ಫ್ಯಾಕ್ಟ್‌ಚೆಕ್ : ಪ್ರಧಾನಿ ಮೋದಿಯನ್ನು ಟೀಕಿಸಿ RBI ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿಕೆ ನೀಡಿದ್ದಾರೆಯೇ?

RBIನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಪ್ರಧಾನಿ ಮೋದಿಯವರನ್ನು ಟೀಕಿಸಿ ಹೇಳಿಕೆ ನೀಡಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಮೋದಿ ತಮ್ಮ ನಾಲ್ಕು ವರ್ಷಗಳ ಅಧಿಕಾರಾವಧಿಯಲ್ಲಿ ಭಾರತವನ್ನು 40 ವರ್ಷಗಳಷ್ಟು ಹಿನ್ನಡೆ ಮಾಡಿದ್ದಾರೆ ಎಂದು ರಾಜನ್ ಪ್ರತಿಪಾದಿಸಿ ಮತ್ತು ಮೋದಿ ಒಬ್ಬ ಜಾತಿವಾದಿ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಇನ್ನು ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ಹೇಳಿದ್ದಾರೆ ಎಂದು ಮತ್ತೊಂದು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. “ಮೋದಿಯರು ಎಂದಾದರೂ ಚಹಾ ಮಾರಿದ್ದಾರೋ ಇಲ್ಲವೋ ನನಗೆ ಗೊತ್ತಿಲ್ಲ, ಆದರೆ ಈ ದೇಶವನ್ನು ಮಾರಾಟ ಮಾಡುತ್ತಿರುವುದಂತೂ ಸತ್ಯ” ಎಂಬ ಹೇಳಿಕೆಯನ್ನು ರಘುರಾಮ್ ರಾಜನ್ ಹೇಳಿದ್ದಾರೆ ಎಂದು ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ RBIನ ಮಾಜಿ ಗವರ್ನರ್ ರಘುರಾಮ್ ರಾಜನ್ ಪ್ರಧಾನಿ ಮೋದಿ ಕುರಿತು ಈ ರೀತಿ ಹೇಳಿಕೆ ನೀಡಿದ್ದಾರೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆಯಂತೆ RBI ನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಪ್ರಧಾನಿ ಮೋದಿ ಕುರಿತಾದ ಹೇಳಿಕೆಯನ್ನು ಪರಿಶೀಲಿಸಿದಾಗ, ರಘುರಾಮ್ ರಾಜನ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ ಹಲವು ಸಂದರ್ಭಗಳಿವೆಯಾದರೂ, ವೈರಲ್ ಪೋಸ್ಟ್‌ನಲ್ಲಿ ನಿರ್ದಿಷ್ಟವಾಗಿ ಮೋದಿಯನ್ನು ಗುರಿಯಾಗಿಸಿಕೊಂಡು ರಾಜನ್ ಈ ಟೀಕೆಗಳನ್ನು ಮಾಡಿದ ಯಾವುದೇ ದಾಖಲೆ ವರದಿಗಳು ಲಭ್ಯವಾಗಿಲ್ಲ

ಈ ಹಿಂದೆ ಮೋದಿಯವರ ಕೆಲವು ಆರ್ಥಿಕ ನೀತಿಗಳನ್ನು ಟೀಕಿಸುವ ಹೇಳಿಕೆಗಳು ದಾಖಲಾಗಿದೆ. ಅವು ರಚನಾತ್ಮಕ ಟೀಕೆಗಳಾಗಿದ್ದು , ಹಿಂದಿನ ಆಡಳಿತದಲ್ಲಿ ಕಳೆದ 70 ವರ್ಷಗಳಲ್ಲಿ ದೇಶವು ಮಾಡಿದ ಹಲವಾರು ಸಾಧನೆಗಲಾಗಿವೆ ಎಂದು ಹೇಳಿದ್ದರು.

2019 ರಲ್ಲಿ, ರಘುರಾಮ್ ರಾಜನ್ ಅವರು ಕೇಂದ್ರೀಕೃತ ನಿರ್ಧಾರ ಮತ್ತು ಯೋಜನೆಗಾಗಿ ಮೋದಿ ಸರ್ಕಾರದ ವಿರುದ್ಧ ತಮ್ಮ ಟೀಕೆಗಳನ್ನು ವ್ಯಕ್ತಪಡಿಸಿದರು. ಇತ್ತೀಚೆಗಷ್ಟೇ, ದೊಡ್ಡ ಪ್ರಮಾಣದ ಎಲೆಕ್ಟ್ರಾನಿಕ್ಸ್ ತಯಾರಿಕೆಗಾಗಿ ಮೋದಿ ಸರ್ಕಾರದ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಸ್ಕೀಮ್ (PLI) ಗೆ ರಾಜನ್ ತಮ್ಮ ಅಸಮ್ಮತಿಯನ್ನು ವ್ಯಕ್ತಪಡಿಸಿದ್ದಾರೆ, ನಿರ್ದಿಷ್ಟವಾಗಿ ಮೊಬೈಲ್ ಉತ್ಪಾದನೆಗೆ ಸಂಬಂಧಿಸಿದ ಕಳವಳಗಳನ್ನು ಎತ್ತಿ ತೋರಿಸಿದ್ದಾರೆ. ಲಿಂಕ್ಡ್‌ಇನ್‌ನಲ್ಲಿ ಪ್ರಕಟವಾದ ಸಂಶೋಧನಾ ಟಿಪ್ಪಣಿಗಳ ದೃಷ್ಟಿಕೋನಗಳನ್ನು ರಾಜನ್ ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಮೋದಿ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ರಘುರಾಮ್ ರಾಜನ್ ರಚನಾತ್ಮಕ ಟೀಕೆಗಳನ್ನು ಮಾಡಿದ ಉದಾಹರಣೆಗಳಿದ್ದರೂ, ವೈರಲ್ ಪೋಸ್ಟ್‌ಗಳಲ್ಲಿ ಹಂಚಿಕೊಂಡಿರುವ ಹೇಳಿಕೆಗಳು ರಘುರಾಮ್ ಅವರದ್ದಲ್ಲ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸೋಶಿಯಲ್ ಮೀಡಿಯಾ ಬಳಕೆದಾರರು RBIನ ಮಾಜಿ ಗವರ್ನರ್ ಅವರ ಹೇಳಿಕೆ ಎಂದು ಹಂಚಿಕೊಂಡ ಪೋಸ್ಟ್‌ ತಪ್ಪಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪ್ರಧಾನಿ ಮೋದಿಯ ಆಡಳಿತವನ್ನು ಹೊಗಳಿದ್ದು ನಿಜವೇ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights