ಫ್ಯಾಕ್ಟ್‌ಚೆಕ್ : ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ ವ್ಯಕ್ತಿಯನ್ನು ಮುಸ್ಲಿಮರು ಥಳಿಸಿದ್ದು ನಿಜವೇ?

ಮುಸ್ಲಿಮರ ಬಾಹುಳ್ಯ ಹೆಚ್ಚಿರುವ ಕ್ಷೇತ್ರದಲ್ಲಿ ಭಾರತ್ ಮಾತಾ ಕಿ ಜೈ ಘೋಷಣೆ ಕೂಗಿದರೆ ಪೆಟ್ಟು ತಿಂದು ಸಾಯಬೇಕಾಗಬಹುದು. ಹೇಗಿದೆ ನಮ್ಮ ದುರಾವಸ್ಥೆ ಎಂಬ ಹೇಳಿಕೆಯೊಂದಿಗೆ ಪ್ರಸಾರವಾಗುತ್ತಿದೆ.

‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆ ಕೂಗಿದ್ದಕ್ಕಾಗಿ ಮುಸ್ಲಿಂ ಯುವಕರು ವೃದ್ಧನೊಬ್ಬನನ್ನು ಥಳಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ಪ್ರತಿಪಾದಿಸಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಯುವಕರ ಗುಂಪು ವೃದ್ದನೊಬ್ಬನನ್ನು ಸಾರ್ವಜನಿಕವಾಗಿ ಥಳಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ವೈರಲ್ ವಿಡಿಯೋ 2019ರಿಂದ ಇದೇ ಪ್ರತಿಪಾದನೆಯೊಂದಿಗೆ ಪ್ರಸಾರವಾಗುತ್ತಿರುವುದನ್ನು ಕಾಣಬಹುದು.

2019 ರ ಅಕ್ಟೋಬರ್‌ನಲ್ಲಿ X ನಲ್ಲಿ ಪೋಸ್ಟ್‌ ಮಾಡಿದ ವಿಡಿಯೋ ಲಭ್ಯವಾಗಿದೆ. ಇದೇ ಬಳಕೆದಾರರು ಅದೇ ಘಟನೆಗೆ ಸಂಬಂಧಿಸಿದ ಮತ್ತೊಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ ಮತ್ತು ಇದು ರಾಜಸ್ಥಾನದ ಭಿಲ್ವಾರದಲ್ಲಿ ನಡೆದಿದೆ ಎಂದು ಹೇಳಿಕೊಂಡಿದ್ದಾರೆ.

ವಿಡಿಯೋದಲ್ಲಿ ಕಾಣುವ ವೃದ್ಧನಿಗೆ ಹಣದ ವಿಚಾರದಲ್ಲಿ ಜನರನ್ನು ನಿಂದಿಸಿದ್ದಕ್ಕಾಗಿ ಥಳಿಸಲಾಗಿದೆಯೇ ಹೊರತು ‘ಭಾರತ್ ಮಾತಾ ಕಿ ಜೈ’ ಎಂದು ಕೂಗಿದ್ದಕ್ಕಾಗಿ ಅಲ್ಲ ಎಂದು ಭಿಲ್ವಾರದ ಕೊತ್ವಾಲಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಈತ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವೃದ್ದನ ಮಗ ತನ್ನ ವೃದ್ದ ತಂದೆಯ ಮೇಲೆ ಹಲ್ಲೆ ಮಾಡಿದವರ ವಿರುದ್ದ ದೂರು ನೀಡಿದ್ದು ಅವರ ವಿರುದ್ದ ಪ್ರಕರಣ ದಾಖಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವೃದ್ದನು ಬುದ್ಧಿಮಾಂದ್ಯ ಆತನಿಗೆ ಸೂಕ್ತ ಚಿಇತ್ಸೆ ನೀಡುವಂತೆ ಆತನ ಮಗನಿಗೆ ಪೊಲೀಸರು ಸೂಚನೆ ನೀಡಿದ್ದರು ಎಂದು ಆಲ್ಟ್‌ನ್ಯೂಸ್ ವರದಿ ಮಾಡಿದೆ.

ಐವರು ಆರೋಪಿಗಳನ್ನು ಮನೋಜ್ ಅಲಿಯಾಸ್ ಮುಲ್ಲಾ ಸಿಂಧಿ (39), ಹೇಮಂತ್ ರಾಮಚಂದ್ರ ನಥಾನಿ (45), ಭಗವಾನ್ ದಾಸ್ ಸಿಂಧಿ (37), ಮಂಜೂರ್ ಶೇಖ್ (31), ಮತ್ತು ಇರ್ಫಾನ್ ಶೇಖ್ (34) ಎಂದು ಗುರುತಿಸಲಾಗಿದೆ. ಹಾಗಾಗಿ ಈ ಪ್ರಕರಣದಲ್ಲಿ ವೃದ್ದನಿಗೆ ಥಳಿಸಿದವರಲ್ಲಿ ಹಿಂದೂ ಮತ್ತು ಮುಸ್ಲಿಂ ಎರಡೂ ಸಮುದಾಯದವರು ಇರುವುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, 2019ರಲ್ಲಿ ನಡೆದ ಸಬಂಧವಿಲ್ಲ ಘಟನೆಯ ವಿಡಿಯೋವನ್ನು ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆ ಕೂಗಿದ್ದಕ್ಕಾಗಿ ಮುಸ್ಲಿಂ ಯುವಕರು ವೃದ್ಧನೊಬ್ಬನನ್ನು ಥಳಿಸಿದ್ದಾರೆ ಎಂದು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ: ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ರಾಜೀವ್ ಮತ್ತು ಸೋನಿಯಾ ಗಾಂಧಿ ಮದುವೆಯ ಬಗ್ಗೆ ಸುಳ್ಳು ಪೋಸ್ಟ್‌ ಹಂಚಿಕೆ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights