ಫ್ಯಾಕ್ಟ್‌ಚೆಕ್ : ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ಮೋದಿ ಹೇಳುತ್ತಿರುವ ವಿಡಿಯೋ ವೈರಲ್! ವಾಸ್ತವವೇನು?

ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ಪ್ರತಿಪಾದಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.

 

View this post on Instagram

 

A post shared by Tathagat Harshvardhan (@tathagat.inc)

ನವೆಂಬರ್‌ನಲ್ಲಿ ನಡೆಯಲಿರುವ 5 ರಾಜ್ಯಗಳ ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತ ನಿಮ್ಮ ಮಕ್ಕಳ ಹಿತ ಕಾಪಾಡಲು ಕಾಂಗ್ರೆಸ್‌ಗೆ ಮತ ನೀಡಿ ಎಂದು ಸಾರ್ವಜನಿಕರಿಗೆ ಮೋದಿ ಮನವಿ ಮಾಡಿದ್ದಾರೆ ಎಂದು ಪ್ರತಿಪಾದಿಸಿ  ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

ಹಾಗಿದ್ದರೆ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸಲು ವಿಡಿಯೋದ ಕೀ ಫ್ರೇಮ್‌ಗಳನ್ನು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಪ್ರಧಾನಿ ಮೋದಿಯವರ ವಿಡಿಯೋವನ್ನು ಎಡಿಟ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ಹೇಳುತ್ತಿರುವಂತೆ ಎಡಿಟ್ ಮಾಡಲಾದ ವಿಡಿಯೋದ ಮೂಲ ವಿಡಿಯೋವನ್ನು ಸರ್ಚ್ ಮಾಡಿದಾಗ, ಜೂನ್ 27, 2023 ರಂದು ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದ “ಮೇರಾ ಬೂತ್ ಸಬ್ಸೆ ಮಜ್ಬೂತ್” ಎಂಬ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಮಾಡಿದ ಅದೇ ಭಾಷಣವನ್ನು ಕೇಳಬಹುದು.

ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗಳು ನವೆಂಬರ್ 7, 2023 ರಿಂದ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ. ತೆಲಂಗಾಣ ಹೊರತುಪಡಿಸಿ ಉಳಿದ ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನೇರ ಮುಖಾ ಮುಖಿಯಾಗಲಿವೆ. ಈ ಚುನಾವಣಾ ಪ್ರಚಾರದ ವೇಳೆ 5 ರಾಜ್ಯಗಳ ಜನ ಸಾಮಾನ್ಯರಿಗೆ ಕರೆ ನೀಡುತ್ತ, ಗಾಂಧಿ ಕುಟುಂಬದ ಹಿತ ಕಾಯಲು ಬಯಸಿದರೆ ಕಾಂಗ್ರೆಸ್‌ಗೆ ಮತ ನೀಡಿ ಎಂದು ಟೀಕಿಸುವ ಸಂದರ್ಭದ ಹೇಳಿಕೆಯನ್ನು ಎಡಿಟ್ ಮಾಡಿ ನಿಮ್ಮ ಮಕ್ಕಳ ಹಿತಕ್ಕಾಗಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಹೇಳಿದ್ದಾರೆ ಎಂಬಂತೆ ಎಡಿಟ್ ಮಾಡಲಾದ ವಿಡಿಯೋವನ್ನು ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ನಿಮ್ಮ ಮಕ್ಕಳ ಹಿತ ಕಾಯಲು ಬಿಜೆಪಿಗೆ ಮತ ನೀಡಿ ಎಂದು ಕರೆ ನೀಡಿದ ಪ್ರಧಾನಿ ಹೇಳಿಕೆಯನ್ನು ಎಡಿಟ್ ಮಾಡಿ ಕಾಂಗ್ರೆಸ್‌ಗೆ ಮತ ನೀಡಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಎನ್ನುವಂತೆ ತಪ್ಪಾಗಿ ಹಂಚಿಕೊಂಡಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಬೂಮ್

ನಿಮ್ಮ ಸುತ್ತಮುತ್ತ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್ : ಸಂಸದ ತೇಜಸ್ವಿ ಸೂರ್ಯನಿಂದ ಮತ್ತೊಂದು ಸುಳ್ಳು


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights