ಫ್ಯಾಕ್ಟ್‌ಚೆಕ್ : ಪಾಕಿಸ್ತಾನದ ಕ್ರಿಕೆಟ್ ಆಟಗಾರರು ಊಟಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂಬುದು ಸುಳ್ಳು

2023 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರು ಊಟಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

https://twitter.com/desimojito/status/1707075900896891303?s=20

ಸೆಪ್ಟೆಂಬರ್ 27 ರಂದು, ಪಾಕಿಸ್ತಾನ ಕ್ರಿಕೆಟ್ ತಂಡವು 2023 ಕ್ರಿಕೆಟ್ ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಆಗಮಿಸಿದೆ. ಪಾಕ್ ಕ್ರಿಕೆಟ್ ತಂಡವು ಏಳು ವರ್ಷಗಳ ನಂತರ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದೆ. ಆದರೆ ಪಾಕ್ ಆಟಗಾರರು ಹೋಟೆಲ್‌ನಲ್ಲಿನ ಊಟಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಸಾನಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ವಿಶ್ವಕಪ್ ಟೂರ್ನಿಗೆ ಆಗಮಿಸಿರುವ ಪಾಕಿಸ್ತಾನ ಕ್ರಿಕೆಟ್‌ ತಂಡದ ಆಟಗಾರರು ಊಟಕ್ಕಾಗಿ ಕಿತ್ತಾಟ ನಡೆಸಿದ್ದಾರೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಪೋಸ್ಟ್‌ಅನ್ನು ಪರಿಶೀಲಿಸಿದಾಗ, ಅಕ್ಟೋಬರ್ 2020 ರಲ್ಲಿ ಇದೇ ವಿಡಿಯೋನ್ನು X ನ ಟ್ವೀಟ್‌ನಲ್ಲಿ ವಿಡಿಯೋ  ಪೋಸ್ಟ್ ಮಾಡಲಾಗಿದೆ.

“Lahore bar election gathering zindabad.. lets slap each other to get first dibs on the meat – lets keep our facemasks off whilst we push and shove and lets show the next generation of lawyers what lies ahead for their time..” ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ.

“ಕರೋನಾ ಮುಕ್ತ, ಲಾಹೋರ್ ಬಾರ್ ಚುನಾವಣೆಗಳು.” ಎಂಬ ಶೀರ್ಷಿಕೆಯೊಂದಿಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗಿದೆ. ಅಂದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಹಳೆಯದಾಗಿದ್ದು, ವೈರಲ್ ವಿಡಿಯೋಗೂ 2023ರ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಕಿಕೆಟ್ ತಂಡಕ್ಕೂ ಸಂಬಂಧವಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, 2020 ರ ಸಂಬಂಧವಿಲ್ಲದ ವಿಡಿಯೋವನ್ನು ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನದ ಕ್ರಿಕೆಟ್ ತಂಡಕ್ಕೆ ತಳುಕು ಹಾಕಿ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ನ್ಯೂಸ್ ಮೀಟರ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ರಾಜೀವ್ ಮತ್ತು ಸೋನಿಯಾ ಗಾಂಧಿ ಮದುವೆಯ ಬಗ್ಗೆ ಸುಳ್ಳು ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights