ಫ್ಯಾಕ್ಟ್‌ಚೆಕ್ : ಅವಕಾಶ ಸಿಕ್ಕರೆ ರಾಹುಲ್ ಗಾಂಧಿ ಉತ್ತಮ ಪ್ರಧಾನಿ ಆಗುತ್ತಾರೆ ಎಂದು ಬಿಜೆಪಿ ನಾಯಕಿ ಹೇಳಿದ್ದು ನಿಜವೇ?

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕಿ ಉಮಾಭಾರತಿ ಹೇಳಿದ್ದಾರೆ ಎನ್ನಲಾದ ಇನ್ಫೋಗ್ರಾಫಿಕ್‌ವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಈ ಪೋಸ್ಟರ್‌ನಲ್ಲಿ ಉಮಾಭಾರತಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿರುವುದನ್ನು ಕಾಣಬಹುದು. ಈ  ಪೋಸ್ಟರ್‌ನಲ್ಲಿರುವ ಹೇಳಿಕೆಯ ಪ್ರಕಾರ – “ರಾಹುಲ್ ಗಾಂಧಿ ಅವರಿಗೆ ಅವಕಾಶ ನೀಡಿದರೆ ಉತ್ತಮ ಪ್ರಧಾನಿಯಾಗುತ್ತಾರೆ – ಉಮಾಭಾರತಿ, ಬಿಜೆಪಿ”ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಕರೀನಾ ಕಪೂರ್ ಖಾನ್ (@kareena_kpn) ಎಂಬ ಟ್ವಿಟರ್ ಹ್ಯಾಂಡಲ್‌ನಿಂದ ಹಂಚಿಕೊಂಡ ಈ ಪೋಸ್ಟ್‌ನಲ್ಲಿ – “ಈಗ ಬಿಜೆಪಿಗರಿಗೂ ಅರ್ಥವಾಗಿದೆ, ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಎಂದು”  ಬರೆಯಲಾಗಿದೆ. ಈ ಪೋಸ್ಟ್‌ಗೆ  5 ಸಾವಿರಕ್ಕೂ ಹೆಚ್ಚು ಲೈಕ್‌ಗಳು ಮತ್ತು 1200 ಕ್ಕೂ ಹೆಚ್ಚು ರೀಟ್ವೀಟ್‌ಗಳು ಬಂದಿವೆ.ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ,  ಉಮಾಭಾರತಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ಪ್ರಕಟಿಸಿದ ಯಾವುದೇ ಸುದ್ದಿಗಳು ಲಭ್ಯವಾಗಿಲ್ಲ.

ಅದೇ ಸಮಯದಲ್ಲಿ, ಉಮಾಭಾರತಿ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಅವರ ಸಾಮಾಜಿಕ ಮಾಧ್ಯಮ ಪ್ರೊಫೈಲ್ ಅನ್ನು ಪರಿಶೀಲಿಸಲಾಗಿದ್ದು, ಅಲ್ಲಿಯೂ ಈಚೆಗೆ ಉಮಾಭಾರತಿ ನೀಡಿದ ಯಾವುದೇ ಹೇಳಿಕೆ ಕಂಡುಬಂದಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ರಾಹುಲ್ ಗಾಂಧಿಗೆ ಅವಕಾಶ ನೀಡಿದರೆ ಉತ್ತಮ ಪ್ರಧಾನಿ ಆಗುತ್ತಾರೆ ಎಂದು ಬಿಜೆಪಿ ನಾಯಕಿ ಉಮಾಭಾರತಿ ಅವರು ಯಾವುದೇ ಹೇಳಿಕೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಉಮಾಭಾರತಿ ಹೇಳಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: DRFAC

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಗೃಹ ಸಚಿವ ಅಮಿತ್ ಶಾ ಅಗೌರವ ತೋರಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights