ಫ್ಯಾಕ್ಟ್‌ಚೆಕ್ : ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪ್ರಧಾನಿ ಮೋದಿಯ ಆಡಳಿತವನ್ನು ಹೊಗಳಿದ್ದು ನಿಜವೇ?

ಮಾಜಿ ರಾಷ್ಟ್ರಪತಿ, ಶ್ರೀಮತಿ ಪ್ರತಿಭಾ ಪಾಟೀಲ್ ಅವರು ಪ್ರಧಾನಿ ಮೋದಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ವೊಂದು ವೈರಲ್ ಆಗುತ್ತಿದೆ.

ನಾನು ಕಾಂಗ್ರೆಸ್ ಪಕ್ಷದವಳಾಗಿದ್ದರೂ, ಇಂದು ಭಾರತದ ಸಮಾಜ ಸೇವಕನಾಗಿ, ಭಾರತವನ್ನು ಉತ್ತಮ ರಾಷ್ಟ್ರವನ್ನಾಗಿ ಮಾಡುವ ಏಕೈಕ ವ್ಯಕ್ತಿ ನರೇಂದ್ರ ಮೋದಿ ಎಂದು ನಾನು ಭಾರತೀಯ ಜನರಿಗೆ ಹೇಳಲು ಬಯಸುತ್ತೇನೆ. ಭಾರತದ ನಾಗರಿಕರಿಗೆ ಹೊಸ ದಿಕ್ಕನ್ನು ಒದಗಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಮೋದಿ ಜೀ ಭಾರತ ದೇಶಕ್ಕೆ ಹೊಸ ದಿಕ್ಕನ್ನು ನೀಡಿದ್ದಾರೆ, ನಾನು ದೇಶಕ್ಕೆ ರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದೇನೆ. ಆದರೆ ಪ್ರಧಾನಿ ಮೋದಿಯಂತಹ ನಾಯಕನನ್ನು ನಾನು ನೋಡಿಲ್ಲ ಎಂದು ಪ್ರತಿಭಾ ಪಾಟೀಲ್ ಹೇಳಿದ್ದಾರೆ ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಈ ರೀತಿಯ ಹೇಳಿಕೆ ನೀಡಿದ್ದಾರೆಯೇ ಎಂದು ಪರಿಶೀಲಿಸಲು ಸರ್ಚ್ ಮಾಡಿದಾಗ, ಪ್ರತಿಭಾ ಪಟೇಲ್ ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ತಿಳಿದುಬಂದಿದೆ. ಒಂದು ವೇಳೆ ಪ್ರತಿಭಾ ಪಾಟೀಲ್ ಅವರು, ಪೋಸ್ಟ್‌ನಲ್ಲಿ ಉಲ್ಲೇಖಿಸಿರುವಂತೆ ನರೇಂದ್ರ ಮೋದಿ ಅವರನ್ನು ಹೊಗಳಿದ್ದರೆ, ಹಲವಾರು ಸುದ್ದಿ ವೆಬ್‌ಸೈಟ್‌ಗಳು ಆ ಮಾಹಿತಿಯನ್ನು ವರದಿ ಮಾಡಿ ಲೇಖನಗಳನ್ನು ಪ್ರಕಟಿಸಿದವು. ಪೋಸ್ಟ್‌ನಲ್ಲಿ ಪ್ರತಿಭಾ ಪಾಟೀಲ್ ಅವರ ಹೇಳಿಕೆಗಳನ್ನು ವರದಿ ಮಾಡುವ ಯಾವುದೇ ಸುದ್ದಿ ಲೇಖನವನ್ನು ವರದಿ ಮಾಡಿಲ್ಲ.

ಪೋಸ್ಟ್‌ನಲ್ಲಿ ಹಂಚಿಕೊಂಡಿರುವ ಫೋಟೋ 5ವರ್ಷಗಳಿಂದಲೂ (2018)  ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ‘ದಿ ಕ್ವಿಂಟ್’ ಸುದ್ದಿ ವೆಬ್‌ಸೈಟ್ 2018 ರಲ್ಲಿ ಈ ಸಂದೇಶದ ಬಗ್ಗೆ ಸ್ಪಷ್ಟೀಕರಣಕ್ಕಾಗಿ ಪ್ರತಿಭಾ ಪಾಟೀಲ್ ಅವರ ಕಚೇರಿಯನ್ನು ಸಂಪರ್ಕಿಸಿತ್ತು. ‘ದಿ ಕ್ವಿಂಟ್’ ಜೊತೆ ಮಾತನಾಡಿದ ಪ್ರತಿಭಾ ಪಾಟೀಲ್ ಅವರ ಕಚೇರಿ ಮೂಲಗಳು, ” ಈ ಸುದ್ದಿ ಸಂಪೂರ್ಣ ಸುಳ್ಳು ಎಂದು ಹೇಳಿತ್ತು. ಇದು ಈ ಹಿಂದೆಯೂ ವೈರಲ್ ಆಗಿದ್ದ ಸುಳ್ಳು ಸುದ್ದಿ. ಪ್ರತಿಭಾ ಪಾಟೀಲ್ ಅವರ ಕಚೇರಿ ನೀಡಿರುವ ಸ್ಪಷ್ಟೀಕರಣವನ್ನು ‘ದಿ ಕ್ವಿಂಟ್’ ಪ್ರಕಟಿಸಿದ ಫ್ಯಾಕ್ಟ್‌ಚೆಕ್ ಸ್ಟೋರಿಯಲ್ಲಿ ಕಾಣಬಹುದು.

ಒಟ್ಟಾರೆಯಾಗಿ ಹೇಳುವುದಾದರೆ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ನರೇಂದ್ರ ಮೋದಿಯನ್ನು ಹೊಗಳಿ ಹೇಳಿಕೆ ನೀದಿದ್ದಾರೆ ಎಂದು ಸುಳ್ಳು ಪೋಸ್ಟ್‌ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಅಯೋಧ್ಯ ರಾಮ ಮಂದಿರದ ಒಳಭಾಗದ ದೃಶ್ಯಗಳು ಎಂದು ಸಂಬಂಧವಿಲ್ಲ ವಿಡಿಯೋ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights