ಫ್ಯಾಕ್ಟ್‌ಚೆಕ್ : ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಗೃಹ ಸಚಿವ ಅಮಿತ್ ಶಾ ಅಗೌರವ ತೋರಿದ್ದು ನಿಜವೇ?
ಸುಪ್ರಿಂ ಕೋರ್ಟ್‌ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ 76ನೇ ಸ್ವತಂತ್ರೋತ್ಸವದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅಗೌರವ ತೋರಿದ್ದಾರೆ ಎಂದು ಪ್ರತಿಪಾದಿಸಿ ಪೋಸ್ಟ್‌ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ರವರು 76ನೇ ಸ್ವತಂತ್ರೋತ್ಸವದಲ್ಲಿ ಭಾಗವಹಿಸಲು ವೇದಿಕೆ ಮೇಲೆ ಬಂದು ಅಮಿತ್ ಶಾ ಅವರಿಗೆ ನಮಸ್ಕರಿಸುವಾಗ ಅದಕ್ಕೆ ಪ್ರತಿ ನಮಸ್ಕಾರ ಮಾಡದೆ ಅಮಿತ್ ಶಾ ಅಗೌರವ ತೋರಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಫೋಟೊದ ವಾಸ್ತವನ್ನು ತಿಳಿದುಕೊಳ್ಳಲು ಟ್ವಿಟರ್‌ನಲ್ಲಿ ಸರ್ಚ್ ಮಾಡಿದಾಗ, ANI ಟ್ವಿಟರ್ ಅಕೌಂಟ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಲಭ್ಯವಾಗಿದೆ.
#WATCH | CJI DY Chandrachud and Union Home Minister Amit Shah greet each other at Red Fort during Independence Day celebrations pic.twitter.com/3EhYKb9GXC
— ANI (@ANI) August 15, 2023
ಸಿಜೆಐ ಡಿ.ವೈ. ಚಂದ್ರಚೂಡ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪರಸ್ಪರ ಶುಭಾಶಯ ಕೋರಿದರು ಎಂಬ ಶೀರ್ಷಿಕೆಯೊಂದಿಗೆ ANI ವಿಡಿಯೋವನ್ನು ಹಂಚಿಕೊಂಡಿದೆ.
ANI ಹಂಚಿಕೊಂಡಿರುವ ವಿಡಿಯೋದಲ್ಲಿ ಸಿಜೆಐ ಡಿವೈ ಚಂದ್ರಚೂಡ್ ಕಾರ್ಯಕ್ರಮದ ವೇದಿಕೆಯ ಮೇಲೆ ಬಂದಾಗ ಗೃಹ ಸಚಿವ ಅಮಿತ್ ಶಾ ಸಜೆಐ ಅವರಿಗೆ ಕೈ ಮುಗಿದು ಸ್ವಾಗತಿಸುವುದನ್ನು ಕಾಣಬಹುದು. ಅದೇ ಸಂದರ್ಭದಲ್ಲಿ ಅಮಿತ್ ಶಾ ಅವರ ಪತ್ನಿ ಸೋನಾಲ್ ಶಾಗೆ ನಮಸ್ಕರಿಸುವಾಗ ಕ್ಲಿಕ್ಕಿಸಿದ ಫೋಟೊವನ್ನು ತಪ್ಪು ಮಾಹಿತಿಯೋಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.
ಇತ್ತೀಚೆಗೆ, ಸುಪ್ರಿಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೇಂದ್ರ ಸರ್ಕಾರದ ವಿರುದ್ದ ಜನರು ಬೀದಿಗಿಳಿಯಬೇಕು ನಿಮ್ಮ ಬೆಂಬಲಕ್ಕೆ ನಾನು ನಿಮ್ಮೊಂದಿಗೆ ಇದ್ದೇನೆ ಎಂದು ಹೇಳಿದ್ದಾರೆ ಎಂಬ ಫೇಕ್ ಪೋಸ್ಟ್ ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿತ್ತು. ಅದನ್ನು ಏನ್‌ಸುದ್ದಿ.ಕಾಂ ಫ್ಯಾಕ್ಟ್‌ಚೆಕ್ ಮೂಲಕ ವೈರಲ್ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ಸುಳ್ಳು ಎಂದು ಫ್ಯಾಕ್ಟ್‌ಚೆಕ್ ಮಾಡಿತ್ತು.

ಒಟ್ಟಾರೆಯಾಗಿ ಹೇಳುವುದಾದರೆ, ದಿಲ್ಲಿಯ ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಸಿಜೆಐ ಡಿವೈ ಚಂದ್ರಚೂಡ್ ಅವರಿಗೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನಮಸ್ಕರಿಸದೆ ಅಗೌರವ ತೋರಿದ್ದಾರೆ ಎಂದು ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಫೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ :ಕೇಂದ್ರ ಸರ್ಕಾರದ ವಿರುದ್ದ ಬೀದಿಗಿಳಿಯಿರಿ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಹೇಳಿಲ್ಲ

