ಫ್ಯಾಕ್ಟ್‌ಚೆಕ್ : ಕಾಂಗ್ರೆಸ್ ಸರ್ಕಾರವಿರುವ ರಾಜಸ್ಥಾನದಲ್ಲಿ ಪೊಲೀಸರಿಗೆ ರಕ್ಷಣೆ ಇಲ್ಲವೆ? ಪೊಲೀಸರಿಗೆ ಹೊಡೆಯುತ್ತಿರುವುದು ಮುಸ್ಲಿಮರೇ?

ಇದು ರಾಜಸ್ಥಾನದ ಕೋಟಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಜಿಹಾದಿಗಳಿಂದ ನಡೆದ ಘಟನೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ನೋಡಿ ಪೊಲೀಸರೇ ಜಿಹಾದಿಗಳಿಂದ ಪ್ರಾಣಭಿಕ್ಷೆ ಬೇಡುತ್ತಿದ್ದಾರೆ. ಇನ್ನು ಸಾಮಾನ್ಯ ಹಿಂದುಗಳ ಪರಿಸ್ಥಿತಿ ಏನಾಗಬಹುದು. ಈ ದೃಶ್ಯಗಳು ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಕಂಡು ಬಂದರೆ ಆಶ್ಚರ್ಯವಿಲ್ಲ, ಎಂಬ ಹೇಳಿಕೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದೆ.

ವಾಟ್ಸಾಪ್ ಮತ್ತು ಫೇಸ್‌ಬುಕ್‌ಗಳಲ್ಲಿ ಇದೇ ಪ್ರತಿಪಾದನೆಯೊಂದಿಗೆ ಪೋಸ್ಟ್‌ಅನ್ನು ಹಂಚಿಕೊಳ್ಳಲಾಗುತ್ತಿದ್ದು, ಇದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಏನ್‌ಸುದ್ದಿ.ಕಾಂ ಗೆ ಸಂದೇಶಗಳ ಮೂಲಕ ವಿನಂತಿಸಿದ್ದಾರೆ. ಹಾಗಿದ್ದರೆ ರಾಜಸ್ಥಾನಲ್ಲಿ ಈ ಘಟನೆ ನಡೆದಿರುವುದು ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಮುಸ್ಲಿಂಮರು ಪೊಲೀಸರನ್ನೆ ಕೂಡಿ ಹಾಕಿ ಹೊಡೆಯುತ್ತಿದ್ದಾರೆ ಎಂಬ ಪ್ರತಿಪಾದನೆಯಪಂದಿಗೆ ಹಂಚಿಕೊಳ್ಳಲಾದ ವಿಡಿಯೋವನ್ನು ಪರಿಶೀಲಿಸಲು ಕೀ ವರ್ಡ್ ಮೂಲಕ ಸರ್ಚ್ ಮಾಡಿದಾಗ, ಇಂಡಿಯಾ ಟುಡೇ ಮಾಡಿವ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, ಏಪ್ರಿಲ್ 2023ರಲ್ಲಿ ಪಶ್ಚಿಮ ಬಂಗಾಳದ ಕಲಿಯಾಗಂಜ್‌ನಲ್ಲಿ ಅಪ್ರಾಪ್ತ ಬುಡಕಟ್ಟು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ನಂತರದಲ್ಲಿ  ಹಿಂಸಾಚಾರ ಭುಗಿಲೆದ್ದಿದೆ. ಪೊಲೀಸ್ ಸಿಬ್ಬಂದಿ ಬಾಲಕಿಯ ಮೃತ ದೇಹವನ್ನು ಬೀದಿಯಲ್ಲಿ ಎಳೆದುಕೊಂಡು ಹೋಗುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ. ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಈ ಅಮಾನವೀ ಘಟನೆ ನಡೆದಿದ್ದು, ನಂತರ ಸ್ಥಳೀಯರಿಗೆ ಸಂತ್ರಸ್ತೆಯ ಶವ ಪತ್ತೆಯಾಗಿತ್ತು.

ಘಟನಾ ವಿವರ :

ಪೊಲೀಸರ ಪ್ರಕಾರ, ಉತ್ತರ ದಿನಾಜ್‌ಪುರ ಜಿಲ್ಲೆಯ ಗಂಗುವಾ ಗ್ರಾಮದ ನಿವಾಸಿಯಾಗಿದ್ದ ಬಾಲಕಿ ಗುರುವಾರ ಸಂಜೆ ಟ್ಯೂಷನ್‌ಗೆ ಹೋದ ನಂತರ ನಾಪತ್ತೆಯಾಗಿದ್ದಳು. ಸಂಬಂಧಿಕರು ಮತ್ತು ಗ್ರಾಮಸ್ಥರು ವ್ಯಾಪಕ ಹುಡುಕಾಟ ನಡೆಸಿದರೂ ಇಡೀ ರಾತ್ರಿ ಆಕೆಯ ಕುಟುಂಬಕ್ಕೆ ಅವಳನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ನಂತರ ಬಾಲಕಿಗಾಗಿ ಶೋಧ ಕಾರ್ಯ ನಡೆಸಿದಾಗ, ಬಾಲಕಿ ಶವವಾಗಿ ಪತ್ತೆಯಾಗಿತ್ತು.

ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪೊಲೀಸರು ಅಪ್ರಾಪ್ತ ಬುಡಕಟ್ಟು ಬಾಲಕಿಯ ಶವವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದ ಘಟನೆಗೆ ಸಂಬಂಧಿಸಿದಂತೆ, ರಾಯ್‌ಗಂಜ್ ಪಿಡಿ ಎಸ್ಪಿ ಸನಾ ಅಖ್ತರ್ ಬಾಲಕಿಯ ಶವವನ್ನು ಬೀದಿಯಲ್ಲಿ ಎಳೆದಿದ್ದಕ್ಕಾಗಿ ನಾಲ್ವರು ಸಹಾಯಕ ಸಬ್ ಇನ್ಸ್‌ಪೆಕ್ಟರ್‌ಗಳನ್ನು (ಎಎಸ್‌ಐ) ಅಮಾನತುಗೊಳಿಸಿದರು.

ಉದ್ರಿಕ್ತ ಸ್ಥಳೀಯರು ಪೊಲೀಸರೊಂದಿಗೆ ಘರ್ಷಣೆ ನಡೆಸಿದರು, ನಂತರ ಪ್ರದೇಶದಲ್ಲಿ ಭಾರೀ ಪಡೆಗಳನ್ನು ನಿಯೋಜಿಸಲಾಯಿತು. ಸ್ಥಳೀಯರು ರಸ್ತೆ ತಡೆ ನಡೆಸಿ ಟೈರ್ ಸುಟ್ಟು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದ ದೃಶ್ಯಗಳು ಸೆರೆಯಾಗಿದೆ.

ಆರೋಪಿ ಜಾವೇದ್ ಅಖ್ತರ್ ಎಂದು ಸಂತ್ರಸ್ತ ಬಾಲಕಿಗೆ ತಿಳಿದಿತ್ತು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಕಲ್ಕತ್ತಾ ಹೈಕೋರ್ಟ್ ಎಸ್‌ಐಟಿ ರಚನೆಗೆ ನಿರ್ದೇಶನ ನೀಡಿದ್ದು, ಅಗತ್ಯವಿದ್ದಲ್ಲಿ ಎರಡನೇ ಶವಪರೀಕ್ಷೆ ನಡೆಸಲು ಅವರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಇಬ್ಬರನ್ನು ಬಂಧಿಸಲಾಗಿದೆ. ಬೆಂಕಿ ಹಚ್ಚಿದ ಆರೋಪದಲ್ಲಿ 33 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ತೃಣಮೂಲ ಕಾಂಗ್ರೆಸ್ ನಾಯಕ ಕುನಾಲ್ ಘೋಷ್ ಅವರು ಇದೇ ವಿಡಿಯೋವನ್ನು ಏಪ್ರಿಲ್ 26, 2023 ರಂದು ಟ್ವೀಟ್ ಮಾಡಿದ್ದರು.

“ಈ ವೀಡಿಯೋದಲ್ಲಿ, ಉತ್ತರ ದಿನಜ್‌ಪುರದ ಕಲಿಯಗಂಜ್‌ನಲ್ಲಿ ರಾಜ್‌ಬೊಂಗ್ಷಿ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ. ನಂತರ ಪೊಲೀಸರು ಬಾಲಕಿಯ ದೇಹವನ್ನು ಪಶ್ಚಿಮ ಬಂಗಾಳ ಪೊಲೀಸರು ಅಮಾನವೀಯವಾಗಿ ಎಳೆದಾಡುತ್ತಿದ್ದಾರೆ. ಸಾಕ್ಷ್ಯವನ್ನು ತೆಗೆದುಹಾಕುವುದು ಅಥವಾ ದುರ್ಬಲಗೊಳಿಸುವುದು ಮತ್ತು ಅಪರಾಧವನ್ನು ಮುಚ್ಚಿಡುವ ಉದ್ದೇಶದಿಂದ ಇಂತಹ ಘಟನೆಗಳುಸಂಭವಿಸುತ್ತವೆ” ಎಂದು ಮಾಳವಿಯಾ ಟ್ವೀಟ್ ಮಾಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಪಶ್ಚಿಮ ಬಂಗಾಳದಲ್ಲಿ ಅತ್ಯಾಚಾರಕ್ಕೊಳಗಾದ ಅಪ್ರಾಪ್ತ ಬಾಲಕಿಯ ಮೃತ ದೇಹವನ್ನು ಅಮಾನವೀಯವಾಗಿ ರಸ್ತೆಯಲ್ಲಿ ಎಳೆದುಕೊಂಡು ಪೊಲೀಸರ ಕ್ರಮವನ್ನು ಖಂಡಿಸಿ, ಪೊಲೀಸರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದ ಘಟನೆಯನ್ನು ರಾಜಸ್ಥಾನದಲ್ಲಿ ಮುಸ್ಲಿಮರು ಪೊಲೀಸರ ಮೇಲೆ ಹಲ್ಲೆ ನಡಿಸಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು, ಕಾಂಗ್ರೆಸ್ ಮುಸ್ಲಿಮರಿಗೆ ಕುಮಕ್ಕು ನೀಡುತ್ತಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಆಲ್ಟ್‌ನ್ಯೂಸ್

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಡೀಪ್‌ಫೇಕ್ ತಂತ್ರಜ್ಞಾನಕ್ಕೆ ಗುರಿಯಾದ ನಟಿ ರಶ್ಮಿಕಾ ಮಂದಣ್ಣ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights