ಫ್ಯಾಕ್ಟ್‌ಚೆಕ್ : ಆಸೀಸ್ ನಾಯಕನನ್ನು ಅಭಿನಂದಿಸದೆ ಮುಖ ತಿರುಗಿಸಿಕೊಂಡು ಹೋದ್ರಾ ಪ್ರಧಾನಿ ಮೋದಿ?

ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಫೈನಲ್‌ನಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ ಜಯಗಳಿಸಿದ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಶ್ವಕಪ್ ಟ್ರೋಫಿಯನ್ನು ಹಸ್ತಾಂತರಿಸುತ್ತಿರುವುದನ್ನು ತೋರಿಸುವ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಭಾರತ ವಿಶ್ವಕಪ್ ಫೈನಲ್‌ನಲ್ಲಿ ಸೋತಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಆಸೀಸ್ ನಾಯಕನನ್ನು ಅಭಿನಂದಿಸದೆ, ವೇದಿಕೆಯಿಂದ ಮುಖ ತಿರುಗಿಸಿಕೊಂಡು ಹೋಗಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಶೇರ್ ಮಾಡುವ ಮೂಲಕ “ಇದು ಉತ್ತಮ ಕ್ರೀಡಾ ಮನೋಭಾವವೂ ಅಲ್ಲ, ಉತ್ತಮ ಆತಿಥ್ಯವೂ ಅಲ್ಲ. ಗಾಂಧಿಯ ನಾಡಾಗಿರುವ ಗುಜರಾತ್‌ನಲ್ಲಿ “ಅತಿಥಿ ದೇವೋ ಭವ” ಎಂಬ ಸಂಸ್ಕಾರ ಎಲ್ಲಿ ಹೋಯಿತು? ಎಂದು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಪೋಸ್ಟ್‌ಅನ್ನು ಹಂಚಿಕೊಂಡಿದ್ದಾರೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

Pat Cummins was left to celebrate alone

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಿದಾಗ, ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಜಯಗಳಿಸಿದ ನಂತರ, ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಅವರು ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಶ್ವಕಪ್ ಟ್ರೋಫಿಯನ್ನು ನೀಡುತ್ತ ಅಭಿನಂದಿಸಿದ ದೃಶ್ಯಗಳು ಲಭ್ಯವಾಗಿವೆ.

ಪಂದ್ಯದ ನಂತರ ಪ್ರಶಸ್ತಿ ಪ್ರದಾನ ಮಾಡುವ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಪ್ಯಾಟ್ ಕಮ್ಮಿನ್ಸ್‌ಗೆ ಹಸ್ತಲಾಘವ ಮಾಡಿ ಅಭಿನಂದಿಸಿದರು. ನರೇಂದ್ರ ಮೋದಿಯವರು ವಿಶ್ವಕಪ್ ಟ್ರೋಫಿಯನ್ನು ನೀಡುತ್ತಿರುವ ಸಂದರ್ಭದಲ್ಲಿ ತೆಗೆದ ಫೋಟೋಗಳನ್ನು ಹಲವಾರು ಸುದ್ದಿ ಸಂಸ್ಥೆಗಳು ಪ್ರಕಟಿಸಿವೆ.

ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರಿಗೆ ಟ್ರೋಫಿಯನ್ನು ನೀಡಿದ ನಂತರ, ನರೇಂದ್ರ ಮೋದಿ ಮತ್ತು ರಿಚರ್ಡ್ ಮಾರ್ಲ್ಸ್ ಆಸ್ಟ್ರೇಲಿಯ ತಂಡದ ಇತರೆ ಆಟಗಾರರನ್ನು ಅಭಿನಂದಿಸಲು ಮತ್ತು ಹಸ್ತಲಾಘವ ಮಾಡಲು ವೇದಿಕೆಯಿಂದ ಕೆಳಗಿಳಿದರು. ಆ ವೇಳೆ ಪ್ಯಾಟ್ ಕಮ್ಮಿನ್ಸ್ ಒಬ್ಬರೇ ವೇದಿಕೆಯಲ್ಲಿ ಟ್ರೋಫಿಯನ್ನು ಕೈಯಲ್ಲಿ ಹಿಡಿದುಕೊಂಡು ಬೇಸರಗೊಂಡವರತೆ ನಿಂತಿದ್ದರು ಎಂದು ಕೆಲವು ಕ್ರೀಡಾ ವೆಬ್ ಸೈಟ್ ಗಳು ಲೇಖನಗಳನ್ನು ಪ್ರಕಟಿಸಿದ್ದವು. ಆದರೆ, ವಿಶ್ವಕಪ್ ಟ್ರೋಫಿ ಹಸ್ತಾಂತರಿಸುವ ಸಂದರ್ಭದಲ್ಲಿ ನರೇಂದ್ರ ಮೋದಿ ಪ್ಯಾಟ್ ಕಮಿನ್ಸ್ ಅವರನ್ನು ಕಡೆಗಣಿಸಿದ್ದಾರೆ ಎಂದು ಯಾವುದೇ ಸುದ್ದಿ ಸಂಸ್ಥೆ ವರದಿ ಮಾಡಿಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತ ವಿಶ್ವಕಪ್ ಫೈನಲ್‌ನಲ್ಲಿ ಸೋತಿದಕ್ಕೆ ಪ್ರಧಾನಿ ನರೇಂದ್ರ ಮೋದಿ ಆಸೀಸ್ ನಾಯಕನನ್ನು ಅಭಿನಂದಿಸದೆ, ವೇದಿಕೆಯಿಂದ ಮುಖ ತಿರುಗಿಸಿಕೊಂಡು ಹೋಗಿದ್ದಾರೆ ಎಂದು ಎಡಿಟ್ ಮಾಡಲಾದ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಾಸ್ತವವಾಗಿ ಪ್ರಧಾನಿ ನರೇಂದ್ರ ಮೋದಿ ಆಸೀಸ್ ನಾಯಕ ಮತ್ತು ತಂಡದ ಇತರೆ ಆಟಗಾರರನ್ನು ಅಭಿನಂದಿಸಿರುವುದು ಸ್ಪಷ್ಟವಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಫ್ಯಾಕ್ಟ್‌ಲಿ

ನಿಮ್ಮ ಸುತ್ತಮುತ್ತ ಮತ್ತು  ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಸುದ್ದಿಯು ಸುಳ್ಳು ಎಂದು ನಿಮಗೆ ಸಂದೇಹ ಬಂದಿದ್ದರೆ ಅದನ್ನು Ensuddi.com ವಾಟ್ಸಾಪ್  ನಂ 9108969301 ಗೆ ತಲುಪಿಸಿ. ನಾವು ಫ್ಯಾಕ್ಟ್‌ಚೆಕ್ ಮಾಡಿ ಸತ್ಯ ನಿಮ್ಮೆದುರು ಇಡುತ್ತೇವೆ


ಇದನ್ನು ಓದಿರಿ : ಫ್ಯಾಕ್ಟ್‌ಚೆಕ್ : ಮಿಚೆಲ್ ಮಾರ್ಷ್ ಟ್ರೋಫಿ ಮೇಲೆ ಕಾಲಿಟ್ಟಿರುವ ಚಿತ್ರ ಫೇಕ್ ಅಲ್ಲ


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights