ಫ್ಯಾಕ್ಟ್‌ಚೆಕ್ : ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟಿರುವ ಚಿತ್ರ ಫೇಕ್ ಅಲ್ಲ

ಐಸಿಸಿ ಏಕದಿನ ವಿಶ್ವಕಪ್ 2023 ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ  ಚಾಂಪಿಯನ್ ಆಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ನಲ್ಲಿ ಭಾರತ ವಿರುದ್ಧ ಬ್ಯಾಟಿಂಗ್-ಬೌಲಿಂಗ್-ಫೀಲ್ಡಿಂಗ್ ಮೂರೂ ವಿಭಾಗಗಳಲ್ಲಿ ಅದ್ಭುತ ಪ್ರದರ್ಶನ ತೋರಿದ ಕಾಂಗರೂ ಪಡೆ ಆರನೇ ಬಾರಿ ಟ್ರೋಫಿ ಗೆದ್ದ ಸಾಧನೆ ಮಾಡಿತು.

ಕ್ರಿಕೆಟ್ | ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಮಾರ್ಷ್‌; ಪರ, ವಿರೋಧ ಚರ್ಚೆ

ವಿಶ್ವಕಪ್‌ 2023 ಗೆದ್ದಿರುವ ಆಸ್ಟ್ರೇಲಿಯಾಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ವಿಶ್ವಕಪ್‌‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾ, ಫೈನಲ್ ಪಂದ್ಯದಲ್ಲಿ ಎಡವಿದೆ. ಆದರೆ  ಟ್ರೋಫಿ ಗೆದ್ದ ಬಳಿಕ ಕೆಲ ಆಸ್ಟ್ರೇಲಿಯಾ ಆಟಗಾರರ ಸಂಭ್ರಮಾಚರಣೆ ಅತಿರೇಕಕ್ಕೇರಿದೆ. ಕೆಲ ಪ್ಲೇಯರ್ಸ್ ಟ್ರೋಫಿ ಜೊತೆ ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ.  ಆಸೀಸ್ ಆಟಗಾರ ಮಿಚೆಲ್ ಮಾರ್ಷ್ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಟ್ರೋಫಿಯ ಮೇಲೆ ಪಾದವನ್ನಿಟ್ಟು ಫೋಟೋ ತೆಗೆಸಿಕೊಂಡಿದ್ದಾರೆ. ಮಿಚೆಲ್ ಮಾರ್ಷ್‌ ನಡೆದುಕೊಂಡ ರೀತಿಯ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಿವೆ.

ಈ ಫೋಟೊ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದು ನಿಜವಾದ ಚಿತ್ರವೇ ಅಥವಾ ನಕಲಿಯೇ ಎಂದು ಪರಿಶೀಲಿಸುವಂತೆ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಏನ್‌ಸುದ್ದಿ.ಕಾಂ ಗೆ ವಿನಂತಿಸಿದ್ದಾರೆ.

ಟ್ರೋಫಿ ಮೇಲೆ ಪಾದಗಳನ್ನಿಟ್ಟ ಮಿಚೆಲ್ :

ಸಾಮಾಜಿಕ ಮಾಧ್ಯಮಗಳಲ್ಲಿ ಸಖತ್ ವೈರಲ್ ಆಗುತ್ತಿರುವ ಚಿತ್ರವನ್ನು ಪರಿಶೀಲಿಸಿದಾಗ, ಮಿಚೆಲ್ ಮಾರ್ಷ್ ಅವರು ಕೈಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು, ವಿಶ್ವಕಪ್ ಟ್ರೋಫಿಯ ಮೇಲೆ ಎರಡೂ ಕಾಲುಗಳನ್ನು ಇಟ್ಟು ಸೋಫಾ ಮೇಲೆ ವಿಶ್ರಾಂತಿ ಮಾಡುವುದನ್ನು ಕಾಣಬಹುದು. ಈ ಫೋಟೋವನ್ನು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ.

https://twitter.com/iam_Tharani/status/1726475565342081525

ಆಸ್ಟ್ರೇಲಿಯಾ ತಂಡದ ಆಟಗಾರ ಮಿಚೆಲ್ ಮಾರ್ಷ್‌ ವಿಶ್ವಕಪ್‌ ಮೇಲೆ ಕಾಲಿಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.

ಮಾರ್ಷ್ ಅವರ ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಮಾಧ್ಯಮದಲ್ಲಿ ಅನೇಕ ಮಂದಿ ಮಾರ್ಷ್ ನಡೆಗೆ ಕಿಡಿ ಕಾರಿದ್ದು, ಟ್ರೋಫಿಗೆ ಈರೀತಿ ‘ಅಗೌರವ’ ತೋರುವುದು ಸರಿಯಲ್ಲ ಎಂದಿದ್ದಾರೆ.

ಈ ಫೋಟೊವನ್ನು ಆಸ್ಟ್ರೇಲಿಯಾ ಆಟಗಾರರೇ ಹಂಚಿಕೊಂಡಿದ್ದರು, ಕೆಲವರು ಈ ಚಿತ್ರ ನಕಲಿ ಇರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಇದನ್ನು ಪರಿಶೀಲಿಸಿದಾಗ, ಇದು ಎಡಿಟೆಡ್ ಚಿತ್ರವಲ್ಲ ನಿಜವಾದ ಚಿತ್ರ ಎಂಬುದು ಸ್ಪಷ್ಟವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಮಿಚೆಲ್ ಮಾರ್ಷ್‌ ವಿಶ್ವಕಪ್‌ ಮೇಲೆ ಕಾಲಿಟ್ಟ ಫೋಟೊ ನಕಲಿ ಅಲ್ಲ ಅಸಲಿ.

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಪೋರ್ನ್ ನಿಯತಕಾಲಿಕೆ ಪ್ಲೇಬಾಯ್‌ಗೆ ನೆಹರು ಸಂದರ್ಶನ ನೀಡಿದ್ದರೆ?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

One thought on “ಫ್ಯಾಕ್ಟ್‌ಚೆಕ್ : ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟಿರುವ ಚಿತ್ರ ಫೇಕ್ ಅಲ್ಲ

  • November 20, 2023 at 6:57 pm
    Permalink

    Michael a nonsense person. It looks very odd.

    Reply

Leave a Reply

Your email address will not be published.

Verified by MonsterInsights