾರಿಗೆ ಬಸ್‌ಗಳ ಕಿಟಕಿ ಮತ್ತು ಬಾಗಿಲುಗಳ ಗಾಜುಗಳನ್ನು ಒಡೆದು ಧ್ವಂಸ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.

ಈ ದಾಳಿಯನ್ನು ಮುಸ್ಲಿಮರೇ ಹೆಚ್ಚಾಗಿ ಮಾಡಿದ್ದು, ಈ ದಾಳಿಯ ಹಿಂದಿನ ಉದ್ದೇಶವೇನು ಎಂಬ ಪ್ರಶ್ನೆಯ ಮೂಲಕ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಇವರಿಗಾಗಿ ನಾವು ನೆನ್ನೆಯಷ್ಟೆ ತೆರಿಗೆ ಪಾವತಿ ಮಾಡಿದ್ದೇವೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಸಾರ್ವಜನಿಕರಿಗೆ ಪ್ರಯಾಣ ದರ ಕಡಿಮೆ ಮಾಡಿದ್ದರಿಂದ ರಿಕ್ಷಾ ಓಡಿಸುವ ಮುಸ್ಲಿಮರು ಸರ್ಕಾರಿ ಸಾರಿಗೆ ವಾಹನಗಳ ಮೇಲೆ ಕಲ್ಲೂ ತೂರಾಟ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್: 

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಮುಸ್ಲಿಮರು ಸಾರಿಗೆ ಬಸ್ಸುಗಳ ಮೇಲೆ ಕಲ್ಲು ತೂರಾಟ ನಡೆಸಿ ಜಖಂ ಮಾಡುತ್ತಿರುವ ವಿಡಿಯೋದ ಕೀ ಪ್ರೇಮ್‌ಗಳನ್ನು ಗೂಗಲ್ ರಿವರ್ಸ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಟಿವಿ9 ಗುಜರಾತಿ ಮಾಡಿದ ವರದಿ ಲಭ್ಯವಾಗಿದೆ. ಈ ವರದಿಯ ಪ್ರಕಾರ 2019 ಜುಲೈ 5 ರಂದು ಸೂರತ್‌ನಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದು ಎರಡು ಸಾರ್ವಜನಿಕ ಸಾರಿಗೆ ಬಸ್ಸುಗಳ ಮೇಲೆ ದಾಳೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2019 ರಲ್ಲಿ ಗುಜರಾತ್‌ನ ಸೂರತ್‌ನಲ್ಲಿ ಸಂಭವಿಸಿದ ಗುಂಪು ಹಿಂಸಾಚಾರದ ಘಟನೆಯನ್ನು ತಿರುಚಿ ಹರ್ಯಾಣದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಹಿಂದೂ ಮುಸ್ಲಿಂ ಎಂಬ ಕೋಮು ಸಂಘರ್ಷದ ಹಿನ್ನಲೆಯಲ್ಲಿ ಸುಳ್ಳು ಮತ್ತು ತಪ್ಪಾಗಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ರಾಹುಲ್ ಗಾಂಧಿ ಅಶ್ಲೀಲ ಚಿತ್ರ ನೋಡುತ್ತಿರುವಂತೆ ಎಡಿಟ್ ಮಾಡಿದ ಫೋಟೊ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights