ಫ್ಯಾಕ್ಟ್‌ಚೆಕ್ : ಹಿಂದೂ ಯುವತಿಯನ್ನು ಕೊಲೆ ಮಾಡಿದ ಮುಸ್ಲಿಂ ಜಿಹಾದಿಗಳು ಎಂದು ಸುಳ್ಳು ಪೋಸ್ಟ್ ಹಂಚಿಕೆ
ಉತ್ತರ ಪ್ರದೇಶದಲ್ಲಿ ಹುಡುಗಿಯ ದುಪ್ಪಟ ಹಿಡಿದು ಬೈಕಿನಲ್ಲಿ ಎಳೆದುಕೊಂಡು ಹೋಗಿ ಹುಡುಗಿಯ ಸಾವಿಗೆ ಕಾರಣರಾದ ಮೂವರು ಇಸ್ಲಾಂ ಜಿಹಾದಿಗಳಿಗೆ ಯೋಗಿ ಸರ್ಕಾರ ನೀಡಿರುವ ಬಹುಮಾನ, ಎಂದು ಹಲ್ಲೆಗೊಳಗಾದ ಆರೋಪಿಗಳು ತೆವಳುತ್ತಿರುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.
ಮುಖ್ಯವಾಗಿ BJP ಬೆಂಬಲಿತ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಇದೇ ರೀತಿಯ ಪೋಸ್ಟ್‌ಅನ್ನು ಹೆಚ್ಚಾಗಿ ಹಂಚಿಕೊಂಡಿರುವುದು ಕಂಡುಬಂದಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.
ಫ್ಯಾಕ್ಟ್‌ಚೆಕ್ :
ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಈ ಘಟನೆ ನಡೆದಿರುವುದು ರಾಜಸ್ಥಾನದಲ್ಲಿ ಎಂದು ಹಲವು ಮಾಧ್ಯಮಗಳು ವರದಿ ಮಾಡಿವೆ. ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತೇಜ್ವೀರ್, ಯುವರಾಜ್ ಮತ್ತು ಬಂಟಿ ಕುಶಾಲ್ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಆದರೆ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡ ಬಲಪಂಥೀಯ ಬೆಂಬಲಿಗರು, ಈ ಘಟನೆ ಉತ್ತರ ಪ್ರದೇಶದಲ್ಲಿ ಎಂದು ಘಟನೆಯಲ್ಲಿ ಭಾಗಿಯಾದ ಆರೋಪಿಗಳು ಮುಸ್ಲಿಮರು ಇವರ ಹೆಸರುಗಳನ್ನು ಅರ್ಬಾಜ್, ಫೈಸಲ್ ಮತ್ತು ಶಹಬಾಜ್ ಎಂದು ತಪ್ಪಾಗಿ ತಿರುಚಿ ಹಂಚಿಕೊಂಡಿದ್ದಾರೆ.
ಇದನ್ನು ಬೂಮ್ ಲೈವ್ ನವರು ಫ್ಯಾಕ್ಟ್‌ಚೆಕ್ ವರದಿ ಮಾಡಿದ್ದಾರೆ. ಆಲ್ಟ್ ನ್ಯೂಸ್ ವರದಿಗಾರ ಮೊಹಮ್ಮದ್ ಜುಬೈರ್ ತಮ್ಮ ಟ್ವಿಟರ್(X) ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮತ್ತು ರಾಜಸ್ಥಾನದ ಜೈಪುರ್‌ನ IPS ಅಧಿಕಾರಿ ರಾಹುಲ್ ಕುಮಾರ್ ಸಹ ಕೊಲೆ ಪ್ರಕರಣಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ರಾಜಸ್ಥಾನದಲ್ಲಿ ನಡೆದ ಹತ್ಯೆಯ ಘಟನೆಯನ್ನು, ಉತ್ತರ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿದ ಆರೋಪಿಗಳು ಮುಸ್ಲಿಮರು ಎಂದು, ಅವರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರಿಯಾದ ಟ್ರೀಟ್‌ಮೆಂಟ್ ನೀಡಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.
ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್ ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ
ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಕೆನಡಾದಲ್ಲಿ RSS ಅನ್ನು ನಿಷೇಧಿಸಲಾಗಿದೆಯೇ?