ಫ್ಯಾಕ್ಟ್‌ಚೆಕ್ : ತೆಲಂಗಾಣದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುತ್ತಿದಂತೆ ಪೊಲೀಸರು ಡ್ಯಾನ್ಸ್‌ ಮಾಡುತ್ತಿರುವ ವಿಡಿಯೋ ವೈರಲ್ ! ವಾಸ್ತವವೇನು?

ಸರ್ಕಾರಿ ಅಧಿಕಾರಿಗಳು ಯಾವುದೇ ರಾಜಕೀಯ ಪಕ್ಷದ ಬಾಲಂಗೋಚಿಗಳಾಗಿರಬಾರದು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ನಿಸ್ವಾರ್ಥ, ನಿಸ್ಪಕ್ಷಪಾತವಾಗಿ ಕೆಲಸ ಮಾಡಬೇಕು ಎಂದು ನಿಯಮಾವಳಿಗಳಿದ್ದರೂ, ಅದನ್ನು ಪಾಲಿಸುತ್ತಿದ್ದಾರೆಯೇ ಎಂದು ನೋಡಿದರೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಮಾತ್ರ ಅದನ್ನು ಅಳವಡಿಸಿಕೊಂಡು ಜನಾನುರಾಗಿಯಾಗಿ ಕಾರ್ಯ ನಿರ್ವಹಿಸುತ್ತಾರೆ.

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಅಧಿಕಾರಿಗಳು (ಖುಷಿಯಾಗಿದ್ದಾರೆ) ಕುಣಿದು ಕುಪ್ಪಳಿಸಿದ್ದಾರೆ ಎಂದು ಪ್ರತಿಪಾದಿಸಿ ಪೊಲೀಸ್ ಅಧಿಕಾರಿಗಳು ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಈ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ :

ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜಸ್‌ನಲ್ಲಿ ಸರ್ಚ್ ಮಾಡಿದಾಗ, ಈ ವಿಡಿಯೋ ಆಗಸ್ಟ್ 2023 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ. ಅಂದರೆ ತೆಲಂಗಾಣದಲ್ಲಿ ಇತ್ತೀಚೆಗೆ ನಡೆದ ವಿಧನಸಭಾ ಚುನಾವಣೆಗೂ ಮುನ್ನ ಈ ವಿಡಿಯೋ ಸೋಶಿಯಲ್ ಮೀಡಿಯಾ ಫ್ಲಾಟ್ ಫಾರ್ಮ್‌ನಲ್ಲಿ ಪ್ರಸಾರವಾಗುತ್ತಿತ್ತು.

ಆದರೂ ಮೂಲ ವಿಡಿಯೋದ ಸಂಪೂರ್ಣ ವಿವರಗಳನ್ನು ಪತ್ತೆ ಮಾಡಲಾಗಿಲ್ಲ. ಆದರೂ ಈ ವಿಡಿಯೋ ಚುನಾವಣೆಗೂ ಮುನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ‘ಪೊಲೀಸ್ ಅಧಿಕಾರಿಗಳು ಹಗಲು ರಾತ್ರಿ ಡ್ಯೂಟಿ ಮುಗಿಸಿ ಕೆಲ ಕ್ಷಣ ಡ್ಯಾನ್ಸ್ ಮಾಡಿ ಎಂಜಾಯ್ ಮಾಡುತ್ತಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದನ್ನು ಗಮನಿಸಿದ್ದೇವೆ. ಇದಲ್ಲದೆ, ವಿಡಿಯೋದಲ್ಲಿ ಕೇಳಿದ ಪಂಜಾಬಿ ಹಾಡನ್ನು ಎಡಿಟ್ ಮಾಡಿ ವೈರಲ್ ವಿಡಿಯೋದಲ್ಲಿರುವ ತೆಲುಗು ಹಾಡನ್ನು ಬಳಸಿ ಹಂಚಿಕೊಳ್ಳಲಾಗುತ್ತಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಹಳೆಯ ವಿಡಿಯೋವನ್ನು ಎಡಿಟ್ ಮಾಡಿ ಶೇರ್ ಮಾಡುವ ಮೂಲಕ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸರು ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋವನ್ನು ಎಡಿಟ್ ಮಾಡಿ ಪಂಜಾಬಿ ಹಾಡಿಗೆ  ತೆಲುಗು ಹಾಡನ್ನು ಸೇರಿಸಿ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಕೃಪೆ : ಫ್ಯಾಕ್ಟ್‌ಲಿ


ಇದನ್ನು ಓದಿರಿ: ಫ್ಯಾಕ್ಟ್‌ಚೆಕ್ : ಹಲಾಲ್ ಎಂದರೆ ಆಹಾರಕ್ಕೆ ಉಗುಳುವುದು ಎಂದು ಮುಸ್ಲಿಮರು ಹೇಳಿಲ್ಲ! ಹಾಗಿದ್ದರೆ ಈ ಪ್ರಕರಣವೇನು?


 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights